ಶುದ್ಧ ಕುಡಿಯುವ ನೀರು ಒದಗಿಸಲು ಆಗ್ರಹಿಸಿ ಧರಣಿ
Team Udayavani, Jun 4, 2018, 12:41 PM IST
ನಾರಾಯಣಪುರ: ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಸುವಂತೆ ಕಳೆದೆರಡು ತಿಂಗಳಿನಿಂದ ಗ್ರಾಪಂ ಅಧಿಕಾರಿಗಳ ಗಮನಕ್ಕೆ ತಂದರು ಕೂಡ ಯಾವುದೇ ಕ್ರಮವಹಿಸದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಮತ್ತು ವಿವಿಧ ಸಂಘಟನೆಗಳು ಗ್ರಾಪಂ ಕಾರ್ಯಾಲಯಕ್ಕೆ ಬೀಗ ಜಡೆದು ಪ್ರತಿಭಟನೆ ನಡೆಸಿರುವ ಘಟನೆ ಜೋಗುಂಡಬಾವಿ ಗ್ರಾಮದಲ್ಲಿ ನಡೆದಿದೆ.
ಸಮೀಪದ ಜೋಗುಂಡಬಾವಿ ಗ್ರಾಮದಲ್ಲಿ ಹಲವು ವರ್ಷಗಳಿಂದ ಗ್ರಾಮದಲ್ಲಿನ ಸೇದು ಬಾವಿ ಮೂಲಕ
ನಿತ್ಯ ಸರಬರಾಜು ಆಗುವ ನಲ್ಲಿ ನೀರಿನಲ್ಲಿ ಹುಳ ಮತ್ತು ಕಲ್ಮಶ ನೀರು ಪೂರೈಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಆದ್ದರಿಂದ ಗ್ರಾಮಕ್ಕೆ ನೀರು ಪೂರೈಕೆ ಮಾಡುವ ಬಾವಿಯನ್ನು ಸ್ವಚ್ಚಗೊಳಿಸಿ ಶುದ್ಧ ಕುಡಿಯುವ ನೀರು ಪೂರೈಸಿ ಎಂದು ಅಧಿಕಾರಿಗಳಿಗೆ ಸಾಕಷ್ಟು ಸಲ ಗಮನಕ್ಕೆ ತಂದಿದ್ದೇವೆ. ಆದರೂ ಕ್ರಮ ಕೈಗೊಂಡಿಲ್ಲ. ಮನವಿಗೂ ಸ್ಪಂದಿಸದ ಗ್ರಾಪಂ ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಮೇಲಧಿಕಾರಿಗಳು ಕಠಿಣ ಕ್ರಮ
ಕೈಗೊಳ್ಳಬೇಕು ಎಂದು ಗ್ರಾಮದ ಯುವಕರುಆಗ್ರಹಿಸಿದ್ದಾರೆ.
ಈ ವೇಳೆ ಸ್ನೇಹ ಚಿರಾಯು ಸಂಘದ ಅಧ್ಯಕ್ಷ ಬಸವರಾಜ ಮಾತನಾಡಿ, ಗ್ರಾಮಕ್ಕೆ ನೀರು ಪೂರೈಕೆ ಮಾಡುವ ಬಾವಿಯಿಂದ ಸರಬರಾಜು ಮಾಡುವ ನೀರಿನಲ್ಲಿ ಸಣ್ಣ ಗಾತ್ರದ ಹುಳ ಬರುತ್ತಿವೆ. ಈ ಕುರಿತು ಹಲವು ಬಾರಿ ಗ್ರಾಪಂ ಅಧಿಕಾರಿಗಳಿಗೆ ಬಾವಿ ಸ್ವಚ್ಚಗೊಳಿಸಿ ಇಲ್ಲವೆ ಗ್ರಾಮಕ್ಕೆ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಇದರಿಂದಾಗಿ ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಭೀತಿ ಎದುರಾಗುವ ಸಾಧ್ಯತೆಗಳಿವೆ ಎಂದು ಹೇಳಿದ ಅವರು, ಗ್ರಾಮಕ್ಕೆ ಪರ್ಯಾಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಶುದ್ಧ ಕುಡಿಯುವ ನೀರಿಗಾಗಿ ಶುದ್ಧೀಕರಣ ಘಟಕವನ್ನು ಕೂಡಲೇ ಸ್ಥಾಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಗ್ರಾಪಂ ಅಧ್ಯಕ್ಷರು ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿ, ಎರಡು ದಿನಗಳಲ್ಲಿ ಸಮಸ್ಯೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ ನಂತರವೇ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಸ್ನೇಹ ಚಿರಾಯು ಸಂಘಟನೆ ಪದಾಧಿಕಾರಿಗಳು ಗ್ರಾಮದ
ಯುವಕರು, ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಇನ್ಮುಂದೆ ಶಿವಣ್ಣನಿಗೆ ಡಬಲ್ ಪವರ್ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್ ಹೀರೋ ಮಾತು
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.