ಯಾದಗಿರಿಯಲ್ಲಿ ಬಂಡವಾಳ ಹೂಡಿಕೆ ಸಮಾವೇಶಕ್ಕೆ ಒತ್ತಾಯ

ಕೇಂದ್ರಕ್ಕೆ ಹತ್ತಿರವಿರುವ ಆಶನಾಳ ಬಳಿಯ 302 ಎಕರೆ ಜಮೀನಿನಲ್ಲಿ ಸೌಕರ್ಯಗಳನ್ನು ಕಲ್ಪಿಸಬೇಕು.

Team Udayavani, Feb 20, 2021, 5:39 PM IST

Representative-image

ಯಾದಗಿರಿ: ಗಡಿ ಜಿಲ್ಲೆ ಯಾದಗಿರಿಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದು, ಬಂಡವಾಳ ಹೂಡಿಕೆದಾರರ ಸಮಾವೇಶ ಆಯೋಜಿಸಿ ಈ ಭಾಗದಲ್ಲಿ ಕೈಗಾರಿಕೆಗಳಿಗೆ ಉತ್ತೇಜನೆ ನೀಡಬೇಕು ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಕೆ.ಬಿ. ಅರಸಪ್ಪ ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣ ಮತ್ತು ಗುಡಿ ಕೈಗಾರಿಕೆಗಳು ದೇಶದ ಬೆನ್ನೆಲುಬು ಎಂದು ಹೇಳುವ ಸರ್ಕಾರ ಸೂಕ್ತ ಸೌಕರ್ಯಗಳನ್ನು ಕಲ್ಪಿಸಬೇಕು. ಉದ್ಯಮಶೀಲತೆ ತರಬೇತಿ ಮೂಲಕ ಗ್ರಾಮೀಣ ಯುವಜನರ ಉದ್ಯಮಶೀಲತಾ ಸಾಮರ್ಥ್ಯ ಹೆಚ್ಚಿಸಲು ಹಾಗೂ ತರಬೇತಿ ಪಡೆದ ನಂತರ ಉದ್ದಿಮೆಗಳನ್ನು ಪ್ರಾರಂಭಿಸಲು ನಿಯಮಗಳನ್ನು ಸಡಿಲಿಸಿ ತ್ವರಿತ ಸಾಲ ವಿತರಣಾ ವ್ಯವಸ್ಥೆಯನ್ನು ರೂಪಿಸಿ, ಜಿಲ್ಲಾ, ತಾಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ಸೂಕ್ಷ¾ ಉದ್ಯಮಗಳಿಗೆ ಮೀಸಲಾದ ಯೋಜನೆಗಳನ್ನು 2021-22ರ ಬಜೆಟ್‌ನಲ್ಲಿ ಘೋಷಿಸಲು ಒತ್ತಾಯಿಸಿದರು.

ಕೋವಿಡ್‌ ಸಂದರ್ಭದಲ್ಲಿ ಕೈಗಾರಿಕೋದ್ಯಮಿಗಳು ಸಂಕಷ್ಟದಲ್ಲಿದ್ದು ಈಗಷ್ಟೇ ಚೇತರಿಕೆ ಕಾಣುತ್ತಿದೆ. ಈ ಮಧ್ಯೆಯೇ ವಿದ್ಯುತ್‌ ದರ ಏರಿಕೆಯಿಂದ ಗಾಯದ ಮೇಲೆ ಬರೆ ಎಳೆದಂತಾಗಿದ್ದು, ಉತ್ಪನ್ನಗಳನ್ನು ನಿಲ್ಲಿಸುವಂತಾಗಿದೆ. ಹಾಗಾಗಿ 18% ಇದ್ದ ಜಿಎಸ್‌ಟಿ ತೆರಿಗೆಯನ್ನು 12%ಗೆ ಇಳಿಸಿ ಕೈಗಾರಿಕೋದ್ಯಮಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದರು.

ಜಿಲ್ಲೆಯ ಕಡೇಚೂರ-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ಮದ್ಯಮ ಮತ್ತು ಬೃಹತ್‌ ಕೈಗಾರಿಕೆಗಳ ಸ್ಥಾಪನೆಗೆ ಸೂಕ್ತವಾಗಿದ್ದು, ಸಣ್ಣ ಕೈಗಾರಿಕೆಗಳಿಗೆ ಜಿಲ್ಲಾ ಕೇಂದ್ರಕ್ಕೆ ಹತ್ತಿರವಿರುವ ಆಶನಾಳ ಬಳಿಯ 302 ಎಕರೆ ಜಮೀನಿನಲ್ಲಿ ಸೌಕರ್ಯಗಳನ್ನು ಕಲ್ಪಿಸಬೇಕು. ಹತ್ತಿರದಲ್ಲಿಯೇ ಗುಡಿ ಕೈಗಾರಿಗೆಗಳು ಆರಂಭವಾಗುವುದರಿಂದ ಸಾಕಷ್ಟು ಅನುಕೂಲವಾಗಲಿದ್ದು, ಈ ಬಗ್ಗೆ ಸಂಬಂಧಿ ಸಿ ಸಚಿವರು ಮತ್ತು ಸರ್ಕಾರದ ಗಮನ ಸೆಳೆಯಲಾಗುವುದು ಎಂದರು.

ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಎನ್‌. ಆರ್‌. ಜಗದೀಶ್‌, ಜಂಟಿ ಕಾರ್ಯದರ್ಶಿ ಚನ್ನಬಸಪ್ಪ ಹೊಂಡದಕಟ್ಟಿ, ಖಜಾಂಚಿ ಎಸ್‌. ಶಂಕರನ್‌, ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಸ್ಥೆ ಅಧ್ಯಕ್ಷ ಹನುಮದಾಸ ಮುಂದಡಾ, ಭೀಮಾಶಂಕರ ಪಾಟೀಲ, ಚನ್ನಮಲ್ಲಿಕಾರ್ಜುನ ಅಕ್ಕಿ ಇದ್ದರು.

ಟಾಪ್ ನ್ಯೂಸ್

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Mangaluru: ಡೊಂಗರಕೇರಿ ಶ್ರೀ ವೆಂಕಟರಮಣ ದೇಗುಲ: ಪುಷ್ಪಯಾಗ, ಅಷ್ಟಾವಧಾನ ಸೇವೆ ಸಂಪನ್ನ

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Theft Case ಜುವೆಲರಿಯಿಂದ ಕಳವು: ಆರೋಪಿಗಳಿಗೆ ಜೈಲು

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ

Fraud Case ಹಣ ದ್ವಿಗುಣ ಮೆಸೇಜ್‌: 7.76 ಲಕ್ಷ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು

DK-DC-Mullai-mugilan

National Highway ಕಾಮಗಾರಿ ಪರಿಶೀಲನೆ: ಮಾರ್ಚ್‌ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

Mangaluru: ಪಿಲಿಕುಳ ಆಯುಕ್ತರ ಅಧಿಕಾರ ಸ್ವೀಕಾರ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

ಕರಾವಳಿಯ ವಿವಿಧೆಡೆ ಸಂಭ್ರಮದ ವೈಕುಂಠ ಏಕಾದಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.