ಎಲ್ಲ ಸಮಸ್ಯೆಗೂ ಆತ್ಮನಿರ್ಭರ ಭಾರತ ಉತ್ತರ
Team Udayavani, Sep 18, 2020, 7:28 PM IST
ಯಾದಗಿರಿ: ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ “ಆತ್ಮ ನಿರ್ಭರ ಭಾರತವೇ’ ನಮ್ಮೆಲ್ಲ ಸಮಸ್ಯೆಗಳಿಗೆ ಉತ್ತರವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಹೇಳಿದರು.
ಜಿಲ್ಲಾಡಳಿತದಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಸದಾ ಸಿದ್ಧ ಹಾಗೂ ಬದ್ಧವಾಗಿದೆ ಎಂದರು.
ಈ ಭಾಗದಲ್ಲಿ ಮೊದಲು ಬಡತನ, ಅನಕ್ಷರತೆ, ನಿರುದ್ಯೋಗ ಸಮಸ್ಯೆ, ಅನ್ಯಾಯ-ಶೋಷಣೆಗಳಿಂದ ವಿಮೋಚನೆ ಆಗಬೇಕಿದೆ. ಅದಕ್ಕೆ ಅಪಾರ ಇಚ್ಛಾಶಕ್ತಿ ಅಗತ್ಯವಿದ್ದು ಇದು ಆತ್ಮನಿರ್ಭರ್ ಭಾರತದಿಂದ ಸಾಧ್ಯ ಎಂದರು.
ಇಲ್ಲಿನ ಸಮಸ್ಯೆಗಳಿಗೆ ಪರಿಹಾರ ನಮ್ಮ-ನಿಮ್ಮ ಕೈಯಲ್ಲಿದೆ. ನಮ್ಮ ಊರು, ಜಿಲ್ಲೆ, ರಾಜ್ಯ, ರಾಷ್ಟ್ರದ ಭವಿಷ್ಯ ನಮ್ಮ ಕೈಯಲ್ಲಿದೆ. ಮುಂದಿನ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ವೇಳೆಗೆ ಯಾದಗಿರಿಯ ಅಭಿವೃದ್ಧಿ ಕರ್ನಾಟಕದ ಅಭಿವೃದ್ಧಿಯ ಕಥೆ ಹೇಳುವಂತೆ ಆಗಬೇಕು. ಅದಕ್ಕೆ ನಾವು ಕಂಕಣ ತೊಡಬೇಕಿದೆ ಎಂದು ಕರೆ ನೀಡಿದರು.
ಸ್ವಾಮಿ ರಮಾನಂದರು, ಸರ್ದಾರ್ ವಲ್ಲಭಭಾಯಿ ಪಟೇಲರು ಹಾಗೂ ಕೆ.ಎಂ. ಮುನ್ಷಿಅವರು ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನದ ಹಿಂದಿರುವ ಮೂರು ಶಕ್ತಿಗಳು. ಕಲ್ಯಾಣ ಕರ್ನಾಟಕದ ರಚನೆಯಲ್ಲಿ ಇವರ ಪಾತ್ರ ಅನನ್ಯ. ಸರ್ದಾರ್ ಶರಣಗೌಡ ಇನಾಮದಾರ, ವಿದ್ಯಾಧರ್ ಗುರೂಜಿ, ಪಂಡಿತ್ ತಾರಾನಾಥ ಹಾಗೂಕುಸುಮಾಕರ ದೇಸಾಯಿ ಹೀಗೆ ಸಾವಿರಾರು ಸ್ವತಂತ್ರ ಸೇನಾನಿಗಳ, ಯುವಕರ, ತಾಯಂದಿರ ತ್ಯಾಗ- ಬಲಿದಾನಗಳನ್ನು ಸ್ಮರಿಸಿದರು.
ಡಾ| ನಂಜುಂಡಪ್ಪ ವರದಿ, ಮಾನವ ಅಭಿವೃದ್ಧಿ ಸೂಚ್ಯಂಕದಲ್ಲಿ ಯಾದಗಿರಿ ಅತಿ ಹಿಂದುಳಿದ ಭಾಗಗಳಲ್ಲಿ ಒಂದಾಗಿದೆ. ಆರ್ಥಿಕಸಮೀಕ್ಷೆಗಳಲ್ಲಿ ಯಾದಗಿರಿಯ ಸ್ಥಾನ 29, 30ನೇ ಸ್ಥಾನದಲ್ಲಿದೆ. ಇದನ್ನ ಉತ್ತಮ ಪಡಿಸಬೇಕಿದೆ. ಐಐಟಿ, ಐಐಎಸ್ಸಿ ಯಂತಹ ಉತ್ತಮ ಶಿಕ್ಷಣಸಂಸ್ಥೆಗಳು, ಕೈಗಾರಿಕೋದ್ಯಮಗಳನ್ನು ಈ ಭಾಗಕ್ಕೆ ತರಬೇಕಿದೆ ಎಂದರು.
ಕಲ್ಯಾಣ ಕರ್ನಾಟಕಕ್ಕೆ ಕಲಂ 371ಎ ಪ್ರಕಾರ ಕಾರ್ಯಕ್ರಮ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳು ಪ್ರತ್ಯೇಕ ಸಚಿವಾಲಯ ಸ್ಥಾಪನೆ ಘೋಷಣೆಮಾಡಿದ್ದಾರೆ. ಈ ಭಾಗದ ಸರ್ವತೋಮುಖ ಬೆಳವಣಿಗೆಗೆ ಸುಮಾರು 7000 ಕೋಟಿ ರೂ. ಅಗತ್ಯವಿದ್ದು, ಹಂತ ಹಂತವಾಗಿ ನಮ್ಮ ಮುಖ್ಯಮಂತ್ರಿಗಳು ಕಾರ್ಯಕ್ರಮ ರೂಪಿಸುತ್ತಿದ್ದಾರೆ ಎಂದರು.
ಶಾಸಕ ವೆಂಕಟರಡ್ಡಿಗೌಡ ಮುದ್ನಾಳ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷಬಸನಗೌಡ ಪಾಟೀಲ ಯಡಿಯಾಪುರ, ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್., ಜಿಪಂ ಸಿಇಒ ಶಿಲ್ಪಾ ಶರ್ಮಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.