ಗ್ರಾಮಾಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ
Team Udayavani, Feb 3, 2019, 10:38 AM IST
ಹುಣಸಗಿ: ಕ್ಷೇತ್ರದಲ್ಲಿನ ಹಳ್ಳಿಗಳ ಅಭಿವೃದ್ಧಿ ಬಿಜೆಪಿ ಸರಕಾರದಿಂದ ಮಾತ್ರ ಸಾಧ್ಯ. ಆದ್ದರಿಂದ ಸುರಪುರ ಶಾಸಕ ರಾಜುಗೌಡ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಿ ಸಿಸಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದುಯುವ ಮುಖಂಡ ಹಣಮಂತನಾಯಕ (ಬಬಲುಗೌಡ) ಹೇಳಿದರು.
ಕೊಡೇಕಲ್ ಜಿಪಂ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಮಂಜೂರಾಗಿರುವ ಸಿಸಿ ರಸ್ತೆಗಳ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟಿಸಿ ಅವರು ಮಾತನಾಡಿದರು. ಕೇತ್ರದಲ್ಲಿ ವಿವಿಧ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸಿಸಿ ರಸ್ತೆ, ಒಳಚರಂಡಿ, ದೇವಸ್ಥಾನಗಳ ಜೀಣೊರ್ದ್ಧಾರ ಸೇರಿದಂತೆ ಅನೇಕ ಕಾಮಗಾರಿಗಳು ಇವೆ ಎಂದು ಹೇಳಿದರು.
ಮಾಜಿ ಸಿಎಂ ಯಡಿಯೂರಪ್ಪ ಅವರು ರೈತರು, ಬಡವರು ಹಾಗೂ ಶೋಷಿತರನ್ನು ಮೇಲೆತ್ತಲು ಹಲವಾರು ಯೋಜನೆ ಜಾರಿಗೆ ತಂದಿದ್ದಾರೆ ಎಂದು ಹೇಳಿದರು. ಮೂಲಭೂತ ಸೌಲಭ್ಯಗಳಿಂದ ವಂಚಿತ ಗ್ರಾಮಗಳಿಗೆ ಹಲವಾರು ಯೋಜನೆ ಜಾರಿಗೆ ತಂದಿರುವುದಾಗಿ ಹೇಳಿದರು.
ತಾಲೂಕಿನಾದ್ಯಂತ ಪ್ರತಿ ಗ್ರಾಮಗಳಲ್ಲಿ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿ ನಡೆಯುತ್ತಲೇ ಇದೆ. ಆಸರೆ ಮನೆ, ಕುಡಿಯುವ ನೀರು, ರಸ್ತೆ, ಹೈನುಗಾರಿಕೆ, ಪಶುಸಂಗೋಪನೆ, ರೈತರ ಸಂಕಷ್ಟ ಕಾಲದಲ್ಲಿ ನೆರವಿಗೆ ಬರುವ ಕೃಷಿಹೊಂಡ ಸೇರಿದಂತೆ ರೈತರ ಸಮಸ್ಯೆಗಳಿಗೆ ಬಿಜೆಪಿ ಸರಕಾರ ಸ್ಪಂದಿಸಿ ಸಾಕಷ್ಟು ಯೋಜನೆ ಅನುಷ್ಠಾನಗೊಳಿಸಿದೆ ಎಂದು ಹೇಳಿದರು.
ಕೊಡೇಕಲ್ ಜಿಪಂ ಕ್ಷೇತ್ರದ ಗ್ರಾಮಗಳಾದ ಮಾರನಾಳ, ಮಾವಿನಗಿಡದ ತಾಂಡಾ,ಉಪ್ಪಲದಿನ್ನಿ ಮತ್ತು ರಾಯನಪಾಳೆ ಗ್ರಾಮಗಳಲ್ಲಿ ಮಂಜೂರಾಗಿರುವ ಸಿಸಿ ರಸ್ತೆಗಳಿಗೆ ಬಬಲುಗೌಡ ಭೂಮಿಪೂಜೆ ನೆರವೇರಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಅಮರಣ್ಣ ಹುಡೇದ, ಜಿಪಂ ಸದಸ್ಯರಾದ ನಾರಾಯಣ ನಾಯ್ಕ, ತಾಪಂ ಸದಸ್ಯ ಗೌಡಪ್ಪಗೌಡ ಪೋಲಿಸ್‌ಪಾಟೀಲ, ಲೋಕಪಯೋಗಿ ಇಲಾಖೆಯ ಎಸ್.ಜಿ. ಪಾಟೀಲ, ಮಲ್ಲು ನವಲಗುಡ್ಡ, ಶಾಂತಿಲಾಲ ರಾಠೊಡ, ರಾಚಪ್ಪಗೌಡ ಪೊಲೀಸ್‌ಪಾಟೀಲ, ಗುಂಡಪ್ಪ, ಕುಮಾರೆಪ್ಪ, ಫೀರಪ್ಪ ಜಾಧವ, ವಿಠuಲ ಚವ್ಹಾಣ, ಗುರು ರಾಠೊಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.