ಹಳ್ಳಿಖೇಡ(ಬಿ) ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಚಾಲನೆ
Team Udayavani, Jan 2, 2022, 3:42 PM IST
ಹುಮನಾಬಾದ: ಹಳ್ಳಿಖೇಡ (ಬಿ) ಪಟ್ಟಣದಲ್ಲಿ 4.27 ಕೋಟಿ ರೂ. ಅನುದಾನದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಾಣಗೊಳ್ಳಲ್ಲಿದ್ದು, ಮುಂದಿನ ದಿನಗಳಲ್ಲಿ ವಿವಿಧ ಆರೋಗ್ಯ ಸೌಲಭ್ಯಗಳು ಇಲ್ಲಿ ದೊರೆಯಲ್ಲಿವೆ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು.
ತಾಲೂಕಿನ ಹಳ್ಳಿಖೇಡ (ಬಿ) ಪಟ್ಟಣದಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 4.27 ಕೋಟಿ ರೂ. ಅನುದಾನದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಅವರು ಮಾತನಾಡಿದರು.
ಆಸ್ಪತ್ರೆ ಸಿಬ್ಬಂದಿ ಹಾಗೂ ವೈದ್ಯರು ಈ ಭಾಗದ ಜನರ ಆರೋಗ್ಯ ಸಮಸ್ಯೆಗಳಿಗೆ ಸ್ಪಂದಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತಾಗಬೇಕು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ, ಪುರಸಭೆ ಅಧ್ಯಕ್ಷ ಮಾಂತಯ್ನಾ ತೀರ್ಥಾ, ತಹಶೀಲ್ದಾರ್ ನಾಗಯ್ಯ ಹಿರೇಮಠ, ತಾಲೂಕು ವೈದ್ಯಾಧಿಕಾರಿ ಶಿವಕುಮಾರ ಸಿದ್ಧೇಶ್ವರ, ಜಿಪಂ ಮಾಜಿ ಉಪಾಧ್ಯಕ್ಷ ಲಕ್ಷ್ಮಣರಾವ ಬುಳ್ಳಾ, ಹಳ್ಳಿಖೇಡ (ಬಿ) ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಕಲ್ಲಪ್ಪ ಮಜಗೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಫ್ಸರಮಿಯ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಇಟಗಿ, ಶಿವರಾಜ ಗಂಗಶಟ್ಟಿ, ಲೋಕೋಪಯೋಗಿ ಇಂಜಿನಿಯರ್ ರಾಜಕುಮಾರ ಕಲಬುರಗಿ, ಕೇಶವರಾವ್ ತಳಘಟ್ಕರ್, ಡಾ| ಪ್ರಶಾಂತ ಕನಕಟ್ಟಾ, ತುಕಾರಾಮ ಸೇಡಂಕರ್, ರಾಜಕುಮಾರ ಟೇಕುರ್ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.