ಜಲವಿದ್ಯುತ್ ಯೋಜನೆ ಜಾರಿಗೆ ಬಿಡಲ್ಲ
Team Udayavani, Nov 6, 2021, 12:27 PM IST
ಹಟ್ಟಿಚಿನ್ನದಗಣಿ: ಗೋಲಪಲ್ಲಿ ಬಳಿ ರಾಜ್ಯ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಜಲವಿದ್ಯುತ್ ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿಯಾಗಲು ಬಿಡುವುದಿಲ್ಲ ಎಂದು ಟಿಯುಸಿಐ ರಾಜ್ಯಾಧ್ಯಕ್ಷ ಆರ್.ಮಾನಸಯ್ಯ ಹೇಳಿದರು.
ಗೌಡೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕೃಷ್ಣಾನದಿ ತಿರುವು ಗೋಲಪಲ್ಲಿ ಜಲವಿದ್ಯುತ್ ಯೋಜನೆ ತಡೆಯೋಣ ಜನಜಾಗೃತಿ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
1200 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಕೃಷ್ಣಾ ನದಿಗೆ ಅಡ್ಡಲಾಗಿ ಗೋಡೆ ಕಟ್ಟಿ ನದಿ ನೀರನ್ನು ಗೋಲಪಲ್ಲಿ ಹಳ್ಳಕ್ಕೆ ತಿರುಗಿಸುವ ಯೋಜನೆ ಅಪಾಯಕಾರಿಯಾಗಿದೆ. ಮಳೆಗಾಲದಲ್ಲಿ ನದಿಯು ತುಂಬಿ ಹರಿಯುವುದರಿಂದ ಗೌಡೂರು, ಗೌಡೂರು ತಾಂಡ, ಹೊಸಗುಡ್ಡ, ಬಂಡೆಬಾವಿ, ಯರಜಂತಿ, ಮಾಚನೂರು, ಯಲಗಟ್ಟಾ, ತವಗ ಸೇರಿದಂತೆ 14 ಗ್ರಾಮಗಳಿಗೆ ನೀರು ನುಗ್ಗಿ ಮುಳುಗಡೆಯಾಗುತ್ತವೆ. ಈ ಭಾಗದಲ್ಲಿರುವ ಫಲವತ್ತಾದ ಭೂಮಿಯನ್ನು ರೈತರು ಕಳೆದುಕೊಳ್ಳಬೇಕಾಗುತ್ತದೆ.
ಇಡೀ ಕರ್ನಾಟಕಕ್ಕೆ ತಿಂಗಳ ಬಳಕೆಗೆ ಬೇಕಾಗಿರುವುದು 13,000 ಮೆಗಾವ್ಯಾಟ್ ವಿದ್ಯುತ್. ಈಗಾಗಲೇ ಶಕ್ತಿನಗರ 1700, ವೈಟಿಪಿಎಸ್ 1500, ಲಿಂಗನಮಕ್ಕಿ ಸೇರಿದಂತೆ ಜಲವಿದ್ಯುತ್ ಉತ್ಪಾದಕ ಘಟಕಗಳಿಂದ 3700, ಒಂದು ಟರ್ಬೈನ್‌ನಿಂದ 50 ಮೆಗಾವ್ಯಾಟ್‌ನಷ್ಟು ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಹೆಚ್ಚಿನ ವಿದ್ಯುತ್ ಉತ್ಪಾದಿಸುವ ಅವಶ್ಯಕತೆ ಇಲ್ಲ. ವಿದ್ಯುತ್ ಉತ್ಪಾದಿಸಲೇಬೇಕು ಎಂದಾದರೆ ಇನ್ನು 24 ಟರ್ಬೈನ್‌ಗಳನ್ನು ಅಳವಡಿಸಿದರೆ 1200 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು. ಅದಕ್ಕೇಕೆ 10 ಸಾವಿರ ಕೋಟಿ ಖರ್ಚು ಮಾಡಿ, 14 ಗ್ರಾಮಗಳನ್ನು ಮುಳುಗಿಸುವ ಯೋಜನೆ ಜಾರಿಗೆ ತರಬೇಕೆಂದು ಹೇಳಿದರು. ಈ ವೇಳೆ ರಾಜಾಗುರುರಾಜ ನಾಯಕ, ಚಿನ್ನಪ್ಪ ಕೊಟ್ರಿಕಿ, ಅಬ್ದುಲ್ ರಶೀದ್ ಜಮಾದಾರ, ಅಮರೇಗೌಡ, ಗುರುಸ್ವಾಮಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.