ಬಸವ ಜಯಂತಿ-ರಂಜಾನ್ ಸರಳವಾಗಿ ಆಚರಿಸಿ
Team Udayavani, Apr 24, 2020, 3:54 PM IST
ಕಾಳಗಿ: ಶಾಂತಿಸಭೆಯಲ್ಲಿ ತಹಶೀಲ್ದಾರ್ ನೀಲಪ್ರಭ ಬಬಲಾದ ಮಾತನಾಡಿದರು.
ಕಾಳಗಿ: ಏ.25ರಿಂದ ಆರಂಭವಾಗಲಿರುವ ರಂಜಾನ್ ಹಾಗೂ 26 ರಂದು ಜರುಗುವ ಬಸವ ಜಯಂತಿ ಹಬ್ಬಗಳನ್ನು ಹಿಂದು-ಮುಸ್ಲಿಂ ಬಾಂಧವರು ಅತ್ಯಂತ ಸರಳವಾಗಿ ಆಚರಿಸಿ ತಾಲೂಕು ಆಡಳಿತಕ್ಕೆ ಸಹಕಾರ ನೀಡಬೇಕು ಎಂದು ತಹಶೀಲ್ದಾರ್ ನೀಲಪ್ರಭ ಬಬಲಾದ ಹೇಳಿದರು.
ಪಟ್ಟಣದಲ್ಲಿ ನಡೆದ ಹಮ್ಮಿಕೊಂಡ ಬಸವ ಜಯಂತಿ, ರಂಜಾನ್ ಹಬ್ಬದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಶ್ವವನ್ನು ಹೆಮ್ಮಾರಿಯಂತೆ ಕಾಡುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸುವುದಕ್ಕಾಗಿ ಸಾಮಾಜಿಕ ಅಂತರ ಕಾಪಾಡುವುದು ಅನಿವಾರ್ಯವಾಗಿದೆ. ಸರ್ಕಾರ ಎಲ್ಲ ಧಾರ್ಮಿಕ ಆಚರಣೆಗಳನ್ನೂ ಸಾಮೂಹಿಕವಾಗಿ ಆಚರಿಸುವುದಕ್ಕೆ ನಿಷೇಧ ಹೇರಿದೆ. ಹೀಗಾಗಿ ಇದನ್ನು ಅರ್ಥ ಮಾಡಿಕೊಂಡು ಮುಸ್ಲಿಂ ಬಾಂಧವರು ಮನೆಯಲ್ಲೆ ಇದ್ದು ತಮ್ಮ ಪ್ರಾರ್ಥನೆ ಮಾಡಬೇಕು. ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ. ಯಾರೊಬ್ಬರು ಮಸೀದಿಗೆ ಹೋಗಬಾರದು ಎಂದರು.
ಡಿವೈಎಸ್‌ಪಿ ವೆಂಕನಗೌಡ ಪಾಟೀಲ ಮಾತನಾಡಿ, ಜನಹಿತಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ನಿಯಮಗಳನ್ನು ಪ್ರತಿಯೊಬ್ಬರೂ ಚಾಚು ತಪ್ಪದೇ ಪಾಲಿಸಬೇಕು ಎಂದು ಹೇಳಿದರು. ನಿಯಮ ಉಲ್ಲಂಘಿಸಿ 3-4 ಜನಕ್ಕಿಂತ ಹೆಚ್ಚು ಜನ ಗುಂಪುಗೂಡಿದ್ದು ಕಂಡುಬಂದರೆ ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸುವುದು ಅನಿವಾರ್ಯ ಎಂದರು.
ಪಪಂ ಮುಖ್ಯಾಧಿಕಾರಿ ವೆಂಕಟೇಶ ತೆಲಾಂಗ್ ಮಾತನಾಡಿದರು. ಸಿಪಿಐ ಭೋಜರಾಜ ರಾಠೊಡ್, ಪಿಎಸ್‌ಐ ಬಸವರಾಜ ಚಿತಕೋಟಿ, ಮುಖಂಡರಾದ ಚಂದ್ರಕಾಂತ ವನಮಾಲಿ, ಶಿವಶರಣಪ್ಪ ಬಡಿಗೇರ, ರವಿದಾಸ ಪತಂಗೆ, ಚಂದ್ರಕಾಂತ ಜಾಧವ್, ಗುಡೂಸಾಬ್ ಕಮಲಾಪುರ, ಶಿವಶರಣಪ್ಪ ಕಮಲಾಪುರ, ರಾಘವೇಂದ್ರ ಗುತ್ತೇದಾರ, ಸೋಮಶೇಖರ ಮಾಕಪನೋರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.