ಕನ್ನಡ ಉಳಿದರೆ ಸಂಸ್ಕೃತಿ ಉಳಿವು: ಚೌಧರಿ
Team Udayavani, Dec 2, 2018, 3:20 PM IST
ಶಹಾಪುರ: ಕನ್ನಡ ಭಾಷೆ, ಸಾಹಿತ್ಯ ಬೆಳವಣಿಗೆಗೆ ಸಾಹಿತಿಗಳ ಕೊಡುಗೆ ಅಪಾರವಾಗಿದೆ ಎಂದು ಶಿಕ್ಷಕ, ಸಾಹಿತಿ ಅಶೋಕ ಚೌಧರಿ ಹೇಳಿದರು. ತಾಲೂಕಿನ ಗೋಗಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಗೋಗಿ ವಲಯ ಕಸಾಪ ಅಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.
ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಮೂರು ನಾಲ್ಕನೇ ಶತಮಾನದಿಂದಲೇ ಕನ್ನಡ ಭಾಷೆ ಬಳಕೆಯಲ್ಲಿತ್ತು ಎಂಬುದನ್ನು ಆಗಿನ ಶಿಲಾ ಶಾಸನಗಳಿಂದ ತಿಳಿದು ಬರುತ್ತದೆ. ರಾಜಾಶ್ರಯದಿಂದ ಹಳಗನ್ನಡ ರೂಪ ತಾಳಿ ಛಂದಸ್ಸುಗಳಲ್ಲಿ ಅತ್ಯಮೂಲ್ಯ ಕಾವ್ಯಗಳು ಸೃಷ್ಠಿಯಾದವು. ನಡುಗನ್ನಡ, ಹೊಸಗನ್ನಡ ಕಾಲಘಟ್ಟದಲ್ಲಿ ಕನ್ನಡ ಭಾಷೆಯ ಉತ್ಕೃಷ್ಟ ಕೃತಿಗಳು ಹೊರಬಂದು ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ ಶ್ರೇಯಸ್ಸು ಸಾಹಿತಿಗಳಿಗೆ ಸಲ್ಲುತ್ತದೆ.
ಹೊರ ರಾಜ್ಯದವರ ಆಗಮನ, ಇಂಗ್ಲಿಷ್ ವ್ಯಾಮೋಹದಿಂದಾಗಿ ಕನ್ನಡ ಭಾಷೆ ನಿರ್ಲಕ್ಷ್ಯ ಮಾಡಲಾಗುತ್ತಿದೆ. ಕನ್ನಡಕ್ಕೆ ಕನ್ನಡದವರಿಂದಲೇ ನಿರ್ಮೋಹ ವ್ಯಕ್ತವಾಗುತ್ತಿದೆ ಎಂದು ವಿಷಾದಿಸಿದರು. ಕನ್ನಡವನ್ನು ಅನ್ನದ ಭಾಷೆಯಾಗಿ ಕಟ್ಟು ನಿಟ್ಟಾಗಿ ಜಾರಿಯಾದರೆ ಕನ್ನಡ ಉಳಿಯಲಿದೆ. ಆ ನಿಟ್ಟಿನಲ್ಲಿ ಕನ್ನಡ ಭಾಷೆ ಬಳಸುವುದು, ಉಳಿಸುವುದು ನಮ್ಮ ನಿಮ್ಮೆಲ್ಲರ ಆಶಯವಾಗಬೇಕು. ಕನ್ನಡ ರಾಜ್ಯೋತ್ಸವಗಳು ಒಂದು ದಿನಕ್ಕೆ ಮಾತ್ರ ಸೀಮಿತವಾಗಬಾರದು ನಿತ್ಯೋತ್ಸವವಾಗಬೇಕು ಎಂದು ಹೇಳಿದರು.
ಕನ್ನಡದ ಗ್ರಂಥಗಳನ್ನು ಓದುವ, ಉಚಿತವಾಗಿ ಹಂಚುವ ಕಾರ್ಯ ಕನ್ನಡದ ಮನಸ್ಸುಗಳು ಮಾಡಬೇಕು. ಆ ನಿಟ್ಟಿನಲ್ಲಿ ಬಹುಮಾನಗಳನ್ನು ವಿತರಿಸುವಾಗ ಪುಸ್ತಕ ಸಂಸ್ಕೃತಿಗೆ ಚಾಲನೆ ನೀಡಬೇಕಿದೆ. ಕನ್ನಡ ಉಳಿದರೆ, ಕನ್ನಡ ಸಂಸ್ಕೃತಿಯೂ ಉಳಿಯಲಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ನಾಡು ನುಡಿ ಸಂಸ್ಕೃತಿ ವಿಷಯದ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. ಮುಖಂಡ ದೇವಿಂದ್ರಪ್ಪ ಗೋನಾಳ ಕಾರ್ಯಕ್ರಮ ಉದ್ಘಾಟಿಸಿದರು. ಗೋಗಿ ವಲಯ ಕಸಾಪ ಅಧ್ಯಕ್ಷ ಮಲ್ಲಣ್ಣಗೌಡಪೊಲೀಸ್‌ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ಮಲ್ಲಣ್ಣ ಪರಿವಾಣ, ಎಸ್‌ಡಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಕಾಯಿ, ಚಂದ್ರಶೇಖರ ಭಾವಿ, ಭೀಮರಡ್ಡಿ ಮಲ್ಹಾರ, ಮುಖ್ಯಗುರು ಸಂಗಮೇಶ ದೇಸಾಯಿ, ಪ್ರಾಭಾರಿ ಪ್ರಾಚಾರ್ಯ ಮಹಾಂತೇಶ ಕಲಾಲ, ಗೌಡಪ್ಪಗೌಡ ಇದ್ದರು. ಶಿಕ್ಷಕರ ಸುಭಾಸ ಮಿರಗಿ ಪ್ರಾರ್ಥಿಸಿದರು. ಎಚ್.ಬಿ. ಪಾಟೀಲ ಸ್ವಾಗತಿಸಿದರು. ಜಾನರಾಜ್ ನಿರೂಪಿಸಿದರು. ಅಮರೇಶ ಪೂಜಾರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಹ್ರೈನ್ ದ್ವೀಪ ರಾಷ್ಟ್ರದಲ್ಲಿ ಕ್ರಿಕೆಟ್ ಅಬ್ಬರ-ಕ್ರಿಕೆಟ್ ಪ್ರೇಮಿಗಳ ಮೆಚ್ಚುಗೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.