ಕಾನೂನು ಅರಿವಿನಿಂದ ನೆಮ್ಮದಿ
Team Udayavani, Dec 31, 2017, 2:41 PM IST
ಸುರಪುರ: ಕಾನೂನಿನ ತಿಳುವಳಿಕೆ ಕೊರತೆಯಿಂದ ಅಪರಾಧಗಳು ನಡೆಯುತ್ತಿವೆ. ಆದ್ದರಿಂದ ಪ್ರತಿಯೊಬ್ಬ ನಾಗರಿಕರು ಕಾನೂನಿನ ಅರಿವು ಪಡೆದುಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷ ಹಿರಿಯ ಸಿವಿಲ್ ನ್ಯಾಯಾಧೀಶ ಡಿ. ನಾಗರಾಜೇಗೌಡ ಹೇಳಿದರು.
ಇಲ್ಲಿಯ ಜೆಎಂಎಫ್‌ಸಿ ಕೋರ್ಟ್‌ನ ಸಭಾಂಗಣದಲ್ಲಿ ಶನಿವಾರ ತಾಲೂಕು ಕಾನೂನು ಸೇವಾ ಸಮಿತಿ ಮತ್ತು ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಜರುಗಿದ ಕಾನೂನು ಅರಿವು-ನೆರವು ಕಾರ್ಯಕ್ರಮದಡಿ ಹಮ್ಮಿಕೊಂಡಿದ್ದ ಪೊಲೀಸ್ ದೂರು ಪ್ರಾಧಿಕಾರ ಕುರಿತಾದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹುಟ್ಟು ಮತ್ತು ಸಾವುಗಳ ನಡುವೆ ಪ್ರತಿಯೊಬ್ಬರೂ ಕಾನೂನನ್ನು ಅರಿತು ಗೌರವಿಸಿದಾಗ ಮಾತ್ರ ಸಮಸ್ಯೆಗಳಿಗೆ
ಪರಿಹಾರ ದೊರೆಯುತ್ತದೆ. ಸಮಾಜದ ಒಳಗೆ ಬದುಕುವ ನಾವುಗಳು ಕಾನೂನಿನ ಬಗ್ಗೆ ತಿಳಿವಳಿಕೆ ಕಂಡುಕೊಳ್ಳಬೇಕು ಎಂಬ ಉದ್ದೇಶದಿಂದ ಇಂದು ತಾಲೂಕು ಕಾನೂನು ಪ್ರಾಧಿಕಾರ ಉಚಿತ ಸಲಹೆ, ತಿಳಿವಳಿಕೆ ನೀಡುತ್ತದೆ. ಅದಕ್ಕಾಗಿ ಪ್ರತಿಯೊಬ್ಬರು ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದರು.
ವಕೀಲರಾದ ಚನ್ನಪ್ಪ ಹೂಗಾರ, ವಿಶ್ವಾಮಿತ್ರ ಕಟ್ಟಿಮನಿ ಉಪನ್ಯಾಸ ನೀಡಿದರು. ವಕೀಲರ ಸಂಘದ ಅಧ್ಯಕ್ಷ ಎಸ್. ಸಿದ್ರಾಮಪ್ಪ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾಧೀಶ ಅಮರನಾಥ ಬಿ.ಎನ್, ಸರಕಾರಿ ಸಹಾಯಕ ಅಭಿಯೋಜಕ
ಮಹಾಂತೇಶ ಮಸಳೆ, ವಕೀಲರಾದ ಯಂಕಾರಡ್ಡಿ ಹವಾಲ್ದಾರ್, ನಂದಣ್ಣ ಬಾಕ್ಲಿ ವೇದಿಕೆಯಲ್ಲಿದ್ದರು.
ಕೋರ್ಟ್‌ನ ಶಿರಸ್ತೇದಾರ್ ಬಿ. ಗೌಡ ಪ್ರಾರ್ಥಿಸಿದರು. ನಂದನಗೌಡ ಪಾಟೀಲ್ ನಿರೂಪಿಸಿದರು. ಮಂಜುನಾಥ ಹುದ್ದಾರ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.