ಹೇಮರಡ್ಡಿ ಮಲ್ಲಮ್ಮ ಸರ್ವರಿಗೂ ದಾರಿದೀಪ
ಪರೋಪಕಾರಿಯಾಗಿ ಜೀವನ ನಡೆಸಿತಾಯಿ ಮಕ್ಕಳಿಗೆ ಉತ್ತಮ ಸಂಸ್ಕೃತಿ ಕಲಿಸಲಿ
Team Udayavani, Mar 15, 2020, 6:52 PM IST
ಕಲಬುರಗಿ: ಹೇಮರಡ್ಡಿ ಮಲ್ಲಮ್ಮ ಅವರ ಇಡೀ ಜೀವನವೇ ಉತ್ತಮ ಸಂದೇಶವಾಗಿದೆ. ಬದುಕಿನುದ್ದಕ್ಕೂ ಅನೇಕ ಸವಾಲುಗಳನ್ನು ಎದುರಿಸಿ ಮಾದರಿಯಾಗಿರುವ ಶರಣೆ ಹೇಮರಡ್ಡಿ ಮಲ್ಲಮ್ಮ ತಾಯಿಯವರು ಎಲ್ಲರಿಗೂ ದಾರಿದೀಪವಾಗಿದ್ದಾರೆ ಎಂದು ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಹೇಳಿದರು.
ತಾಲೂಕಿನ ಕುಮಸಿವಾಡಿ ಗ್ರಾಮದ ಸಿದ್ಧಬಸವೇಶ್ವರರ 24ನೇ ಜಾತ್ರಾ ಮಹೋತ್ಸವ ನಿಮಿತ್ತ ನಡೆದ ಹೇಮರಡ್ಡಿ ಮಲ್ಲಮ್ಮ ತಾಯಿ ಮಹಾ ಪುರಾಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಆಧುನಿಕತೆ ಅಬ್ಬರದ ನಡುವೆ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಜಾತ್ರೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಸಂತಸ ವೃದ್ಧಿಸಿ, ಸಂಸ್ಕೃತಿ ಉಳಿಸುವಲ್ಲಿ ಸಹಕಾರಿಯಾಗುತ್ತವೆ ಎಂದರು.
ಬಿಜೆಪಿ ಯುವ ಮುಖಂಡ ವೀರೇಶ ಬಿರಾದಾರ ಉಪಳಾಂವ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಅಪಾರ ಸಂಖ್ಯೆಯಲ್ಲಿ ಯುವಕರು ನಾನಾ ರೀತಿಯ ದುಶ್ಚಟಗಳಿಗೆ ಮಾರು ಹೋಗಿ ತಮ್ಮ ಅಮೂಲ್ಯ ಜೀವನವನ್ನು ನಾಶಪಡಿಸಿಕೊಳ್ಳುತ್ತಿದ್ದು, ಅಂಥ ಯುವಕರಿಗೆ ತಿಳಿವಳಿಕೆ ನೀಡುವ ಮೂಲಕ ಅವರನ್ನು ಮತ್ತೆ ಸರಿದಾರಿಗೆ ಕರೆತರುವ ಅಗತ್ಯವಿದೆ. ಒಳ್ಳೆಯ ಮಾರ್ಗದಲ್ಲಿ ಮುನ್ನಡೆದರೆ ಜೀವನ ಅರ್ಥಪೂರ್ಣ ಎನಿಸಲಿದೆ. ಗಳಿಸಿದ್ದನ್ನು ಹಿತಮಿತವಾಗಿ ಬಳಸಿಕೊಂಡು ಪರೋಪಕಾರಿಯಾಗಿ ಸಂತೋಷ,
ನೆಮ್ಮದಿಯ ಜೀವನ ನಡೆಸಲು ಮುಂದಾಗಬೇಕಿದೆ ಎಂದರು.
ಮಕ್ತಂಪುರದ ಗುರುಬಸವ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿ, ಚಂಚಲ ಮನಸ್ಸಿನ ಮೇಲೆ ಹತೋಟಿ ಸಾಧಿಸಿ ಧರ್ಮ ಮಾರ್ಗದಲ್ಲಿ ಮುನ್ನಡೆಯುವ ಮೂಲಕ ಸಚ್ಚಾರಿತ್ರ್ಯದ ಜೀವನ ಸಾಗಿಸುವಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕಿದೆ. ತಾಯಿಯಾದವಳು ಮಕ್ಕಳಿಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ನೀಡುವಲ್ಲಿ ಕಾಳಜಿ ನೀಡಬೇಕಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಪಾಶ್ಚಿಮಾತ್ಯ ಸಂಸ್ಕೃತಿಯತ್ತ ಹೆಚ್ಚಾಗಿ ವಾಲುತ್ತಿರುವುದು ದೇಶದ ಸಂಸ್ಕೃತಿ ನಾಶವಾಗಲು ಕಾರಣವಾಗುತ್ತಿದೆ ಎಂದು ಹೇಳಿದರು.
ಕುಮಸಿವಾಡಿ ಸಿದ್ಧಶರಣಗಿರಿ ವಿರಕ್ತ ಮಠದ ಬಾಲ ಶಿವಯೋಗಿ ಚನ್ನವೀರ ಸ್ವಾಮೀಜಿ ಸಮಾರಂಭದ ನೇತೃತ್ವ ವಹಿಸಿದ್ದರು. ಸಂತೋಷ ಪಾಟೀಲ ಹರಸೂರ, ಶಫೀಕ್ ಪಾಶುಮಿಯಾ, ಮಹಾದೇವ ಬಡಾ, ಹಣಮಂತರಾಯ ಅಟ್ಟೂರ, ಮಲ್ಲಿನಾಥ ಎ. ರಾಜೇಶ್ವರ ಕುಮಸಿ, ಪ್ರವಚನಕಾರ ಶಿವಕುಮಾರ ಶಾಸ್ತ್ರಿಗಳು ಹಿರೇಮಠ ಧುತ್ತರಗಾಂವ, ಸಂಗೀತ ಕಲಾವಿದರಾದ ಸಿದ್ಧರಾಮ ಯಡ್ರಾಮಿ ನೆಲೋಗಿ, ರವಿಕುಮಾರ ವಿಭೂತಿ ಮೊರಟಗಿ, ರಾಜು ಹೆಬ್ಟಾಳ, ಮಹೇಶ ತೆಲಾಕುಣಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.