ಸರ್ಕಾರಿ ನೌಕರರಿಗೆ 4ನೇ ಶನಿವಾರವೂ ರಜೆ ನೀಡಿ
Team Udayavani, May 1, 2018, 3:48 PM IST
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಆರನೇ ರಾಜ್ಯ ವೇತನ ಆಯೋಗ ತನ್ನ ಅಂತಿಮ ವರದಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ತಿಂಗಳ ನಾಲ್ಕನೇ ಶನಿವಾರವೂ ರಜೆ ನೀಡುವಂತೆ ಶಿಫಾರಸು ಮಾಡಿದೆ.
ವೇತನ ಆಯೋಗದ ಅಧ್ಯಕ್ಷ ಎಂ.ಆರ್. ಶ್ರೀನಿವಾಸಮೂರ್ತಿ ಮತ್ತು ಸದಸ್ಯರು ಸೋಮವಾರ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರಿಗೆ ಸುಮಾರು 500 ಪುಟಗಳ ಅಂತಿಮ ವರದಿ ಸಲ್ಲಿಸಿದೆ. ಆದರೆ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ವರದಿಯ ಅಂಶಗಳನ್ನು ಬಹಿರಂಗಪಡಿಸಲು ಆಯೋಗ ಮತ್ತು ಸರ್ಕಾರ ನಿರಾಕರಿಸಿದೆ.
ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ವೇತನ ಮತ್ತು ಪಿಂಚಣಿಗಳನ್ನು ಪರಿಷ್ಕರಿಸುವ ಕುರಿತು ಆಯೋಗ ಜ.31ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದ್ದು, ಶೇ. 30ರಷ್ಟು ವೇತನ ಪರಿಷ್ಕರಣೆಗೆ ಸೂಚಿಸಿತ್ತು. ಅದರಂತೆ ಸರ್ಕಾರ ಕ್ರಮ ಕೈಗೊಂಡಿದೆ. ಇದೀಗ ಆಯೋಗದ ಅವಧಿ ಸೋಮವಾರಕ್ಕೆ ಕೊನೆಗೊಳ್ಳುತ್ತಿರುವುದರಿಂದ ತನ್ನ ಅಂತಿಮ ವರದಿ ಸಲ್ಲಿಸಿದ್ದು, ಕೆಲವು ಇಲಾಖೆಗಳಲ್ಲಿ ವೇತನ ನಿಗದಿ ಕುರಿತಂತೆ ಇರುವ ವ್ಯತ್ಯಾಸ, ಒಂದೇ ಹುದ್ದೆಯಲ್ಲಿರುವ ನೌಕರರ ಮಧ್ಯೆ ಇರುವ ವೇತನ ಅಸಮಾನತೆ ನಿವಾರಣೆ, ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಹಲವು ಶಿಫಾರಸುಗಳನ್ನು ಮಾಡಿದೆ.
ಹಿರಿಯ ನೌಕರರಿಗೆ ವೇತನ ಬಡ್ತಿ ಮತ್ತು ಫಿಟ್ ಮೆಂಟ್ ಕಡ್ಡಾಯವಾಗಿ ನೀಡಬೇಕು. ರಾಜ್ಯ ಸರಕಾರಿ ನೌಕರರಿಗೆ ಉಚಿತ ಆರೋಗ್ಯ ಭದ್ರತೆ ಒದಗಿಸುವ ‘ಜ್ಯೋತಿ ಸಂಜೀವಿನಿ’ (ನಗದು ರಹಿತ ಚಿಕಿತ್ಸಾ ಸೌಲಭ್ಯ) ಅನುದಾನಿತ ಸಂಸ್ಥೆಗಳ ನೌಕರರಿಗೂ ನೀಡಬೇಕು ಮತ್ತು ಎಲ್ಲಾ ಕಾಯಿಲೆಗಳಿಗೂ ಅನ್ವಯ ಮಾಡಬೇಕು. ಸ್ವಯಂ ನಿವೃತ್ತಿ ಪಡೆಯಲು ಇರುವ ಗರಿಷ್ಠ ಸೇವಾವಧಿಯನ್ನು 33 ವರ್ಷದಿಂದ 30 ವರ್ಷಕ್ಕೆ ಇಳಿಸಬೇಕು ಎಂದು ಆಯೋಗ ತನ್ನ ಶಿಫಾರಸಿನಲ್ಲಿ ಹೇಳಿದೆ ಎಂದು ತಿಳಿದುಬಂದಿದೆ.
