ತಾಂಡಾಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ದರ್ಶನಾಪುರ
Team Udayavani, Feb 16, 2019, 9:41 AM IST
ಶಹಾಪುರ: ಬಂಜಾರ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಎರಡು ಎಕರೆ ಜಮೀನು ಮಂಜೂರಾಗಿದೆ. ಈ ಮೊದಲು ಸಚಿವರಿದ್ದ ಉಮೇಶ ಜಾಧವ ಸರ್ಕಾರದಿಂದ 1 ಕೋಟಿ ರೂ. ಅನುದಾನ ಕಲ್ಪಿಸುವಲ್ಲಿ ಶ್ರಮಿಸಿದ್ದರು. ಅದರಂತೆ ಪ್ರಸ್ತುತ ಎರಡು ಎಕರೆ ಜಾಗ ಬಂಜಾರ ಸಮುದಾಯಕ್ಕೆ ದೊರೆಯಲಿದೆ. ಬರುವ ದಿನಗಳಲ್ಲಿ ಸಮುದಾಯ ಭವನ ನಿರ್ಮಾಣ ಮಾಡುವ ಕಾರ್ಯ ನೆರವೇರಲಿದೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಭರವಸೆ ನೀಡಿದರು.
ನಗರದ ಸಿಪಿಎಸ್ ಶಾಲಾ ಆವರಣದಲ್ಲಿ ತಾಲೂಕು ಆಡಳಿತ ಆಯೋಜಿಸಿದ್ದ ಸಂತ ಸೇವಾಲಾಲ್ ಮಹಾರಾಜ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬಂಜಾರ ಸಮುದಾಯ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದೇನೆ. ತಾಲೂಕಿನ ತಾಂಡಾಗಳ ಅಭಿವೃದ್ಧಿಗೆ ನಿರಂತರ ಕೆಲಸ ಕಾರ್ಯಗಳು ನಡೆದಿವೆ. ಜೊತೆಗೆ ಬಂಜಾರ ಸಮುದಾಯ ಅಭಿವೃದ್ಧಿ ಹೊಂದಬೇಕಿದೆ. ಸರ್ಕಾರ ಕಲ್ಪಿಸಿದ ಸವಲತ್ತುಗಳನ್ನು ಬಳಸಿಕೊಂಡು ಇಡೀ ಸಮುದಾಯ ಬೆಳೆಯಬೇಕಿದೆ. ಆ ನಿಟ್ಟಿನಲ್ಲಿ ಯುವಕರು ಮುಂದಾಗಬೇಕು ಎಂದರು.
ಯಾವುದೇ ಮಹಾತ್ಮರನ್ನು ಸಂತರು ಒಂದೇ ಸಮುದಾಯಕ್ಕೆ ಮೀಸಲಾಗಿರುವುದಿಲ್ಲ. ಅವರು ಇಡೀ ಸಮಾಜವನ್ನು ತಿದ್ದುವ ಕೆಲಸ ಮಾಡಿದವರು. ಲೋಕ ಒಳಿತಿಗೆ ಅವರ ಶ್ರಮ ಇರುತ್ತದೆ. ಹೀಗಾಗಿ ಬುದ್ಧ, ಬಸವ, ಅಂಬೇಡ್ಕರ್ ಮತ್ತು ಸಂತ ಸೇವಾಲಾಲ್ ಅವರು ಇಡೀ ಸಮಾಜಕ್ಕೆ ಪ್ರೇರಣಾ
ಶಕ್ತಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಸಂಗಮೇಶ ಜಿಡಗಾ, ಪೌರಾಯುಕ್ತ ಬಸವರಾಜ ಶಿವಪೂಜೆ, ಜಿಪಂ ಕಿಶನ್ ರಾಠೊಡ ಮತ್ತು ಕನ್ಯಾಕೋಳೂರ ಇದ್ದರು. ನಿವೃತ್ತ ಶಿಕ್ಷಕ ರೇಖು ಚವ್ಹಾಣ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.