ಜಮೀನಿಗೆ ನೀರು ತಲುಪದಿದ್ದರೆ ಪ್ರತಿಭಟನೆ
Team Udayavani, Nov 15, 2020, 4:26 PM IST
ಯಾದಗಿರಿ: ಬಂದಳ್ಳಿ ಗ್ರಾಮದ ರೈತರ ಜಮೀನುಗಳಿಗೆ ಜಲಾಶಯದಿಂದ ನೀರು ತಲುಪುತ್ತಿಲ್ಲ ಎಂದು ಗ್ರಾಮದ ರೈತರು ಶಾಸಕರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರ್ಯನಿರ್ವಾಹಕ ಅಭಿಯಂತರರು ಸಕಾಲಕ್ಕೆ ಸರ್ಕಾರದಿಂದ 2 ಜಲಾಶಯಗಳ ಅಭಿವೃದ್ಧಿಗೆ ಸೂಕ್ತ ಅನುದಾನ ಬಿಡುಗಡೆಯಾಗುತ್ತಿಲ್ಲ ಹಾಗಾಗಿ ಸಮಸ್ಯೆ ಉದ್ಭವಿಸಿದೆ ಎಂದು ಹೇಳುತ್ತಿದ್ದಂತೆ ಆಕ್ರೋಶಗೊಂಡ ಶಾಸಕರು ರೈತರೊಂದಿಗೆ ಕಚೇರಿ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಶನಿವಾರ ಹತ್ತಿಕುಣಿ ಜಲಾಶಯ ಆವರಣದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರಸಕ್ತ ಮುಂಗಾರು ಮಳೆ ಉತ್ತಮವಾಗಿರುವುದು ತಾಲೂಕಿನ ಹತ್ತಿಕುಣಿ ಜಲಾಶಯ ಹಾಗೂ ಸೌದಾಗರ ಜಲಾಶಯ ಭರ್ತಿಯಾಗಿದ್ದು, ರೈತರಲ್ಲಿ ಸಂತಸ ಮೂಡಿದೆ. ಆದರೆ ಉಭಯ ಜಲಾಶಯಗಳ ನಿರ್ವಹಣೆಯಲ್ಲಿ ಅಧಿಕಾರಿಗಳ ಬೇಜವಾಬ್ದಾರಿತನ ಕಂಡು ಬಂದಿದೆ. ಕೂಡಲೇ ಯಂತ್ರಗಳ ಬಳಕೆಯಿಂದ ಕಾಲುವೆಗಳಲ್ಲಿರುವ ಹೂಳು ತೆಗೆದು ನೀರು ಬಿಡಬೇಕು ಎಂದು ಗುರುಮಠಕಲ್ ಮತಕ್ಷೇತ್ರದ ಶಾಸಕ ನಾಗನಗೌಡ ಕಂದಕೂರ ಅಧಿಕಾರಿಗಳಿಗೆ ಸೂಚಿಸಿದರು.
ಅಧಿಕಾರಿಗಳು ನನ್ನ ಗಮನಕ್ಕೆ ಇಲ್ಲಿನ ಸಿಬ್ಬಂದಿ ಕೊರತೆ ಹಾಗೂ ಕಾಲುವೆಗಳ ದುರಸ್ತಿ ಕಾಮಗಾರಿ ಇನ್ನಿತರ ಸಮಸ್ಯೆಗಳನ್ನು ಸಕಾಲಕ್ಕೆ ತಂದಿಲ್ಲ. ವರ್ಷದಲ್ಲಿ ಕೆಲ ಬಾರಿ ಜಲಾಶಯಗಳಿಗೆ ಬಂದು ಹೋದರೆ ರೈತರ ವಾಸ್ತವಿಕ ಪರಿಸ್ಥಿತಿ ತಿಳಿಯುವುದು ಹೇಗೆ ಎಂದು ತರಾಟೆಗೆ ತೆಗೆದುಕೊಂಡರು.
ಈ ಹಿಂದೆ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರ ಅವಧಿಯಲ್ಲಿ 2 ಜಲಾಶಯಗಳ ಅಭಿವೃದ್ಧಿಗಾಗಿ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ 20 ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದೆ, ಆದರೆ ನಮ್ಮ ದುರ್ದೈವ ಬಿಜೆಪಿ ಪಕ್ಷದ ಮೋಸದಿಂದ ಸರ್ಕಾರ ಪತನವಾಯಿತು ಎಂದು ವಿಷಾದಿಸಿದರು. ರೈತರು ಕೂಡ ಸಹಕಾರದಿಂದ ಜಲಾಶಯದ ನೀರು ಪೋಲಾಗದಂತೆ ಎಚ್ಚರಿಕೆ ವಹಿಸಿ ತಮ್ಮ ಬೆಳೆಗೆ ಬಳಸಿಕೊಳ್ಳಬೇಕು ಎಂದು ಶಾಸಕರು ಸಲಹೆ ನೀಡಿದರು.
