ಕೊರೊನಾ ತಡೆಗೆ ಶ್ರಮಿಸಿ: ಪಾಟೀಲ
Team Udayavani, Apr 8, 2020, 3:33 PM IST
ಜೇವರ್ಗಿ: ಪಟ್ಟಣದ ಬಸವೇಶ್ವರ ವೃತ್ತದ ಬಳಿ ಮಂಗಳವಾರ ಕೃಷಿ ಸಚಿವ ಬಿ.ಸಿ. ಪಾಟೀಲ ಸಾರ್ವಜನಿಕರಿಗೆ ಉಚಿತ ಮಾಸ್ಕ್ ವಿತರಿಸಿದರು.
ಜೇವರ್ಗಿ: ಕೊರೊನಾ ಸಾಂಕ್ರಾಮಿಕ ರೋಗವಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಭಯಪಡದೇ ಮುಂಜಾಗ್ರತಾ ಕ್ರಮ ವಹಿಸಿ ಈ ಮಹಾಮಾರಿ ತಡೆಗಟ್ಟಲು ಶ್ರಮಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಪಟ್ಟಣದ ಬಸವೇಶ್ವರ ವೃತ್ತದ ಬಳಿ ಮಂಗಳವಾರ ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಜೇವರ್ಗಿಗೆ ಭೇಟಿ ನೀಡಿದ ಅವರು, ಬಡವರು, ರೈತರು, ಕೂಲಿ ಕಾರ್ಮಿಕರು, ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಕೊರೊನಾ ವೈರಸ್ ತಡೆಗಟ್ಟಲು ಶ್ರಮಿಸುತ್ತಿರುವ ಆರೋಗ್ಯ, ಆಶಾ- ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಿ ಮಾತನಾಡಿದರು.
ಕೊರೊನಾ ಮಹಾಮಾರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಮದ್ದು. ಇದು ಸಾಂಕ್ರಾಮಿಕ ರೋಗವಾಗಿದ್ದು, ಯಾರೊಬ್ಬರೂ ಮನೆಯಿಂದ ಹೊರಬರಬಾರದು. ಸರ್ಕಾರದ ಆದೇಶ ಪಾಲಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿಪಂ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಜ ಪಾಟೀಲ ರದ್ಧೇವಾಡಗಿ, ರಮೇಶಬಾಬು ವಕೀಲ, ಸಾಯಬಣ್ಣ ದೊಡ್ಡಮನಿ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಭೀಮರಾವ್ ಗುಜಗೊಂಡ, ಬಸವರಾಜ ಸಾಸಾಬಾಳ, ಸಂಗನಗೌಡ ರದ್ಧೇವಾಡಗಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.