ದುರಾಡಳಿತದಿಂದ ನಿರುದ್ಯೋಗ ಹೆಚ್ಚಳ; ಈಶ್ವರ ಖಂಡ್ರೆ

ಶಾಸಕರ ಧ್ವನಿ ಹತ್ತಿಕ್ಕಲು ಸುಳ್ಳು ಕೇಸ್‌ಗಳನ್ನು ಹಾಕುತ್ತಿದೆ

Team Udayavani, Mar 12, 2021, 6:47 PM IST

ದುರಾಡಳಿತದಿಂದ ನಿರುದ್ಯೋಗ ಹೆಚ್ಚಳ; ಈಶ್ವರ ಖಂಡ್ರೆ

ಯಾದಗಿರಿ: ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರಗಳ ದುರಾಡಳಿತದಿಂದ ನಿರುದ್ಯೋಗ ಹೆಚ್ಚಳವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರಲ್ಲಿ ಶೇ.2.2 ಮಾತ್ರ ಇದ್ದ ನಿರುದ್ಯೋಗ ಸಮಸ್ಯೆ ಇಂದು ಶೇ. 7ರಿಂದ 8ಕ್ಕೆ ಹೆಚ್ಚಳವಾಗಿದೆ. ಇದು ಜನರಿಗೆ ಮಾಡಿದ ದ್ರೋಹ. ಅಚ್ಚೇ ದಿನ್‌ ಯಾರಿಗೆ ಬಂದಿದೆ? ಎಂದು ಟೀಕಿಸಿದರು. ಸಾರ್ವಜನಿಕ ವಲಯದ ಉದ್ಯಮಗಳನ್ನು
ಕಂಪನಿಗಳ ಕೈಗೆ ಒಪ್ಪಿಸುತ್ತಿರುವ ದಪ್ಪ ಚರ್ಮದ ಸರ್ಕಾರದ ನೀತಿಯಿಂದ ಆರ್ಥಿಕತೆ ಕುಸಿದಿದೆ ಎಂದರು.

ಚುನಾವಣೆ ವೇಳೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಕೇವಲ ರಾಷ್ಟ್ರೀಯತೆ, ರಾಷ್ಟ್ರ ಪ್ರೇಮದ ಹೆಸರಿನಲ್ಲಿ ನಂಬಿಸಿ ದ್ರೋಹ ಮಾಡುತ್ತಿದೆ. ದೇಶದ
ಮುಗª ಜನತೆಯನ್ನು ಒಂದು ಅಲ್ಲ ಎರಡು ಬಾರಿ ಮೋಸ ಮಾಡಬಹುದು. ಮೂರನೇ ಬಾರಿಗೆ ಮೋಸ ಸಾಧ್ಯವಿಲ್ಲ. ಬಿಜೆಪಿಯನ್ನು ಬುಡ ಸಮೇತ ಜನರು ಕಿತ್ತು ಹಾಕುತ್ತಾರೆ ಎಂದರು. ಬಿಜೆಪಿ ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡುತ್ತಿದ್ದು, ಶಾಸಕರ ಧ್ವನಿ ಹತ್ತಿಕ್ಕಲು ಸುಳ್ಳು ಕೇಸ್‌ಗಳನ್ನು ಹಾಕುತ್ತಿದೆ ಎಂದು ದೂರಿದರು. ಯಾದಗಿರಿಯಲ್ಲಿಯೂ ಆಡಳಿತ ಪಕ್ಷದ ದೂರುಗಳನ್ನು ಅಷ್ಟೇ ಪಡೆದು ಕಿರುಕುಳ ನೀಡಲಾಗುತ್ತಿದೆ ಎಂಬ ದೂರುಗಳು ಬಂದಿದೆ. ಅಧಿಕಾರಿಗಳು ನ್ಯಾಯ ಸಮ್ಮತ, ಸಂವಿಧಾನಾತ್ಮಕವಾಗಿ ಕಾರ್ಯ ಮಾಡಬೇಕು ಎಂದು ಸಲಹೆ ನೀಡಿದರು.

ಕಾಂಗ್ರೆಸ್‌ ಜನಧ್ವನಿ ಸಮಾವೇಶವನ್ನು ಮೊದಲ ಹಂತವಾಗಿ 100 ಕಡೆ ಆಯೋಜಿಸಲಾಗುತ್ತಿದ್ದು, ಕಲ್ಯಾಣ ಕರ್ನಾಟಕದಲ್ಲಿಯೂ ರೂಪುರೇಷೆ ಸಿದ್ಧತೆ ನಡೆದಿದೆ. ಬಿಜೆಪಿ ಎಲ್ಲಾ ರಂಗಗಳಲ್ಲಿಯೂ ವಿಫಲವಾಗಿದೆ. ವಚನ ಭ್ರಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೂ ನಿರಂತರ ಅನ್ಯಾಯ ಮಾಡುತ್ತಿದ್ದು, ಸಿದ್ದರಾಮಯ್ಯರ ಅವ ಧಿಯಲ್ಲಿ 7500 ಕೋಟಿ ರೂ. ಅನುದಾನ ಬಿಡುಗಡೆ ಆಗಿದ್ದು, ಅದರಲ್ಲಿ
5000 ಕೋಟಿಯಲ್ಲಿ ಕಾಮಗಾರಿಗಳು ನಡೆದಿವೆ. ಕೆಕೆಆರ್‌ ಡಿಬಿ ಅಡಿಯಲ್ಲಿ 1136 ಕೋಟಿ ಮಾತ್ರ ಬಿಡುಗಡೆ. ಈ ಸಲದ ಕಾಮಗಾರಿಗೆ ನಯಾಪೈಸೆ ಖರ್ಚಾಗಲ್ಲ. ಈ ಹಿಂದೆ ಪ್ರಾರಂಭವಾಗಿರುವ ಕಾಮಗಾರಿಗಳನ್ನ ತಮ್ಮದು ಎಂದು ಬಿಂಬಿಸಲಾಗುತ್ತಿದೆ. ಶೇ.40ರಿಂದ 50 ಹುದ್ದೆಗಳು ಖಾಲಿ ಇವೆ. ಹೀಗದ್ದಲ್ಲಿ ಅಭಿವೃದ್ಧಿ ಹೇಗೆ ಸಾಧ್ಯವೆಂದು ದೂರಿದರು.

ಡಿಸಿಸಿ ಅಧ್ಯಕ್ಷ ಮರಿಗೌಡ ಹುಲಕಲ್‌, ಮಾಜಿ ಎಂಎಲ್‌ಸಿ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರು, ಶ್ರೀನಿವಾಸ ರೆಡ್ಡಿ ಕಂದಕೂರು, ಎ.ಸಿ. ಕಾಡೂರು, ಮಾಣಿಕರೆಡ್ಡಿ ಕುರಕುಂದಿ, ಲಾಯಕ್‌ ಹುಸೇನ್‌ ಬಾದಲ್‌, ಸುದರ್ಶನ್‌ ನಾಯಕ್‌, ಬಸು ಬಿಳಾರ, ಗಣೇಶ್‌ ದುಪ್ಪಲ್ಲಿ, ಮಹಿಪಾಲರೆಡ್ಡಿ ಪಾಟೀಲ್‌, ಹಣಮೇಗೌಡ ಮರಕಲ್‌, ಅಬ್ದುಲ್‌ ರಜಾಕ್‌, ರಾಘವೇಂದ್ರ ಮಾನಸಗಲ್‌ ಇದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.