Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
ಬೇರೊಂದು ವಾಹನದಲ್ಲಿ ಇದ್ದರು.. ಚಾಲಕ, ಗನ್ ಮ್ಯಾನ್ ಗೆ ಗಾಯ
Team Udayavani, Apr 29, 2024, 7:47 PM IST
ಹುಣಸಗಿ: ಶಾಸಕ ಬೈರತಿ ಬಸವರಾಜ ಅವರ ಫಾರ್ಚುನರ್ ಕಾರು ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ಸಂಜೆ 5.30 ರ ವೇಳೆಗೆ ಕಾಮನಟಗಿ ಸೀಮಾಂತರದಲ್ಲಿ ನಡೆದಿದೆ.
ಸುರಪುರ ವಿಧಾನಸಭಾ ಉಪಚುನಾವಣೆ ಹಾಗೂ ಲೋಕಸಭಾ ಚುನಾವಣೆ ಅಭ್ಯರ್ಥಿ ರಾಜುಗೌಡ ಹಾಗೂ ರಾಜಾ ಅಮರೇಶ ನಾಯಕ ಪರ ಪ್ರಚಾರಕ್ಕೆ ಬಂದಿದ್ದರು. ಆದರೆ ಶಾಸಕ ಬೈರತಿ ಬಸವರಾಜ ಅವರು ಬೇರೊಂದು ವಾಹನದಲ್ಲಿ ಇದ್ದರು ಎನ್ನಲಾಗಿದ್ದು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದ ಚಾಲಕ ಸತೀಶ್ ಹಾಗೂ ಗನ್ ಮ್ಯಾನ್ ಚಂದ್ರಶೇಖರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.
ಹುಣಸಗಿಯಿಂದ ಕಾಮನಟಗಿ ಗ್ರಾಮಕ್ಕೆ ಪ್ರಚಾರಕ್ಕೆ ತೆರಳುತ್ತಿದ್ದಾಗ ಹಿಂಬದಿಯಿಂದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದುದರಿಂದ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಂದಕಕ್ಕೆ ಉರುಳಿದೆ. ಸ್ಥಳಕ್ಕೆ ಹುಣಸಗಿ ಸಿಪಿಐ ಸಚಿನ್ ಛಲವಾದಿ, ಪಿಎಸ್ಐ ಸಂಗೀತಾ ಶಿಂಧೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್‌ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
BBK11: ಗೆಲ್ಲಲೇ ಬೇಕಾದ ಟಾಸ್ಕ್‌ನಲ್ಲಿ ಎಡವಿದ ಚೈತ್ರಾ.. ನನ್ನಿಂದ ಆಗಲ್ಲವೆಂದು ಕಣ್ಣೀರು
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
Mother: ತಾಯಿಯ ಮಡಿಲು ನೆಮ್ಮದಿಯ ನೆರಳು
Mannagudda: ಗುಜರಿ ಕಾರುಗಳ ಪಾರ್ಕಿಂಗ್; ಸಾರ್ವಜನಿಕರಿಗೆ ಸಮಸ್ಯೆ
Determination- Success: ವಿದ್ಯಾರ್ಥಿಗಳ ಯಶಸ್ಸಿನ ಮೆಟ್ಟಿಲು ದೃಢ ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.