Yadagiri; ರಾಜಾ ವೆಂಕಟ್ಟಪ್ಪ ನಾಯಕರಿಗೆ ಸಕಲ ಸರ್ಕಾರಿ ಗೌರವ; ಸಿಎಂ ಸಿದ್ದರಾಮಯ್ಯ ಭಾಗಿ
Team Udayavani, Feb 26, 2024, 5:01 PM IST
ಯಾದಗಿರಿ: ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ದಿ. ರಾಜಾ ವೆಂಕಟಪ್ಪನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪಗುಚ್ಛವಿರಿಸಿ ಗೌರವ ಅರ್ಪಿಸಿದರು.
ಇದೇ ಸಂದರ್ಭದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಪೊಲೀಸ್ ಇಲಾಖೆಯ ವಾದ್ಯ ಮೇಳದಿಂದ ರಾಷ್ಟ್ರ ಗೀತೆ ನುಡಿಸಿ, ಮೂರು ಸುತ್ತು ಕುಶಾಲತೋಪು ಹಾರಿಸುವ ಮೂಲಕ ಹಾಗೂ ಎರಡು ನಿಮಿಷ ಮೌನ ಆಚರಿಸಿ ದಿ. ರಾಜಾ ವೆಂಕಟಪ್ಪನಾಯಕ ಅವರಿಗೆ ಗೌರವ ಅರ್ಪಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ, ಗ್ರಾಮೀಣಾಭಿವೃದ್ಧಿ ಪಂಚಾಯತರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ ಖರ್ಗೆ, ಯುವಸಬಲೀಕರಣ, ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ನಾಗೇಂದ್ರ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ರಾಯಚೂರ ಸಂಸದ ರಾಜಾ ಅಮರೇಶ್ವರ ನಾಯಕ, ಅಮರೇಶ ಬಯ್ಯಾಪುರ, ಎಐಸಿಸಿ ಅಧ್ಯಕ್ಷರು ಮಲ್ಲಿಕಾರ್ಜುನ ಖರ್ಗೆ, ರಾಜಾ ಕೃಷ್ಣಪ್ಪ ನಾಯಕ, ವಾಲ್ಮೀಕಿ ಶ್ರೀಗಳು, ಮಾಲರೋಜ ಮಲ್ಲಿಕಾರ್ಜುನ ಮುತ್ಯಾ, ಐಜಿ ಅಜಯ್ ಹಿಲೋರಿ, ಡಿ.ಸಿ.ಸುಶೀಲಾ. ಬಿ, ಸಿಇಓ ಗರಿಮಾ ಪನ್ವಾರ್, ಎಸ್.ಪಿ.ಸಂಗೀತಾ.ಜಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದು, ಗೌರವ ಅರ್ಪಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.