ಪ್ರತಿಯೊಬ್ಬರು ಮತ ಚಲಾಯಿಸಲಿ
Team Udayavani, Apr 10, 2018, 4:22 PM IST
ಯಾದಗಿರಿ: ಮತ ನಿಮ್ಮ ಹಕ್ಕಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತ ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೆ. ಮಂಜುನಾಥ ಹೇಳಿದರು.
ನಗರದ ಜಿಲ್ಲಾ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಆಶ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವ್ಯವಸ್ಥಿತ ಮತದಾರರಿಗೆ ಶಿಕ್ಷಣ ಮತ್ತು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್) ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮತದಾರರ ಗುರುತಿನ ಚೀಟಿ ಪಡೆಯದೇ ಇರುವ ಫಲಾನುಭವಿಗಳನ್ನು ಗುರುತಿಸಿ, ಹೆಸರು ನೋಂದಾಯಿಸಬೇಕು. ಕೂಡಲೇ ಅವರಿಗೆ ಮತದಾರರ ಚೀಟಿ ನೀಡಬೇಕು ಎಂದು ಈ ಸಂದರ್ಭದಲ್ಲಿ ಯಾದಗಿರಿ ತಹಶೀಲ್ದಾರ್ ಅವರಿಗೆ ಆದೇಶಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ದೇವದಾಸಿಯರು, ಲೈಂಗಿಕ ಅಲ್ಪಸಂಖ್ಯಾತರು, ಧನಶ್ರೀ ಮತ್ತು ಚೇತನ ಯೋಜನೆಯ ಫಲಾನುಭವಿಗಳಿಗೆ ಹಾಗೂ ಸ್ವಯಂ ಸೇವಾ ಸಂಘ ಸಂಸ್ಥೆಗಳ ಸದಸ್ಯರುಗಳಿಗೆ ಮತದಾನದ ಪ್ರತಿಜ್ಞಾವಿಧಿಯನ್ನು ಜಿಲ್ಲಾ ಧಿಕಾರಿಗಳು ಬೋಧಿ ಸಿದರು. ನಂತರ ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು.
ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ| ಅವಿನಾಶ ಮೆನನ್ ರಾಜೇಂದ್ರನ್ ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶ್ರೀಕಾಂತ ಕುಲಕರ್ಣಿ ಸ್ವಾಗತಿಸಿದರು. ದೇವದಾಸಿ ಪುನರ್ವಸತಿ ಯೋಜನೆ ಯೋಜನಾ ಧಿಕಾರಿ ಎಸ್.ಎನ್. ಹಿರೇಮಠ ನಿರೂಪಿಸಿದರು. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಭಿವೃದ್ಧಿ ನಿರೀಕ್ಷಕ ಶಿವಮಂಗಳಾ ಎಂ. ಪ್ರಸನ್ನ ವಂದಿಸಿದರು. ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಹಾಕಿದ ಮತ ವಿವಿ ಪ್ಯಾಟ್‌ನಿಂದ ದೃಢಪಡಿಸಿಕೊಳ್ಳಿ
ಸುರಪುರ: ದೇಶದ ಸುಭದ್ರ ಪ್ರಜಾಪ್ರಭುತ್ವ ತಳಹದಿಗೆ ಮತದಾನ ಮೂಲವಾಗಿದೆ. ಮತ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್ ತಿಳಿಸಿದರು.
ನಗರದ ಮಾರುಕಟ್ಟೆ ಪ್ರದೇಶದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಮತದಾರರಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾನಕ್ಕೆ ಮಹತ್ವವಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಮತ ಚಲಾಯಿಸುವ ಹಕ್ಕನ್ನು ಸಂವಿಧಾನ ನೀಡಿದ್ದು, ಪ್ರತಿಯೊಬ್ಬ ಮತದಾರನೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಸಲಹೆ ನೀಡಿದರು.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ವಿವಿ ಪ್ಯಾಟ್ ಯಂತ್ರ ಬಳಿಸಲಾಗುತ್ತಿದ್ದು, ಇದರಿಂದ ಮತದಾರ ತಾನು ಹಾಕಿರುವ ಮತ ದೃಢಪಡಿಸಿಕೊಳ್ಳಬಹುದಾಗಿದೆ. ಪ್ರಜಾಪ್ರಭುತ್ವದಲ್ಲಿ ಮತದಾರರು ಪ್ರಭುಗಳಾಗಿದ್ದು, ಯಾವುದೇ ಅಮಿಷಗಳಿಗೂ ಬಲಿಯಾಗದೆ ಪಾರದರ್ಶಕವಾಗಿ ಮತ ಚಲಾಯಿಸುವ ಅಗತ್ಯವಿದೆ ಎಂದು ನುಡಿದರು. ಕ್ಷೇತ್ರ ಶಿಕ್ಷಣಾಧಿ ಕಾರಿ ನಾಗರತ್ನಾ ಓಲೇಕಾರ್, ಪೌರಯುಕ್ತ
ದೇವಿಂದ್ರ ಹೆಗ್ಗಡೆ, ಸಿಡಿಪಿಒ ಮೀನಾಕ್ಷಿ, ಅಂಗನವಾಡಿ ಮೇಲ್ವಿಚಾರಕಿ ಚಂದ್ರಲೀಲಾ ನಿಂಬೂರ್, ಪ್ರಾಶಾಶಿ ಸಂಘದ ಅಧ್ಯಕ್ಷ ಸೋಮರಡ್ಡಿ ಮಂಗ್ಯಾಳ, ಸಿಆರ್‌ಪಿ ತಿಪ್ಪಣ್ಣ, ಎಪಿಎಫ್‌ನ ಅನ್ವರ್ ಜಮಾದಾರ್ ಸೇರಿದಂತೆ ದರಬಾರ ಶಾಲೆ, ದರಬಾರ್ ಉರ್ದು ಶಾಲೆ, ಕಬಾಡಗೇರಾ, ರಾಣಿ ಜಾನಕೀದೇವಿ ಶಾಲೆಯ ಶಿಕ್ಷಕರು ಮತ್ತು ಸಿಬ್ಬಂದಿಗಳು ಇದ್ದರು. ಸಿಆರ್‌ಪಿ ಸಿದ್ದಣ್ಣ ದಂಡಗುಂಡ ಅವರ ತಂಡವು ಹಾಡುಗಳ ಮೂಲಕ ಮತದಾನ ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.