ಎಲ್ಲರೂ ಸಂಚಾರ ನಿಯಮ ಪಾಲಿಸಲಿ
Team Udayavani, Jan 28, 2022, 3:35 PM IST
ನಾರಾಯಣಪುರ: ಯುವಕರು ಸಂಚಾರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸುತ್ತಿದ್ದಾರೆ. ಇದರಿಂದ ಅಪಘಾತಗಳು ಸಂಭವಿಸಿ, ಬಾಲಾಪರಾಧಿಗಳ ಪಟ್ಟಿಗೆ ಸೇರುತ್ತಿರುವುದು ವಿಷಾದನೀಯ. ಪ್ರತಿಯೊಬ್ಬರು ಸಂಚಾರಿ ನಿಯಮ ಪಾಲನೆಗೆ ಒತ್ತು ನೀಡಬೇಕೆಂದು ಸ್ಥಳೀಯ ಪೊಲೀಸ್ ಠಾಣೆಯ ಕ್ರೈಂ ಬ್ರಾಂಚ್ ಪಿಎಸ್ಐ ಬಾಗಣ್ಣ ಹೇಳಿದರು.
ಇಲ್ಲಿನ ಮಾತೋಶ್ರೀ ನಿಂಬೆಮ್ಮ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ಜರುಗಿದ ಕಾನೂನು ಅರಿವು-ನೆರವು ಕಾರ್ಯಕ್ರಮ ಹಾಗೂ ನೇತಾಜಿ ಸುಭಾಷ್ಚಂದ್ರ ಬೋಸ್ ಅವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮನುಷ್ಯನ ಜೀವನಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಕಾನೂನು ಅಗತ್ಯವಾಗಿದೆ. ಎಲ್ಲರೂ ಸಮಾಜದಲ್ಲಿ ಒಳ್ಳೆಯ ರೀತಿ ಜೀವನ ನಡೆಸಲು ಕೆಲ ನಿಯಮ, ನೀತಿಗಳನ್ನು ಅನುಸರಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಮುಖ್ಯ ಪೇದೆ ಸಂಗಣ್ಣ ಮೇಗಳಮನಿ, ಮಹಿಳಾ ಮುಖ್ಯ ಪೇದೆ ಲಾಲಬಿ ನದಾಫ ಕಾನೂನಿನ ನಿಯಮ, ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಪ್ರಾಚಾರ್ಯ ಡಾ| ಜಗದೀಶ ನೂಲಿನವರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಶಂಕರ ದಡ್ಡಿ, ಶೇಖರಯ್ಯ, ಗಿರಿಜಾ ಅರವಿಂದ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.