ಗ್ರಾಮದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಕವಡೆ
Team Udayavani, Jan 2, 2021, 3:36 PM IST
ಸೈದಾಪುರ: ಗ್ರಾಮೀಣ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರದಯೋಜನೆ ಜನರಿಗೆ ತಲುಪಿಸುವ ಮೂಲಕ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವೆ ಎಂದುಅಜಲಾಪುರ ಗ್ರಾಪಂ ನೂತನ ಸದಸ್ಯ ನರಸಪ್ಪ ಕವಡೆ ಹೇಳಿದರು.
ಪಟ್ಟಣದಲ್ಲಿ ಸೈದಾಪುರ ಯುವಕರ ಬಳಗದಿಂದ ಏರ್ಪಡಿಸಿದ್ದ ವಲಯದ ಗ್ರಾಪಂ ನೂತನ ಸದಸ್ಯರಿಗೆ ಸನ್ಮಾನ ಕಾರ್ಯಕ್ರದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಮ್ಮ ವ್ಯಾಪ್ತಿಗೆ ಒಳಪಡುವಪ್ರದೇಶಗಳಲ್ಲಿ ಸರ್ಕಾರದಿಂದ ಬರುವಎಲ್ಲ ಸೌಲಭ್ಯ ಒದಗಿಸುತ್ತೇವೆ. ಗ್ರಾಮವನ್ನು ಸ್ವಚ್ಛವಾಗಿಟ್ಟುಕೊಂಡರೆ ತಾಲೂಕು, ಜಿಲ್ಲೆ ಮತ್ತು ದೇಶ ಸ್ವತ್ಛವಾಗಿರಲು ಸಾಧ್ಯ. ಆದೆಸೆಯಲ್ಲಿ ನಾವು ಕಾರ್ಯ ನಿರ್ವಹಿಸುತ್ತೇವೆ. ನಮ್ಮ ಮೇಲೆ ಭರವಸೆ ಇಟ್ಟು ಮತದಾನಮಾಡಿ ಬೆಂಬಲಿಸಿದ ಮತದಾರರಿಗೆ ಹಾಗೂಗೆಲುವಿನಲ್ಲಿ ಪ್ರಯತ್ನಿಸಿದ ಎಲ್ಲರಿಗೂ ಧನ್ಯವಾದ ಎಂದರು.
ಕರ್ನಾಟಕ ಪ್ರದೇಶ ಕುರುಬ ಸಮುದಾಯದ ಉಪಾಧ್ಯಕ್ಷ ಸಿದ್ದು ಪೂಜಾರಿ ಮಾತನಾಡಿ, ನಿಮ್ಮ ಗ್ರಾಮದಲ್ಲಿ ಜನ ಸಾಮಾನ್ಯರಿಗೆ ನೆರವಾಗುವ ಉತ್ತಮ ಕೆಲಸಮಾಡಿದರೆ ಜನರು ನಿಮ್ಮನ್ನು ಮರು ಆಯ್ಕೆ ಮಾಡುತ್ತಾರೆ ಎಂದರು.
ಇದಕ್ಕೂ ಮೊದಲು ವಲಯದ ನೂತನ ಸದಸ್ಯರಾದ ರಾಕೇಶ ಕೋರೆ, ಮಾಳಪ್ಪಅರಿಕೇರಿ, ಬಸವರಾಜ ಸೈದಾಣೋರ್ ಅವರನ್ನು ಸನ್ಮಾಸಿಲಾಯಿತು.ಈ ವೇಳೆ ಪರಮೇಶ ವಾರದ, ಶಶಿಗೌಡ, ಶಿವಕುಮಾರ ಕಲಾಲ್, ಮಾಳಪ್ಪ, ರೆಡ್ಡಿಮುನಗಾಲ, ರವಿ ಸೈದಾಪುರ, ಮಹಾದೇವಮುನಗಾಲ, ಮರೆಪ್ಪ ರಾಂಪುರ,ಭೀಮಣ್ಣ ಮಡಿವಾಳ, ಮಾಳಪ್ಪ, ತೈಸೀನ್, ಇತರರಿದ್ದರು.