ಹೊನಗೇರಾ ರೈತರು ಮಾತನಾಡಿ, ದುಬಾರಿ ಬೆಲೆಯ ಶೇಂಗಾ ಬೀಜ ಖರೀದಿ ಮಾಡಿ ಬಿತ್ತನೆ ಮಾಡಿ, 1 ತಿಂಗಳು ಕಳೆದಿದೆ, ನೀರಿಲ್ಲದೆ ಬೆಳೆ ಬಾಡುತ್ತಿದೆ ಕೂಡಲೇ 4-5 ದಿನಗಳಲ್ಲಿ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಹತ್ತಿಕುಣಿ ಜಲಾಶಯದಿಂದ 15 ಉಪ ಕಾಲುವೆವರೆಗೆ ಶೇಂಗಾ ಬಿತ್ತನೆ ಮಾಡಿದ ರೈತರಿಗೆ ನೀರು ಪೂರೈಸುವುದು, 18 ಉಪ ಕಾಲುವೆವರೆಗೆ ಜೋಳ ಬಿತ್ತನೆ ಮಾಡಿದ ರೈತರಿಗೆ ನೀರು ತಲುಪಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅಧಿಕಾರಿಗಳು ಹೇಳಿದರು.
ಸೌದಾಗರ ಜಲಾಶಯ ಕುರಿತು ರೈತರೊಂದಿಗೆ ಹಾಗೂ ಅಧಿ ಕಾರಿಗಳೊಂದಿಗೆ ಚರ್ಚಿಸಿದ ಶಾಸಕರು ಕೊನೆಗೆ ಜಲಾಶಯದ 9 ಉಪ ಕಾಲುವೆವರೆಗೆ ನೀರು ಬಿಡಲು ನಿರ್ಧರಿಸಿ ಮೊದಲು ನ.22 ರಂದು ಹತ್ತಿಕುಣಿ ಜಲಾಶಯದಿಂದ ಕಾಲುವೆಗೆ ನೀರು ಬಿಡಬೇಕು. ನಂತರ ನ.28 ರಂದು ಸೌದಾಗರ ಜಲಾಶಯದಿಂದ ನೀರು ಬಿಡಲು ನಿರ್ಧರಿಸಲಾಯಿತು.
ಸಭೆಯಲ್ಲಿ ನೀರಾವರಿ ಇಲಾಖೆ ಕಾರ್ಯ ನಿರ್ವಾಹಕ ಅಭಿಯಂತರ ಸಂಗಮನಾಥ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಕೈಲಾಸ್ ಅನವಾರ್, ಇಂಜಿನಿಯರಗಳಾದ ಸಿದ್ದಾರೂಢ, ಪ್ರಭಾಕರ, ಭೀಮಣ್ಣ, ಹತ್ತಿಕುಣಿ ನೀರು ಬಳಕೆದಾರ ಸಹಕಾರ ಸಂಘ ಮಹಾ ಮಂಡಳದ ಅಧ್ಯಕ್ಷ ವೀರಭದ್ರಪ್ಪ ಯಡ್ಡಳ್ಳಿ, ಸೌದಾಗರ ಜಲಶಾಯ ನೀರು ಬಳಕೆದರ ಸಹಕಾರ ಸಂಘ ಮಹಾ ಮಂಡಳದ ಅಧ್ಯಕ್ಷ ಮಹಿಪಾಲರೆಡ್ಡಿ ಹತ್ತಿಕುಣಿ, ಅಮೀನರೆಡ್ಡಿ, ಶರಣಪ್ಪ ದುಗ್ಗಾಣಿ, ಸುಭಾಸಶ್ಚಂದ್ರ ಹೊನಗೇರಾ, ಭೊಜಣಗೌಡ ಯಡ್ಡಳ್ಳಿ, ರವಿಗೌಡ ಪಾಟೀಲ್ ಹತ್ತಿಕುಣಿ, ಚಂದ್ರಾರೆಡ್ಡಿ ದಳಪತಿ, ಲಿಂಗಾರೆಡ್ಡಿ ಯಡ್ಡಳ್ಳಿ, ಸುಭಾಶ ನಾಯಕ, ದೇವಿಂದ್ರಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.