ಯಾದಗಿರಿ: 5 ದಿನಗಳಿಂದ ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ
Team Udayavani, Jul 11, 2021, 4:22 PM IST
ಯಾದಗಿರಿ: ಜಿಲ್ಲೆಯ ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದ ಹೊರವಲಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ.
ಕಳೆದ ಒಂದು ತಿಂಗಳ ಹಿಂದೆಯಷ್ಟೇ ಮಂಜುಳಾ (22)ಗೆ ನೆರೆಯ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಅವರಾದಿ(ಬಿ) ಗ್ರಾಮದ ಯುವಕನೊಂದಿಗೆ ಮದುವೆಯಾಗಿತ್ತು. ಯುವತಿ ಒಂದು ವಾರದ ಹಿಂದೆ ತವರಿಗೆ ಬಂದಿದ್ದಳು, ಕೆಲದಿನಗಳಿಂದ ಯುವತಿ ಕಾಣೆಯಾಗಿದ್ದಳು ಎನ್ನಲಾಗಿದೆ.
ಇದನ್ನೂ ಓದಿ: ಶೀಲ ಶಂಕಿಸಿ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಪತಿ!
ಜು.10ರಂದು ಯುವತಿ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಯಾದಗಿರಿ ಗ್ರಾಮೀಣ ಮತ್ತು ಮಹಿಳಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.