ಹೇಮರಡ್ಡಿ ಮಲ್ಲಮ್ಮ ಚರಿತ್ರೆ ಕೃತಿ ಲೋಕಾರ್ಪಣೆ


Team Udayavani, Aug 21, 2018, 3:40 PM IST

yad-1.jpg

ಯಾದಗಿರಿ: ಪ್ರಸಕ್ತ ದಿನಗಳಲ್ಲಿ ಯಾವುದೇ ಕ್ಷೇತ್ರದಲ್ಲಿ ತಾವು ಮಾಡಿದ ಸಾಧನೆಯೇ ಚರಿತ್ರೆ ಅಮರವಾಗಿ ಉಳಿಯಲು ಸಾಧ್ಯ ಎಂದು ಶ್ರೀಶೈಲಂನ 1008 ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದರು.

ಆಂಧ್ರ ಪ್ರದೇಶದ ಶ್ರೀಶೈಲಂನ ರಡ್ಡಿ ಚೌಲಿó ಕಲ್ಯಾಣ ಮಂಟಪದಲ್ಲಿ ಹೇಮರಡ್ಡಿ ಮಲ್ಲಮ್ಮ ಚಾರಿಟಬಲ್‌ ಚೌಲಿ ಟ್ರಸ್ಟ್‌ ಕರ್ನಾಟಕ ಹಾಗೂ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರಡ್ಡಿ ಸಮಾಜದ ಆಯೋಜಿಸಿದ್ದ ತೆಲುಗು ಅನುವಾದದ ಹೇಮರಡ್ಡಿ ಮಲ್ಲಮ್ಮ ಚರಿತ್ರೆ ಕೃತಿ ಲೋಕಾರ್ಪಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಬದುಕಿನಲ್ಲಿ ಸಾಧನೆ ಇದ್ದಲ್ಲಿ ಮಾತ್ರ ಸಮಾಜ, ಸಂಘಟನೆ ಬಲವಾಗುತ್ತದೆ.

ಈ ನಿಟ್ಟಿನಲ್ಲಿ ಮಲ್ಲಮ್ಮ ಬದುಕಿನಲ್ಲಿ ಲೌಕಿಕ ಜೀವನದ ಜೊತೆಗೆ ಆಧ್ಯಾತ್ಮಿಕ ಸಾಧನೆಯಿಂದ ಶ್ರೀಶೈಲ ಮಲ್ಲಿಕಾರ್ಜುನನ ಕೃಪೆಗೆ ಪಾತ್ರರಾಗಿ ಶ್ರೀಶೈಲಂನ ಅವಿಭಾಜ್ಯ ಅಂಗವಾಗಿ ಉಳಿದು ಎಲ್ಲರ ಮನಸ್ಸಿನಲ್ಲಿ ನೆಲೆಸಿದ್ದಾಳೆ. ಅವರ ದೇವಸ್ಥಾನವನ್ನು ಇಲ್ಲಿ ನಿರ್ಮಾಣ ಮಾಡುವ ಮೂಲಕ ಸಮಾಜದ ಮೌಲ್ಯ ಹೆಚ್ಚಿದೆ ಎಂದು ಹೇಳಿದರು. ಸಂಸದ ಜಿ.ಎಂ. ಸಿದ್ದೇಶ್ವರ್‌ ಕೃತಿ ಬಿಡುಗಡೆ
ಮಾಡಿ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ರಡ್ಡಿ ಸಮಾಜದ ಜನತೆ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿರುವ ಪರೋಪಕಾರ ಗುಣವನ್ನು ಕಂಡಿದ್ದೇನೆ.

ದಾವಣಗೇರೆಯಲ್ಲಿ ರಡ್ಡಿ ಸಮಾಜದ ವತಿಯಿಂದ ವಿದ್ಯಾರ್ಥಿಗಳಿಗಾಗಿ ನಿರ್ಮಾಣ ಮಾಡುತ್ತಿರುವ ವಸತಿ ನಿಲಯ ಕಟ್ಟಡಕ್ಕೆ 10 ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದರು. ಶಾಸಕ ನಾಗನಗೌಡ ಕಂದಕೂರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿವಶರಣೆ ಮಲ್ಲಮ್ಮಳ ಜೀವನ ಸಂದೇಶ ಮನುಕುಲಕ್ಕೆ ಮಾದರಿಯಾಗಿವೆ. ಅವರ ಆದರ್ಶ ಗುಣಗಳನ್ನು ಬದುಕಿನಲ್ಲಿ ಮೈಗೂಡಿಸಿಕೊಂಡು ಜೀವನ ನಡೆಸಿದಾಗ ಮಾತ್ರ ಸದೃಢ ಸಮಾಜ ನಿರ್ಮಾಣವಾಗುತ್ತದೆ ಎಂದು ಹೇಳಿದರು.

ಮಲ್ಲಮ್ಮ ಜೀವನ ಚರಿತ್ರೆ ಪುಸ್ತಕವನ್ನು ತೆಲುಗು ಭಾಷೆಯಲ್ಲಿ ಪ್ರಕಟ ಮಾಡಿರುವುದರಿಂದ ತೆಲಂಗಾಣ, ಆಂಧ್ರ ಪ್ರದೇಶದಲ್ಲಿ ವಾಸಿಸುತ್ತಿರುವ ಮಲ್ಲಮಳ ಅನುಯಾಯಿಗಳಿಗೆ ಅವರ ಜೀವನ, ಸಾಧನೆ ತಿಳಿಯುತ್ತದೆ ಎಂದು ತಿಳಿಸಿದರು.

ಬೀಳಗಿ ಶಾಸಕ ಮುರಗೇಶ ನಿರಾಣಿ ಮತ್ತು ಟ್ರಸ್ಟ್‌ನ ಅಧ್ಯಕ್ಷ ವೈ.ಬಿ. ಆಲೂರ ಮಾತನಾಡಿದರು. ಹೆಡಗಿಮದ್ರಾದ ಶ್ರೀಶಾಂತ ಮಲ್ಲಿಕಾರ್ಜುನ ಪಂಡಿತಾರಾಧ್ಯ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು. ಪೂಜ್ಯ ಗುರುಪಾದ ಸ್ವಾಮಿ, ಮಾಜಿ ಶಾಸಕ ಗುರುನಾಥರಡ್ಡಿ ಕೊಡಂಗಲ್‌, ಡಾ| ಶೇಖರಗೌಡ ಪಾಟೀಲ, ಶರಣಪ್ಪಗೌಡ ಮಲ್ಹಾರ, ಡಾ| ಶಿವಲಿಂಗ ಮೂರ್ತಿ, ಶಾಂತರಡ್ಡಿ ವನಕೇರಿ, ಅಕ್ಕಮಹಾದೇವಿ ಪಾಟೀಲ, ಗೌರಮ್ಮ ರಡ್ಡಿ ವಿಜಯಪುರ, ವೀರಾರಡ್ಡಿ ಬಟಗೇರಾ, ಜೋಸುಲಾ ಸದಾನಂದ ಶಾಸ್ತ್ರಿ,
ಮೋಹನಮಠ ಕಣವಿ, ಡಾ| ಬಸನಗೌಡ ಪಾಟೀಲ, ಹೇಮಂತಕುಮಾರ ಅಜ್ಜಂಪುರ ವೇದಿಕೆ ಮೇಲಿದ್ದರು. ರಡ್ಡಿ ಸಮಾಜದ ಗಣ್ಯರು, ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.