ಮೋದಿ ಕನಸು ಸಾಕಾರಗೊಳಿಸೋಣ: ಬಾಬುರಾವ್‌ ಚಿಂಚನಸೂರು


Team Udayavani, May 15, 2022, 5:36 PM IST

19modi

ಸೈದಾಪುರ: ಪ್ರಧಾನಿ ನರೇಂದ್ರ ಮೋದಿ ಭಾರತವನ್ನು ವಿಶ್ವಗುರು ಆಗುವ ಕನಸು ಕಂಡಿದ್ದಾರೆ ಅದನ್ನು ಸಾಕಾರಗೊಳಿಸುವಲ್ಲಿ ಪ್ರತಿಯೊಬ್ಬ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ ಎಂದು ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್‌ ಚಿಂಚನಸೂರ ತಿಳಿಸಿದರು. ಪಟ್ಟಣದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷ ತೊರೆದ ಕಾರ್ಯಕರ್ತರನ್ನು ಬಿಜೆಪಿ ಶಾಲು ಹಾಕಿ ಬರಮಾಡಿಕೊಂಡು ಮಾತನಾಡಿದರು.

ಕಳೆದ ಬಾರಿ ಜನರು ನೀಡಿದ ಅಧಿ ಕಾರವನ್ನು ಪ್ರಾಮಾಣಿಕವಾಗಿ ಬಳಸಿಕೊಂಡು ಗುರುಮಠಕಲ್‌ ಕ್ಷೇತ್ರದಲ್ಲಿ ಅಭಿವೃದ್ಧಿ ಪರವಾದ ಕೆಲಸಗಳನ್ನು ಮಾಡಿದ್ದೇನೆ. ಅಲ್ಲದೇ ನನ್ನ ಮತಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ಶಿಕ್ಷಣ, ಕೈಗಾರಿಕೆ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಆದರೆ ಅಧಿಕಾರಿಗಳ, ಗುತ್ತಿಗೆದಾರರು ಮತ್ತು ಇತರ ಪಕ್ಷದ ಕಾರ್ಯಕರ್ತರ ಮೇಲೆ ದಬ್ಟಾಳಿಕೆ, ದೌರ್ಜನ್ಯ ಮಾಡಿಲ್ಲ. ಮತಕ್ಷೇತ್ರದ ಎಲ್ಲ ಜನಾಂಗವನ್ನು ಸಮನಾಗಿ ಕಾಣುವುದರ ಮೂಲಕ ನಮ್ಮ ಕುಟುಂಬದ ಸದಸ್ಯರಂತೆ ಕಾಣುತ್ತ ಸುಖ ದುಃಖಗಳಲ್ಲಿ ಭಾಗಿಯಾಗಿದ್ದೇನೆ. ಕ್ಷೇತ್ರದ ಜನ ಗುಳೆ ಹೋಗುವುದನ್ನು ತಪ್ಪಿಸಲು ಕಡೇಚೂರು-ಬಾಡಿಯಾಲ ಕೈಗಾರಿಕಾ ಪ್ರದೇಶದಲ್ಲಿ ಪರಿಸರಕ್ಕೆ ಧಕ್ಕೆಯುಂಟು ಮಾಡದ ಕಾರ್ಖಾನೆಗಳನ್ನು ಸ್ಥಾಪಿಸಲು ಸಚಿವರಲ್ಲಿ ಮನವಿ ಮಾಡಿ, ಹೆಚ್ಚಿನ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಕೇಂದ್ರ ಸರ್ಕಾರದ ಆಹಾರ ನಿಗಮ ಮಂಡಳಿ ನೂತನ ನಿರ್ದೇಶಕಿ ಅಮರೇಶ್ವರಿ ಚಿಂಚನಸೂರು ಮಾತನಾಡಿ, ಪ್ರಧಾನಿ ಮೋದಿ ಅವರ ನಿರಂತರ ಕಾರ್ಯಗಳಿಂದ ಬಿಜೆಪಿ ಜನಮನ್ನಣೆ ಪಡೆಯುತ್ತಿದೆ. ದೇಶದ ಬಹುತೇಕ ಜನ ಬಿಜೆಪಿ ಕಾರ್ಯಕರ್ತ ರಾಗುತ್ತಿದ್ದಾರೆ. ಹೀಗಾಗಿ ವಿಶ್ವದ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ದೇಶ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಅಭಿವೃದ್ಧಿಯ ಪಥದಡೆಗೆ ಸಾಗುತ್ತಿದೆ. ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕೆಲಸ ಮಾಡುವ ಮೂಲಕ ಮುಂದಿನ ಜಿಪಂ, ತಾಪಂ ಮತ್ತು ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಂಘಟಿಸುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಬದ್ದೇಪಲ್ಲಿ, ರಾಂಪುರು ಕೆ., ಅಜಲಾಪುರ ಮತ್ತು ಸೈದಾಪುರ ಗ್ರಾಮದ 200ಕ್ಕೂ ಹೆಚ್ಚು ಜನ ಬಿಜೆಪಿಗೆ ಸೇರ್ಪಡೆಯಾದರು. ಹಿರಿಯ ಮುಖಂಡ ಬಸವರಾಜಯ್ಯಸ್ವಾಮಿ ಬದ್ದೇಪಲ್ಲಿ, ತಾಪಂ ಮಾಜಿ ಸದಸ್ಯ ಚಂದಪ್ಪ ಕಾವಲಿ, ಸೈದಾಪುರ ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಶರಣಪ್ಪಗೌಡ ಬಾಲಛೇಡ್‌, ಸುರೇಶ ಆನಂಪಲ್ಲಿ, ರಮೇಶ ಭೀಮನಹಳ್ಳಿ, ಬಸವರಾಜ ಹಿರೇನೂರು, ಸಿದ್ಧಲಿಂಗರೆಡ್ಡಿ ಭೀಮನಹಳ್ಳಿ, ಚಂದ್ರಶೇಖರ ಕಾವಲಿ, ಗ್ರಾಪಂ ಮಾಜಿ ಸದಸ್ಯ ಮೈಹಿಮೂದು ಬದ್ದೇಪಲ್ಲಿ, ಬಾಲುಗೌಡ ಕಲಾಲ್‌, ಮರೆಪ್ಪ ಗುಡಿಕಿ, ರಾಮಚಾರಿ ಗ್ರಾಪಂ ಸದಸ್ಯ, ಬಾಲಕೃಷ್ಣ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.