ಗಂಟಲು ಮಾದರಿ ತಪಾಸಣೆ ತೀವ್ರಗೊಳ್ಳಲಿ
Team Udayavani, May 20, 2020, 6:16 AM IST
ಯಾದಗಿರಿ: ಜಿಲ್ಲೆಯಲ್ಲಿ ಸದ್ಯ ಮಹಾರಾಷ್ಟ್ರದಿಂದ ಆಗಮಿಸಿ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿರುವ ಜನರಲ್ಲಿಯೇ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಗುರುಮಠಕಲ್ಲ ತಾಲೂಕು ವ್ಯಾಪ್ತಿಯ ಕೇಂದ್ರಗಳಲ್ಲಿರುವ ವಲಸಿಗರ ಮಾದರಿ ತಪಾಸಣೆ ತೀವ್ರ ಗತಿಯಲ್ಲಿ ನಡೆಯುತ್ತಿದೆಯೇ ಎನ್ನುವ ಪ್ರಶ್ನೆ ಕಾಡತೊಡಗಿದೆ.
ಮಹಾರಾಷ್ಟ್ರದಿಂದ ಜಿಲ್ಲೆಗೆ ಸಾಕಷ್ಟು ಜನರು ಆಗಮಿಸಿ ವಿವಿಧ ಕ್ವಾರಂಟೈನ್‌ನಲ್ಲಿದ್ದಾರೆ. ಅಲ್ಲಿ ಯಾವೊಬ್ಬರು ಸಾಮಾಜಿಕ ಅಂತರ ಪಾಲಿಸದೇ ಗುಂಪಾಗಿ ವಾಸಿಸುತ್ತಿದ್ದಾರೆ. ಮಾಸ್ಕ್ ಧರಿಸದೇ ಮಹಾಮಾರಿ ಆರ್ಭಟ ಲೆಕ್ಕಿಸದೆ ನಿರ್ಭಯವಾಗಿದ್ದಾರೆ. ಅವರಲ್ಲಿ ಯಾರೇ ಒಬ್ಬರಿಗೆ ಸೋಂಕು ಪತ್ತೆಯಾದರೇ ಇಡೀ ಕ್ವಾರಂಟೈನ್ ಕೇಂದ್ರದಲ್ಲಿರುವವರು ಸೋಂಕಿತರ ಸಂಪರ್ಕಕ್ಕೆ ಸರಳವಾಗಿ ದೊರೆಯುವ ಪರಿಸ್ಥಿತಿಯಿದೆ.
ಈವರೆಗೆ ಕ್ವಾರಂಟೈನ್ ಕೇಂದ್ರದಲ್ಲಿದ್ದ 9 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮೇ12ರಂದು ಅಹಮದಾಬಾದ್ ನಿಂದ ಆಗಮಿಸಿದ ದಂಪತಿಯಲ್ಲಿ ಸೋಂಕು ಪತ್ತೆಯಾಗಿತ್ತು. ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಇನ್ನು ಕ್ವಾರಂಟೈನ್ ಕೇಂದ್ರದಲ್ಲಿರುವವರಿಗೆ ಮನೆಗಳಿಂದ ಸಂಬಂಧಿಕರು ಆಹಾರ ಇತರೆ ತಿನಿಸುಗಳನ್ನು ತಂದುಕೊಡುತ್ತಿದ್ದಾರೆ. ಗುರುಮಠಕಲ್ ತಾಲೂಕಿನ ಬದ್ದೇಪಲ್ಲಿ ತಾಂಡಾದ ಐವರಲ್ಲಿ ಸೋಮವಾರವಷ್ಟೇ ಸೋಂಕು ದೃಢಪಟ್ಟಿದೆ. 9 ಜನರು ಅವರ ಪ್ರಾಥಮಿಕ ಮತ್ತು 151 ಜನರು ದ್ವಿತೀಯ ಸಂಪರ್ಕಕ್ಕೆ ಬಂದಿದ್ದಾರೆ. ಮಂಗಳವಾರ ಮಗುವಿಗೆ ಸೋಂಕು ದೃಢವಾಗಿರುವುದು ಆತಂಕಕ್ಕೆ ಎಡೆಮಾಡಿದೆ. ಇದೀಗ ಕ್ವಾರಂಟೈನ್ ಕೇಂದ್ರಗಳಲ್ಲಿರುವವರು ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಕಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.