ಪತ್ರಕರ್ತರು ನ್ಯಾಯದ ಪರವಾಗಿರಲಿ: ಹೂಗಾರ
Team Udayavani, Jul 20, 2022, 3:10 PM IST
ಯಾದಗಿರಿ: ಪತ್ರಕರ್ತರು ಅ ಧಿಕಾರದಲ್ಲಿ ಇರುವವರ ಹಿಂಬಾಲಕರಾಗದೇ ಜನರಿಗೆ ಉತ್ತರ ನೀಡುವಂತಿರಬೇಕು ಹಾಗೂ ನ್ಯಾಯದ ಪರವಾಗಿ ಇರಬೇಕು ಎಂದು ಹಿರಿಯ ಪತ್ರಕರ್ತ ಸುಭಾಷ ಹೂಗಾರ ಹೇಳಿದರು.
ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ನಿಮಿತ್ತ ಹಮ್ಮಿಕೊಂಡಿದ್ದ “ಮರೆಯಾಗುತ್ತಿರುವ ತನಿಖಾ ಪತ್ರಿಕೋದ್ಯಮ’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಉಪನ್ಯಾಸ ನೀಡಿದರು.
ಪತ್ರಕರ್ತರಿಂದ ಸತ್ಯ ಹೇಳುವ ಕೆಲಸವಾಗಬೇಕು. ಸತ್ಯ ಹೇಳುವವರು ಹಾಗೂ ಕೇಳುವವರ ಸಂಖ್ಯೆ ಇಲ್ಲದಿರಬಹುದು. ಆದರೂ ಪತ್ರಕರ್ತರು ಸತ್ಯ ಹೇಳಬೇಕು, ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಬೇಕು. ಪತ್ರಿಕೋದ್ಯಮದ ಮೂಲ ಉದ್ದೇಶ, ಆಶಯ ಬದಲಾವಣೆಯಾಗಬಾರದು. ಕಾರ್‍ಯಾಂಗ, ಶಾಸಕಾಂಗ ಹಾಗೂ ನ್ಯಾಯಾಂಗದಷ್ಟೇ ಜವಾಬ್ದಾರಿ ಪತ್ರಿಕಾರಂಗಕ್ಕಿದೆ. ಈ ಮೂರು ರಂಗದ ತಪ್ಪುಗಳಾದಾಗ ಅಥವಾ ಜನರ ಬೇಡಿಕೆಗೆ ಬೆಲೆ ಸಿಗದಿದ್ದಾಗ ಪತ್ರಿಕಾ ರಂಗ ಅವರಿಗೆ ನೆರವಾಗುವ ಮೂಲಕ ಸಮಾಜದ ತಾಯಿ ಪಾತ್ರದ ಸ್ಥಾನ ವಹಿಸಬೇಕು ಎಂದರು.
ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಿರ್ಭಿತಿಯಿಂದ ಪತ್ರಕರ್ತರು ವರದಿ ಮಾಡಬೇಕು. ಅಲ್ಲದೇ ಸಮಾಜದಲ್ಲಿನ ಹುಳುಕು ಎತ್ತಿ ತೋರಿಸುವ ಕೆಲಸ ಮಾಡಬೇಕಿದೆ. ರಾಜಕಾರಣಿಗಳು ವಸ್ತುನಿಷ್ಠ, ಸತ್ಯ ವರದಿಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಬೇಕು ಎಂದರು.
ವೈದ್ಯ ಡಾ| ಶರಣಬಸವಪ್ಪ ಕಾಮರೆಡ್ಡಿ ಬೆಂಡೆಬೆಂಬಳಿ ಮಾತನಾಡಿ, ಪತ್ರಕರ್ತರ ಸೇವೆ ವಿಭಿನ್ನ. ನಿಜಕ್ಕೂ ಅವರು ಒಳ್ಳೆಯ ಸಮಾಜ ಕಟ್ಟುವ ರೂವಾರಿಗಳು ಎಂದರು.
ಯಾದಗಿರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸುದರ್ಶನ ನಾಯಕ, ಸಂಘದ ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ ಹಾಗೂ ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪತ್ರಕರ್ತ ನರಸಪ್ಪ ನಾರಾಯಣೋರ ಪ್ರಾಸ್ತಾವಿಕ ಮಾತನಾಡಿದರು.
ಈ ವೇಳೆ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಯೂಡಾ ಅಧ್ಯಕ್ಷ ರುದ್ರಗೌಡ ಪಾಟೀಲ, ನಗರಸಭೆ ಸದಸ್ಯ ಚೆನ್ನಕೇಶವಗೌಡ ಬಾಣತಿಹಾಳ, ಕಸಾಪ ಜಿಲ್ಲಾಧ್ಯಕ್ಷ ಡಾ| ಸಿದ್ದಪ್ಪ ಹೊಟ್ಟಿ, ವಾರ್ತಾ ಇಲಾಖೆ ಹಿರಿಯ ಉಪ ನಿರ್ದೇಶಕ ಸಿದ್ದೇಶ್ವರಪ್ಪ ಬಿ.ಜಿ., ರಾಜ್ಯ ಪರಿಷತ್ ಸದಸ್ಯ ರಾಘವೇಂದ್ರ ಕಾಮನಟಗಿ, ಉಪಾಧ್ಯಕ್ಷರಾದ ರಾಜಕುಮಾರ ನಳ್ಳೀಕರ್, ಗುಂಡಾಭಟ್ ಜೋಶಿ, ಪ್ರಧಾನ ಕಾರ್ಯದರ್ಶಿ ದಿನೇಶ್ ವಿ.ಸಿ, ಕಾರ್ಯದರ್ಶಿ ಸೈಯದ್ ಸಾಜೀದ್, ಖಜಾಂಚಿ ಕುಮಾರಸ್ವಾಮಿ ಕಲಾಲ ಇತರರಿದ್ದರು. ಪತ್ರಕರ್ತ ಎಸ್.ಎಸ್. ನಾಯಕ ಸ್ವಾಗತಿಸಿದರು. ಅಮರಯ್ಯ ಸ್ವಾಮಿ ಜಾಲಿಬೆಂಚಿ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.