ಸರ್ಕಾರ ಮಾರಕ ಕೃಷಿ ಕಾಯ್ದೆ ಹಿಂಪಡೆಯಲಿ

Team Udayavani, Mar 3, 2022, 1:26 PM IST

15act

ಶಹಾಪುರ: ರೈತರ ನಿರಂತರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಿತು. ಆದರೆ ಇಲ್ಲಿನ ರಾಜ್ಯ ಸರ್ಕಾರ ಈ ಮಾರಕ ಕಾಯ್ದೆಗಳನ್ನು ಹಿಂಪಡೆಯದಿರುವುದು ಖಂಡನೀಯವಾಗಿದೆ. ಇದನ್ನು ವಿರೋಧಿಸಿ ಕರ್ನಾಟಕದಾದ್ಯಂತ ಐತಿಹಾಸಿಕ ಜಾಥಾ ಆಯೋಜಿಸಲಾಗಿದೆ ಎಂದು ಜನಾಂದೋಲನ ಮಹಾಮೈತ್ರಿಯ ಪ್ರಮುಖ ಎಸ್‌.ಆರ್‌. ಹಿರೇಮಠ ತಿಳಿಸಿದರು.

ನಗರದ ಮಾರುತಿ ಮಂದಿರ ಮುಂದುಗಡೆ ಬುಧವಾರ ಜನಾಂದೋಲನ ಮಹಾಮೈತ್ರಿಯ ಜಾಥಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೋರ್ಟ್‌ನಿಂದ ಸಮಾಜ ಸುಧಾರಣೆ ಮಾಡಲು ಸಾಧ್ಯವಿಲ್ಲ. ಆದರೆ ಸಮಾಜದ ಪರಿವರ್ತನೆಗೆ ಊರುಗೋಲು ಆಗಬಲ್ಲದು. ಹೀಗಾಗಿ ಜನ ಜಾಗೃತಿ ಅಗತ್ಯವಿದೆ. ಕರಾಳ ಕಾಯ್ದೆಗಳ ಕುರಿತು ಪ್ರತಿ ರೈತನಲ್ಲಿ ಅರಿವು ಮೂಡಿಸಬೇಕಿದೆ. ಹಿಂದೆ ಊಳುವವನೇ ಭೂಮಿಯ ಒಡೆಯ ಎಂದು ಹೇಳಲಾಗುತಿತ್ತು. ಆದರೆ ಈಗಿನ ಸರ್ಕಾರ ಉಳ್ಳವನಿಗೆ ಭೂಮಿ ಇಲ್ಲದವನಿಗೆ ಯಾಕೆ ಭೂಮಿ ಎಂಬ ನೀತಿಯಡಿ ಕೃಷಿ ಕಾಯ್ದೆಗಳನ್ನು ರೂಪಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಣ್ಣ ಮತ್ತು ಅತಿ ಸಣ್ಣ ರೈತರು ತಮ್ಮ ಅಲ್ಪ ಭೂಮಿಯನ್ನು ಕಳೆದುಕೊಂಡು ಕೃಷಿಯಿಂದ ವಂಚಿತರಾಗಲಿದ್ದಾರೆ ಎಂದು ಆರೋಪಿಸಿದರು.

ಅಲ್ಲದೆ ಕರ್ನಾಟಕ ಭೂಸುಧಾರಣಾ ತಿದ್ದುಪಡಿ ಕಾಯ್ದೆ 2020 ಹಿಂಪಡೆಯಬೇಕು, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ನಿಯಂತ್ರಣ ಅಭಿವೃದ್ಧಿ) ಕಾಯ್ದೆ 2020 ಹಿಂಪಡೆಯಬೇಕು, ಕರ್ನಾಟಕ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣೆ ಕಾಯ್ದೆ ಹಿಂಪಡೆಯಬೇಕು ಎಂಬುದು ಜಾಥಾದ ಪ್ರಮುಖ ಉದ್ದೇಶವಾಗಿದೆ ಎಂದರು.

ರೈತ ಮುಖಂಡ ಭಾಸ್ಕರರಾವ್‌ ಮುಡಬೂಳ ಮಾತನಾಡಿ, ಯಾವುದೇ ಸರ್ಕಾರ ಜನ ಹಿತ ಕಾಯ್ದೆಗಳನ್ನು ಜಾರಿಗೆ ತರುವುದನ್ನು ಬಿಟ್ಟು ರೈತ ವಿರೋಧಿ ಶಾಸನಗಳನ್ನು ಜಾರಿಗೊಳಿಸಿದರೆ ಅದರ ಪರಿಣಾಮವನ್ನು ಸರ್ಕಾರ ಎದುರಿಸಬೇಕಾಗುತ್ತದೆ. ರೈತರ ಪಾಲಿನ ಮೂರು ಕಾಯ್ದೆ ಹಿಂಪಡೆದರೆ ಮಾತ್ರ ರೈತರು ನೆಮ್ಮದಿ ಜೀವನ ನಡೆಸಲು ಸಾಧ್ಯ. ರೈತ ವಿರೋಧಿ ಕಾಯ್ದೆಯಿಂದ ಅದರ ಶಾಪ ತಟ್ಟುವುದರಲ್ಲಿ ಅನುಮಾನವಿಲ್ಲ ಎಂದರು.

ಚನ್ನಪ್ಪ ಆನೇಗುಂದಿ, ಖಾಜಾ ಅಸ್ಲಂ ಅಹ್ಮದ್‌, ಶರಣಪ್ಪ, ಎಸ್‌.ಎಂ. ಸಾಗರ, ವಿಶ್ವರಾಧ್ಯ ಸತ್ಯಂಪೇಟೆ, ಹಣಮಂತ ಭಂಗಿ ಇದ್ದರು.

ಟಾಪ್ ನ್ಯೂಸ್

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.