ನೌಕರರ ವೇತನದಲ್ಲಿ ಅಸಮಾನತೆ ಹೋಗಲಾಡಿಸಲು ಕೆಲ ಭತ್ಯೆಗಳನ್ನು ನೀಡುವಂತೆ ಮತ್ತು ತರ್ಕಬದ್ಧವಾಗಿ ವೇತನ ನಿಗದಿಪಡಿಸಬೇಕು ಎಂದು ಹೇಳಿದೆ. ಅಲ್ಲದೆ, ವೇತನ ಬಡ್ತಿ ನೀಡುವ ಸಂದರ್ಭದಲ್ಲಿ ನೌಕರರ ಕಾರ್ಯಕ್ಷಮತೆ ಪರಿಗಣಿಸಬೇಕು. ಈ ಮೂಲಕ ಸರ್ಕಾರಿ ನೌಕರರಲ್ಲೇ ಸ್ಪರ್ಧಾತ್ಮಕ ಮನೋಭಾವ ಬೆಳೆಯಲು ಅವಕಾಶ ಕಲ್ಪಿಸಬೇಕು. ಇದರಿಂದ ಅವರ ಕಾರ್ಯಕ್ಷಮತೆ ಸುಧಾರಣೆಯಾಗಿ ಕೆಲಸಗಳು ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ನಡೆಯಲು ಸಾಧ್ಯವಾಗುತ್ತದೆ ಎಂದು ಆಯೋಗ ಶಿಫಾರಸು ಮಾಡಿದೆ.
ಇದಲ್ಲದೆ, ರಾಜ್ಯ ಸರ್ಕಾರ ಅಳವಡಿಸಿಕೊಂಡಿರುವ ತುಟ್ಟಿ ಭತ್ಯೆ ಸೂತ್ರದಲ್ಲಿ ಕೆಲವೊಂದು ಮಾರ್ಪಾಟುಗಳನ್ನು ಮಾಡಿಕೊಳ್ಳಬೇಕು. ಮನೆ ಬಾಡಿಗೆ ಭತ್ಯೆ, ನಗರ ಪರಿಹಾರ ಭತ್ಯೆ, ವಿಶೇಷ ಭತ್ಯೆ, ರಜೆ ಪ್ರಯಾಯಿತಿ, ವೈದ್ಯಕೀಯ ಮರುಪಾವತಿ ಪ್ರಮಾಣವನ್ನು ಪ್ರಸ್ತುತ ಹಣದುಬ್ಬರ ಪ್ರಮಾಣಕ್ಕೆ ತಕ್ಕಂತೆ ಹೆಚ್ಚಿಸಬೇಕು ಎಂದೂ ಆಯೋಗವು ತನ್ನ ಶಿಫಾರಸಿನಲ್ಲಿ ತಿಳಿಸಿರುವುದಾಗಿ ಮೂಲಗಳು ಹೇಳಿವೆ.
ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆಯೂ ಆಯೋಗ ಕೆಲವು ಶಿಫಾರಸುಗಳನ್ನು ಮಾಡಿದ್ದು, ಪ್ರಸ್ತುತ ಇರುವ ಖಾಲಿ ಹುದ್ದೆಗಳ ಪೈಕಿ ಅಗತ್ಯವಿರುವ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಬೇಕು. ನೌಕರರಿಗೆ ಆಗಾಗೆ ತರಬೇತಿ ನೀಡಬೇಕು ಎಂದು ಹೇಳಿದೆ. ಅಲ್ಲದೆ, ಉತ್ತಮವಾಗಿ ಕಾರ್ಯನಿರ್ವಹಿಸುವ ನೌಕರರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದರೊಂದಿಗೆ ಅವರಿಗೆ ನೀಡುವ ನಗದು ಪುರಸ್ಕಾರದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದೂ ಹೇಳಿರುವುದಾಗಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.