ಗುಡೂರು-ಜೋಳದೆಡಗಿ ಬಾಂದಾರ ಸೇತುವೆ ಕಾಮಗಾರಿ ಪರಿಶೀಲನೆ
Team Udayavani, Sep 26, 2020, 6:36 PM IST
ಸೈದಾಪುರ: ಗುಡೂರು-ಜೋಳದೆಡಗಿ ಬ್ರಿಜ್ ಕಂ ಬ್ಯಾರೇಜ್‌ಗೆ ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಭೇಟಿ ನೀಡಿ ಅಲ್ಲಿನ ಕಾಮಗಾರಿ ವೀಕ್ಷಿಸಿದರು. 18 ತಿಂಗಳಲ್ಲಿ ಮುಗಿಯಬೇಕಾದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಕೂಡಲೇ ಕಾಮಗಾರಿ ಚುರುಕುಗೊಳಿಸುವಂತೆ ಸೂಚಿಸಿದರು.
ಕಳೆದ ಬಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗೇಟ್‌ಗಳು ತೆಗೆಯದಂತಾಗಿ ನೀರು ಸರಬರಾಜು ಆಗದೆ ನದಿ ನೀರಿನ ಪ್ರಮಾಣ ಹೆಚ್ಚಾಗಿ ರಸ್ತೆ ಕೊಚ್ಚಿಕೊಂಡು ಹೋಗಿತ್ತು. ಇದರ ನಿವಾರಣೆಗಾಗಿ ಎತ್ತರ ಹೆಚ್ಚಿಸಿಕೊಂಡು ಪರ್ಯಾಯ ವ್ಯವಸ್ಥೆಯೊಂದಿಗೆ ಸೇತುವೆ ಪಕ್ಕದಲ್ಲಿ ಬಾಂದಾರ ನಿರ್ಮಿಸುತ್ತಿದ್ದು, ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚಿಸಿದರು. ವಡಗೇರಾ ಹಾಗೂ ಯಾದಗಿರಿ ತಾಲೂಕುಗಳ ಗಡಿ ಭಾಗಗಳ ಜನರಿಗೆ ಸುಲಭ ಸಂಪರ್ಕದ ಮಾರ್ಗ ಇದಾಗಿದ್ದು, ಇದಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಎಂದರು.
ಸೇತುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾದ ಕೊಂಡಾಪುರ ಹೊರವಲಯದಲ್ಲಿನ ಹಳ್ಳ ತುಂಬಿ ಹರಿದರೆ ಸೇತುವೆ ರಸ್ತೆ ಮೇಲೆ ನೀರು ಹರಿಯುವ ಬಗ್ಗೆ ಮಾಹಿತಿ ಪಡೆದು ಇದನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು. ರಾಮಸಮುಂದ್ರ ಜಿಪಂ ಸದಸ್ಯ ಅಮರದೀಪ, ಎಪಿಎಂಸಿ ಮಾಜಿ ಅಧ್ಯಕ್ಷ ಭೀಮಣ್ಣಗೌಡ ಪಾಟೀಲ ಕ್ಯಾತನಾಳ, ಜಿಪಂ ಉಪ ಕಾರ್ಯನಿರ್ವಾಹಕ ಅಧಿಕಾರಿ ಬಸವಣ್ಣಪ್ಪ ಬೋಸ್ಕೆ, ವಿಠಲ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.