ಪರಿಶಿಷ್ಟರು ಸರ್ಕಾರಿ ಸೌಲಭ್ಯ ಪಡೆದು ಅಭಿವೃದ್ಧಿ ಹೊಂದಲಿ
Team Udayavani, Dec 1, 2018, 2:34 PM IST
ಸುರಪುರ: ಪರಿಶಿಷ್ಟ ಜಾತಿ ಮತ್ತು ಪಂಗಡ ಜನರ ಸಬಲೀಕರಣಕ್ಕಾಗಿ ಸರಕಾರ ವಿಶೇಷ ಯೋಜನೆ ಜಾರಿಗೊಳಿಸಿದೆ. ಶೈಕ್ಷಣಿಕ ಮತ್ತು ಉದ್ಯೋಗ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಮೀಸಲಾತಿ ಸೌಲಭ್ಯ ಒದಗಿಸಿದೆ. ಈ ಎಲ್ಲಾ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಪರಿಶಿಷ್ಟರು ಮೇಲೆ ಬರಬೇಕು ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಹರಿಬಾ ಜಮಾದಾರ ಹೇಳಿದರು.
ನಗರಸಭೆ ಕಾರ್ಯಾಲಯ ಆವರಣದಲ್ಲಿ ಶುಕ್ರವಾರ ಸಮಾಜ ಕಲ್ಯಾಣ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ನಗರಸಭೆ, ದೋರನಳ್ಳಿಯ ಸಮತಾ ಸಾಮಾಜಿಕ ಸಾಂಸ್ಕೃತಿಕ ಶಿಕ್ಷಣ ಸಂಸ್ಥೆ ಸಂಯುಕ್ತವಾಗಿ ಏರ್ಪಡಿಸಿದ್ದ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಹಾಗೂ ನಾಗರಿಕ ಹಕ್ಕು ಸಂರಕ್ಷಣಾ ಕಾಯ್ದೆಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಸೆಯದಂತೆ ಪರಿಶಿಷ್ಟರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶೈಕ್ಷಣಿಕ ಪ್ರಗತಿ ಸಾಧಿಸದೆ ಪರಿಶಿಷ್ಟರು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ಆದ್ದರಿಂದ ಶೈಕ್ಷಣಿಕವಾಗಿ ಸಿಗುವ ಸೌಲಭ್ಯಗಳನ್ನು ಚಾಚೂ ತಪ್ಪದೇ ಬಳಸಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ ಉನ್ನತ ಹುದ್ದೆಗಳಿಗೆ ಸ್ಪರ್ಧಿಸುವಂತೆ ಅವರನ್ನು ಪ್ರೋತ್ಸಾಹಿಸಬೇಕು ಎಂದು ಸಲಹೆ ನೀಡಿದರು. ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಸರಕಾರ ಪರಿಶಿಷ್ಟರಿಗೆ ವಿಶೇಷ ಕಾಯ್ದೆ ಜಾರಿ ಮಾಡಿದೆ.
ಇದನ್ನು ಕೆಟ್ಟದಕ್ಕೆ ಬಳಸಿಕೊಳ್ಳದೆ ಒಳ್ಳೆಯದಕ್ಕೆ ಉಪಯೋಗಿಸಿಕೊಂಡು ಸಮಾಜದಲ್ಲಿ ಇತರೆ ಸಮುದಾಯದೊಂದಿಗೆ ಸೌರ್ಹಾದತೆಯಿಂದ ಜೀವಿಸಿ ಅದಕ್ಕೂ ಮೀರಿ ದೌರ್ಜನ್ಯ, ದಬ್ಟಾಳಿಕೆ, ಜಾತೀಯತೆ ನಡೆದಲ್ಲಿ ಅಥವಾ ನಿಮ್ಮ ಹಕ್ಕುಗಳಿಗೆ ದಕ್ಕೆಯಾದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ ಎಂದು ತಿಳಿಸಿದರು.
ದಲಿತ ಸಂಘಟನೆ ಮುಖಂಡ ಭೀಮರಾಯ ಸಿಂದಗೇರಿ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಇಬ್ರಾಹಿಂ ಸಾಹೇಬ ತಳಗಡೆ ನಗರಸಭೆ ಸಿಎಒ ಓಂಕಾರ ಪೂಜಾರ ವೇದಿಕೆಯಲ್ಲಿದ್ದರು. ಪರುಶುರಾಮ ಕಾಂಬ್ಳೆ ಸ್ವಾಗತಿಸಿದರು. ಶರಣು ದೋರನಳ್ಳಿ ನಿರೂಪಿಸಿದರು. ಗೋಪಿ ಹುಲಿ ವಂದಿಸಿದರು. ವಿಶ್ವ ವಿಬೂತಳ್ಳಿ ಮತ್ತು ಬಲಭೀಮ ಬೇವಿನಳ್ಳಿ ಸಂಗಡಿಗರು ದೌರ್ಜನ್ಯ ಮತ್ತು ಅಸ್ಪೃಶ್ಯತೆ ಕುರಿತ ಕಿರು ನಾಟಕ ಪ್ರದರ್ಶನ ಮೂಲಕ ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.