ಸ್ವಚ್ಛತೆಗೆ ನಮ್ಮೆಲ್ಲರ ಆದ್ಯತೆ ಇರಲಿ: ಸಿಇಒ
Team Udayavani, Oct 3, 2020, 4:14 PM IST
ಶಹಾಪುರ: ಮಹಾತ್ಮ ಗಾಂಧಿಧೀಜಿ ಜೀವನದಲ್ಲಿ ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದರು. ಅವರ ಆಶಯದಂತೆ ಪ್ರತಿಯೊಬ್ಬರು ಪರಿಸರದಲ್ಲಿ ಸ್ವತ್ಛತೆ ಕಾಪಾಡುವ ಹೊಣೆ ಹೊರಬೇಕು. ಆಗ ಮಾತ್ರ ದೇಶ ಸ್ವಚ್ಛ ಮತ್ತು ಸುಂದರವಾಗಲಿದೆ ಎಂದು ಸಿಇಒ ಶಿಲ್ಪಾ ಶರ್ಮಾ ಹೇಳಿದರು.
ತಾಲೂಕಿನಲ್ಲಿ ದೋರನಹಳ್ಳಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಸ್ವಚ್ಛೋತ್ಸವ ನಿತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಹಾಗೂ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಕಂಡ ಮಹತ್ವದ ಕನಸುಗಳಲ್ಲಿ ಸ್ವಚ್ಛತೆ ನಿರ್ವಹಣೆಯು ಕೂಡಾ ಒಂದಾಗಿತ್ತು. ಪ್ರತಿಯೊಬ್ಬರು ಸ್ವಚ್ಛತೆಯ ಅರಿವು ಹೊಂದಬೇಕು. ನಿರುಪಯುಕ್ತ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಕಸದ ಬುಟ್ಟಿಯಲ್ಲಿ ಹಾಕಬೇಕು. ಹಸಿ ಕಸ ಮತ್ತು ಒಣ ಕಸ, ಪ್ಲಾಸ್ಟಿಕ್ ವಸ್ತುಗಳು, ಘನ ವಸ್ತುಗಳು ಸೇರಿದಂತೆ ವಿಂಗಡಣೆ ಮಾಡಿ ಮನೆ ಬಳಿ ಬರುವ ಗ್ರಾಪಂ ಸಿಬ್ಬಂದಿಗೆ ಹಸ್ತಾಂತರಿಸಬೇಕು ಎಂದುರ.
ಪ್ರತಿಯೊಬ್ಬರು ಮನೆಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಬೇಕು. ಮನೆಯ ಬಚ್ಚಲಿನ ನೀರನ್ನು ರಸ್ತೆಗೆ ಬಿಡದೆ ಮನೆಯ ಅಕ್ಕ-ಪಕ್ಕ ಅಥವಾ ಮುಂದೆ-ಹಿಂದೆ ನಿಮ್ಮ ಜಾಗ ಇರುವಲ್ಲಿ ಬಚ್ಚಲು ಗುಂಡಿಯ ಇಂಗು ತೊಟ್ಟಿಗಳನ್ನು ನಿರ್ಮಿಸಿಕೊಳ್ಳಿ. ಅದರಿಂದ ಸ್ವಚ್ಛತೆಗೆ ಬಹು ಸಹಕಾರವಾಗುತ್ತದೆ ಎಂದು ಸಲಹೆ ನೀಡಿದರು.
ತಾಪಂ ಇಒ ಜಗನ್ನಾಥ ಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ 122 ಗ್ರಾಮ ಪಂಚಾಯಿತಿಗಳಿದ್ದು, ಈ ಪೈಕಿ 101 ಗ್ರಾಪಂಗಳಿಗೆ ಸ್ಥಳವನ್ನು ಗುರುತಿಸಲಾಗಿದೆ. ಅದರಲ್ಲಿ 24 ಗ್ರಾಪಂಗಳಿಗೆ ಭೂಮಿ ಮಂಜೂರು ಮಾಡಲಾಗಿದೆ. ಇಲಾಖೆಯು 48 ಗ್ರಾಪಂಗಳಿಗೆ ಆಡಳಿತಾತ್ಮಕ ಮಂಜೂರಾತಿ ನೀಡಿ ಅನುದಾನ ಬಿಡುಗಡೆ ಮಾಡಲಾಗಿದೆ. 20 ಗ್ರಾಪಂಗಳಿಗೆ ತ್ಯಾಜ್ಯ ಸಾಗಾಣಿಕೆಯ ವಾಹನಗಳನ್ನು ಖರೀದಿಸಲಾಗಿದೆ. ಸ್ಥಳಿಯವಾಗಿ ಸರ್ಕಾರಿ ಜಮೀನು ಹೊಂದಿಲ್ಲದ ಗ್ರಾಪಂಗಳನ್ನು ಜಮೀನು ಹೊಂದಿರುವ ಗ್ರಾಪಂಗಳ ಜೊತೆ ಬಹು ಗ್ರಾಮ ತ್ಯಾಜ್ಯ ಸಂಸ್ಕರಣ ಘಟಕ ಮಾಡಿ ತ್ಯಾಜ್ಯವನ್ನು ಸಂಗ್ರಹಿಸಲಾಗುತ್ತದೆ ಎಂದು ಹೇಳಿದರು.
ಜಿಪಂ ಯೋಜನಾ ನಿರ್ದೇಶಕ ಗುರುನಾಥ ಗೌಡಪ್ಪನವರ ಸ್ವಚ್ಛತೆ ಪ್ರತಿಜ್ಞಾವಿಧಿ ಬೋಧಿಸಿದರು. ಸ್ವಚ್ಛ ಭಾರತ ಮಿಷನ್ ಐಇಸಿ ಸಮಾಲೋಚಕ ಶಿವಕುಮಾರ, ಪ್ರೊಬೇಷನರಿ ಅಧಿಕಾರಿ ಅಶ್ವಿಜಾ, ಸಿಡಿಪಿಒ ಗುರುರಾಜ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.