ತರಾತುರಿಯಲ್ಲಿ ನಾಡಕಚೇರಿ ಕಟ್ಟಡ ನಿರ್ಮಾಣ!
Team Udayavani, Jan 21, 2022, 3:20 PM IST
ಗುರುಮಠಕಲ್: ಭದ್ರ ಬುನಾದಿ ಮತ್ತು ಉತ್ತಮ ಕ್ಯೂರಿಂಗ್ ನಿರ್ವಹಣೆಯಿಂದ ಗಟ್ಟಿಮುಟ್ಟಾದ ಕಟ್ಟಡ ನಿರ್ಮಾಣವಾಗುತ್ತದೆ. ಆದರೆ ಇಲ್ಲಿ ಮಾತ್ರ ತರಾತುರಿಯಲ್ಲಿ ಕ್ಯೂರಿಂಗ್ ಇಲ್ಲದೇ ನಾಡಕಚೇರಿ ನಿರ್ಮಿಸಲಾಗಿದೆ ಎಂದು ದೂರಿದ್ದಾರೆ.
ಪಟ್ಟಣದ ಸರಕಾರಿ ಆಸ್ಪತ್ರೆ ರಸ್ತೆ ಮಾರ್ಗದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ಅಂದಾಜು ವೆಚ್ಚ 18.84 ಲಕ್ಷ ರೂ.ಗಳಲ್ಲಿ ನಾಡಕಚೇರಿ ನಿರ್ಮಾಣವಾಗುತ್ತಿದೆ. ಕ್ಷೇತ್ರದ ಶಾಸಕ ನಾಗನಗೌಡ ಕಂದಕೂರ ಅವರು ಮೂರು ತಿಂಗಳ ಹಿಂದೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಅಷ್ಟು ಬೇಗ ಕಟ್ಟಡ ನಿರ್ಮಾಣ ಮಾಡಿ ಸುಣ್ಣಬಣ್ಣ ಹಚ್ಚಿದ್ದು, ಉದ್ಘಾಟನೆಗೆ ತಯಾರಾಗಿದೆ. ಇದು ಕಾಟಾಚಾರಕ್ಕೆ ನಿರ್ಮಾಣ ಮಾಡಿದಂತೆ ಆಗಿದೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀರು ಲಭ್ಯವಿಲ್ಲದ ಕಾರಣ ಟ್ಯಾಂಕರ್ ಮೂಲಕ ನೀರು ತರಿಸಿ ಮೂರು ದಿನಕ್ಕೊಮ್ಮೆ ಕ್ಯೂರಿಂಗ್ ಮಾಡುತ್ತಿದ್ದು, ಸೂಪರ್ ಸ್ಪೀಡ್‌ನಲ್ಲಿ ಕಟ್ಟಡ ನಿರ್ಮಾಣ ಮಾಡಿದ್ದಾರೆ ಎನ್ನಲಾಗುತ್ತಿದೆ. ಜನರಿಗೆ ಉಪಯೋಗವಾಗಬೇಕಿದ್ದ ಕಟ್ಟಡ ಉತ್ತಮ ರೀತಿಯಲ್ಲಿ ನಿರ್ಮಾಣ ಮಾಡುತ್ತಿರುವುದು ಯಾವ ಪುರುಷಾರ್ಥಕ್ಕೆ ಎಂದು ಜನರು ಪ್ರಶ್ನಿಸಿದ್ದಾರೆ.
ಕ್ಷೇತ್ರದ ಬಿಲ್‌ಪಾಸ್ ಮಾಡಿಕೊಳ್ಳಲು ಹಾಗೂ ಜನರಿಗೆ ಅನುಕೂಲ ಕಲ್ಪಿಸುತ್ತಿದ್ದೇವೆ ಎಂದು ನಂಬಿಸಲು ಈ ರೀತಿಯಲ್ಲಿ ಗುತ್ತಿಗೆದಾರರು ಕೆಲಸ ನಿರ್ವಹಿಸುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಇನ್ನು ಮುಂದೆಯಾದರೂ ಸಂಬಂಧಿಸಿದ ಅಧಿಕಾರಿಗಳು ಕಟ್ಟಡ ವೀಕ್ಷಣೆ ಮಾಡಿ ಉದ್ಘಾಟನೆಗೆ ಒಪ್ಪಿಗೆ ನೀಡಬೇಕು ಎಂಬುದು ಜನರ ಆಗ್ರಹ.
ಕಳಪೆ ವಸ್ತುಗಳ ಬಳಕೆ ಮತ್ತು ಕ್ಯೂರಿಂಗ್ ಇಲ್ಲದೇ ನಾಡಕಚೇರಿ ಕಟ್ಟಡ ಕೆಲವೇ ದಿನಗಳಲ್ಲಿ ನಿರ್ಮಾಣ ಮಾಡಲಾಗಿದೆ. ಅಧಿಕಾರಿಗಳ ವೀಕ್ಷಣೆಯಿಲ್ಲದೇ ತರಾತುರಿಯಲ್ಲಿ ನಿರ್ಮಾಣವಾಗಿದೆ. ಈ ಕುರಿತು ಸಂಬಂಧಿ ಸಿದ ಅಧಿಕಾರಿಗಳು ಗಮನ ಹರಿಸಬೇಕಾಗಿದೆ. -ವಿನಾಯಕರಾವ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ
ಕ್ಯೂರಿಂಗ್ ಇಲ್ಲದೇ ಯಾರದರೂ ಕಟ್ಟಡ ನಿರ್ಮಾಣ ಮಾಡಲು ಸಾಧ್ಯವೇ? ಇವೆಲ್ಲ ಸುಳ್ಳು ಆರೋಪ. ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಉತ್ತಮ ಕಟ್ಟಡ ನಿರ್ಮಾಣ ಮಾಡಲಾಗಿದೆ. -ಅಬ್ದುಲ್ ನಬಿ, ಜೆಇ, ಗುರುಮಠಕಲ್
-ಚನ್ನಕೇಶವುಲು ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು
Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು
MUST WATCH
ಹೊಸ ಸೇರ್ಪಡೆ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.