ಕೋಲಭಾವಿಯಲ್ಲಿ ಸ್ವಚ್ಛತೆ ಮರೀಚಿಕೆ
Team Udayavani, Dec 21, 2019, 1:31 PM IST
ಗುರುಮಠಕಲ್: ಪಟ್ಟಣದ ಕೋಲಭಾವಿ ಬಡವಣೆಯಲ್ಲಿ ಸ್ವಚ್ಛತೆ ಮೊದಲಿನಿಂದಲೂ ಮರೀಚಿಕೆಯಾಗಿದೆ. ಎಲ್ಲೆಂದರಲ್ಲಿ ಕಸದ ರಾಶಿಗಳು ಸದಾ ಗೋಚರಿಸುತ್ತವೆ. ಇನ್ನೊಂದೆಡೆ ಚರಂಡಿಯುದ್ದಕ್ಕೂ ಮಡುಗಟ್ಟಿ ನಿಂತ ತ್ಯಾಜ್ಯ ನೀರಿನ ದರ್ಶನವಾಗುತ್ತದೆ.
ಪಟ್ಟಣದ 11ನೇ ವಾರ್ಡ್ ಕೋಲಭಾವಿ ಬಡವಣೆ ಮುಖ್ಯರಸ್ತೆ ಪಕ್ಕದಲ್ಲಿರುವ ಚರಂಡಿಗಳೆಲ್ಲ ಹೂಳು ತುಂಬಿ ತ್ಯಾಜ್ಯ ನೀರು ಮುಂದೆ ಸಾಗದಷ್ಟು ಕೆಟ್ಟ ಪರಿಸ್ಥಿತಿಗೆ ತಲುಪಿದೆ. ವಿವಿಧ ಮಳಿಗೆಗಳವರು ನಿತ್ಯ ಸುರಿಯುವ ತ್ಯಾಜ್ಯ ರಾಶಿ, ರಾಶಿಯಾಗಿ ಸಂಗ್ರಹವಾಗುತ್ತಿದೆ. ಅದನ್ನು ನಿಯಮಿತವಾಗಿ ವಿಲೇವಾರಿ ಮಾಡುತ್ತಿಲ್ಲ. ಇಲ್ಲಿನ ಅವ್ಯವಸ್ಥೆ ಕಂಡು ಮೂಗು ಮುಚ್ಚಿಕೊಂಡು ಸಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ಬೀದಿನಾಯಿಗಳು, ಹಂದಿಗಳು ಆಹಾರದ ಆಸೆಗೆ ಕಸದ ರಾಶಿಗಳನ್ನು ಚೆಲ್ಲಾಪಿಲ್ಲಿ ಮಾಡುತ್ತಿವೆ. ಇದರಿಂದಾಗಿ ಪಟ್ಟಣದಲ್ಲಿ ಮತ್ತಷ್ಟು ಗಲೀಜು ನಿರ್ಮಾಣವಾಗುತ್ತಿದೆ. ಇದೆಲ್ಲದರ ಪರಿಣಾಮ ಪಟ್ಟಣದ ಸೌಂದರ್ಯಕ್ಕೆ ಕುಂದುಂಟಾಗುತ್ತಿದೆ. ಆದರೆ ಮೊದಲಿನಿಂದಲೂ ಸ್ವತ್ಛತೆ ಕಾಣದೆ ಎಲ್ಲೆಂದರಲ್ಲಿ ಗಲೀಜು ತುಂಬಿಕೊಂಡಿರುವ ವಾರ್ಡ್‌ಗಳನ್ನು ಸ್ವಚ್ಛಗೊಳಿಸುವ ಕೆಲಸಕ್ಕೆ ಸಂಬಂಧಿಸಿವರು ಮುಂದಾಗಿಲ್ಲ. ಇನ್ನಾದರೂ ಸ್ವಚ್ಛತೆ ಆದ್ಯತೆ ನೀಡಬೇಕು ಎಂಬುದು ಸಾರ್ವಜನಿಕರ ಆಗ್ರಹ.
ಚೌಡಮ್ಮ ಗುಡಿಯಿಂದ ಆರ್ಯ ಸಮಾಜದ ಶಾಲೆ ವರೆಗೆ ಸಿಸಿ ರಸ್ತೆ ಮತ್ತು ಚರಂಡಿ ಕಾಮಾಗಾರಿಯನ್ನು ಶಾಸಕರ ಅನುದಾನದ 40 ಲಕ್ಷ ರೂ. ವೆಚ್ಚದಲ್ಲಿ ಶೀಘ್ರದಲ್ಲಿ ಪ್ರಾರಂಭಿಸಲಾಗುತ್ತದೆ. –ಜಯಶ್ರೀ, ಪುರಸಭೆ ಸದಸ್ಯೆ ಗುರುಮಠಕಲ್
-ಚೆನ್ನಕೇಶವುಲು ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.