ಗ್ರಾಮ ವಿಕಾಸಕ್ಕೆ ಒಗ್ಗಟ್ಟಾಗಿ ದುಡಿಯೋಣ: ಚವ್ಹಾಣ :
ಯಾದಗಿರಿ: ಗ್ರಾಪಂ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗೆದ್ದವರು ಮತ್ತು ಸೋತವರು ಸಹೋದರ ಭಾವನೆಯಿಂದ ಗ್ರಾಮ ವಿಕಾಸಕ್ಕೆ ದುಡಿಯಬೇಕೆಂದು ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಹಾಗೂ ಬೀದರ-ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸಲಹೆ ನೀಡಿದರು.
ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿ ಸಿರುವ ಎಲ್ಲ ಸದಸ್ಯರಿಗೂ ಅಭಿನಂದನೆ ಸಲ್ಲಿಸಿರುವ ಅವರು, ಸಮಸ್ತಯಾದಗಿರಿ ಮಹಾಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಜಿಲ್ಲಾಡಳಿತ ಗ್ರಾಪಂ ಚುನಾವಣೆ ವ್ಯವಸ್ಥಿತವಾಗಿನಡೆಸಿದೆ. ಫಲಿತಾಂಶಕ್ಕೆ ಸಂಬಂಧಿ ಸಿದಂತೆ ಗ್ರಾಮಗಳಲ್ಲಿದ್ವೇಷ ಭಾವನೆ ತಲೆದೋರದಂತೆ ಗ್ರಾಮದ ಹಿರಿಯರು ಮುಂಜಾಗ್ರತೆ ವಹಿಸಬೇಕು. ಗೆದ್ದವರು ಮತ್ತು ಸೋತವರು ಜೊತೆಗೂಡಿ ಗ್ರಾಮದ ಅಭಿವೃದ್ಧಿಗೆ ಪ್ರಯತ್ನಿಸಬೇಕುಎಂದು ತಿಳಿಸಿದ್ದಾರೆ. ಶಾಲೆಗಳೂ ಪ್ರಾರಂಭವಾಗಿದ್ದು,ಪೋಷಕರು ಮಕ್ಕಳನ್ನು ಮುಂಜಾಗ್ರತಾ ಕ್ರಮಗಳೊಂದಿಗೆ ಶಾಲೆಗೆ ಕಳುಹಿಸಬೇಕು. ಶಿಕ್ಷಕರೂ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಸಲಹೆ ನೀಡಿದ್ದಾರೆ.
ಜಿಲ್ಲೆಯ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವೆ. ಗ್ರಾಮ ಸ್ವರಾಜ್ಯವೇ ನಮ್ಮ ಸರ್ಕಾರದ ಗುರಿ. ಅದರಂತೆ ಗ್ರಾಮಗಅಭಿವೃದ್ಧಿ ಆದ್ಯತೆಯಾಗಿ ಪರಿಗಣಿಸಿ, ನಾನಾ ಯೋಜನೆ ರೂಪಿಸಿ ಅನುಷ್ಠಾನಕ್ಕೆ ತರಲಾಗುತ್ತಿದೆ. ಗ್ರಾಪಂ ನೂತನಸದಸ್ಯರು ಸರ್ಕಾರದ ಯೋಜನೆ ಅರ್ಹರಿಗೆ ತಲುಪಿಸಲುಪ್ರಯತ್ನಿಸಬೇಕು ಎಂದು ಮನವಿ ಮಾಡಿದ್ದಾರೆ. ಕೋವಿಡ್ ಸೋಂಕು ಹರಡುವುದು ಇನ್ನೂ ನಿಂತಿಲ್ಲ. ಸರ್ಕಾರ ಕಾಲಕಾಲಕ್ಕೆ ಕೊರೊನಾ ನಿಯಂತ್ರಣಕ್ಕಾಗಿ ರೂಪಿಸಿರುವ ನಿಯಮ ಪ್ರತಿಯೊಬ್ಬರೂ ಪಾಲಿಸಬೇಕೆಂದು ಸಚಿವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?
Sagara: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪರನ್ನು ತಕ್ಷಣ ಬಂಧಿಸಿ; ಕಾಂಗ್ರೆಸ್ ಆಗ್ರಹ
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
Hosanagara: ನಗರದ ಹೋಬಳಿ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಬಿಜೆಪಿ ಪ್ರತಿಭಟನೆ
Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್; ಪ್ರವಾಸಿಗರಿಗೆ ಹೊಸ ಆಕರ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.