ಮತದಾರರ ಪಟ್ಟಿ ಪರಿಷ್ಕರಣೆಗೆ ಕೈ ಜೋಡಿಸಿ
Team Udayavani, Sep 2, 2019, 3:27 PM IST
ಯಾದಗಿರಿ: ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಚಪ್ಪ ಕೆ. ತಾಳಿಕೋಟಿ ಚಾಲನೆ ನೀಡಿದರು.
ಯಾದಗಿರಿ: ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ಮತದಾರರ ಪಟ್ಟಿ ದೋಷ ರಹಿತ ಮತ್ತು ಸದೃಢವಾಗಿರಬೇಕು. ದೋಷ ರಹಿತ ಮತದಾರರ ಪಟ್ಟಿ ಸಿದ್ಧಪಡಿಸುವುದು ಅಧಿಕಾರಿಗಳ ಕರ್ತವ್ಯ ಮಾತ್ರವಲ್ಲ. ಸಾರ್ವಜನಿಕರು, ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸೇರಿದಂತೆ ಪ್ರತಿಯೊಬ್ಬರೂ ಮತದಾರರ ಪಟ್ಟಿ ಪರಿಷ್ಕರಣೆಗೆ ಕೈ ಜೋಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರಾಚಪ್ಪ ಕೆ. ತಾಳಿಕೋಟಿ ಕರೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ರವಿವಾರ ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಅರ್ಹತಾ ದಿನಾಂಕ 01.01.2020ರಂತೆ ವಿಧಾನಸಭಾ ಕ್ಷೇತ್ರಗಳ ಭಾವಚಿತ್ರವಿರುವ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ಅಂಗವಾಗಿ ಹಮ್ಮಿಕೊಂಡಿರುವ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮ (ಇ.ವಿ.ಪಿ)ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬರುವ 2020ರ ಜನವರಿ 1ಕ್ಕೆ 18 ವರ್ಷ ಪೂರೈಸುವ ಯುವಕ-ಯುವತಿಯರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದು. ಅರ್ಹರು ಯಾರೂ ಕೂಡ ಮತದಾರ ಪಟ್ಟಿಯಿಂದ ಹೊರಗುಳಿಯಬಾರದು. ಹೆಸರು ಸೇರ್ಪಡೆ, ತೆಗೆದು ಹಾಕುವಿಕೆ, ಪರಿಶೀಲನೆ ಮತ್ತು ತಿದ್ದುಪಡಿಗೆ ಇದೊಂದು ಸುವರ್ಣಾವಕಾಶವಾಗಿದೆ. ಸಾರ್ವಜನಿಕರು ಈ ಸಮಯದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್ ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಇಂದು ರಾಜ್ಯ, ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ಇ.ವಿ.ಪಿ ಕಾರ್ಯಕ್ರಮದ ಪ್ರಾರಂಭೋತ್ಸವ ಹಮ್ಮಿಕೊಳ್ಳಲಾಗಿದೆ. ಮತದಾರರ ಪಟ್ಟಿಯ ಪೂರ್ವ ಸಿದ್ಧತಾ ಚಟುವಟಿಕೆಗಳ ಭಾಗವಾಗಿ ಸೆಪ್ಟೆಂಬರ್ 1ರಿಂದ ಸೆ. 30ರ ವರೆಗೆ ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ)ಗಳು ಮತದಾರರ ಮನೆಮನೆಗೆ ತೆರಳಿ ಪರಿಶೀಲಿಸುವರು. ಸೆಪ್ಟೆಂಬರ್ 16ರಿಂದ ಅಕ್ಟೋಬರ್ 15ರವರೆಗೆ ಮತಗಟ್ಟೆಗಳ ತರ್ಕಬದ್ಧಗೊಳಿಸುವಿಕೆ ಮತ್ತು ಭೌತಿಕ ಪರಿಶೀಲನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಪರಿಷ್ಕರಣೆಯ ಚಟುವಟಿಕೆಗಳ ಅಂಗವಾಗಿ ಅಕ್ಟೋಬರ್ 15ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಅಕ್ಟೋಬರ್ 15ರಿಂದ ನವೆಂಬರ್ 30ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶವಾಗಿದೆ. ಮತದಾರರ ವಿಶೇಷ ನೋಂದಣಿ ಅಭಿಯಾನವನ್ನು ನವೆಂಬರ್ 2, 3 ಮತ್ತು 9, 10ರಂದು ನಡೆಸಲಾಗುವುದು. ಡಿಸೆಂಬರ್ 15ರೊಳಗೆ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಮಾಡಲಾಗುವುದು. ಡಿಸೆಂಬರ್ 25ರೊಳಗೆ ದೋಷರಹಿತ ಮತದಾರರ ಪಟ್ಟಿಯನ್ನು ತಯಾರಿಸಿ, ಅಂತಿಮ ಪಟ್ಟಿ ಪ್ರಕಟಣೆಗೆ ಆಯೋಗದ ಅನುಮತಿ ಪಡೆಯಲಾಗುವುದು. ಡಿಸೆಂಬರ್ 31ರೊಳಗೆ ಮತದಾರರ ಪೂರಕ ಪಟ್ಟಿ ಮುದ್ರಣಗೊಳ್ಳಲಿದೆ. 2020ರ ಜನವರಿ 1ರಿಂದ ಜ.15ರೊಳಗೆ ಚುನಾವಣಾ ಆಯೋಗವು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಿದೆ ಎಂದು ವಿವರಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಮುಖಂಡರ ಪಾತ್ರ ಬಹುಮುಖ್ಯವಾಗಿದ್ದು, ಪ್ರತಿಯೊಂದು ಮತಗಟ್ಟೆಗೆ ತಮ್ಮ ಪಕ್ಷದ ವತಿಯಿಂದ ಮತಗಟ್ಟೆ ಏಜೆಂಟ್ (ಬಿ.ಎಲ್.ಎ)ರವರನ್ನು ನೇಮಕ ಮಾಡಿ ತಹಶೀಲ್ದಾರರಿಗೆ ಮಾಹಿತಿ ಸಲ್ಲಿಸಬೇಕು ಎಂದು ಹೇಳಿದರು.
ಸಾರ್ವತ್ರಿಕ ಚುನಾವಣೆಗಳ ಸಮಯದಲ್ಲಿ ಮತದಾರರ ಪಟ್ಟಿಯಲ್ಲಿ ಸಾಕಷ್ಟು ವ್ಯತ್ಯಾಸಗಳು, ದೋಷಗಳು ಮತ್ತು ಮೃತ/ಸ್ಥಳಾಂತರಗೊಂಡ ಮತದಾರರು ಅಸ್ತಿತ್ವದಲ್ಲಿರುವ ಬಗ್ಗೆ ಅನೇಕ ದೂರುಗಳು ಸ್ವೀಕೃತಿಯಾಗಿರುವುದರಿಂದ, ಮತದಾರರ ಪಟ್ಟಿಯಲ್ಲಿ ಸುಧಾರಣೆಯನ್ನು ಸಾಧಿಸಲು, ಹೆಚ್ಚಿನ ಮತದಾರರನ್ನು ಒಳಗೊಳ್ಳುವುದರ ಮೂಲಕ ಪ್ರಚಾರದ ಮೋಡ್‌ನಲ್ಲಿ ಮತದಾರರ ಪಟ್ಟಿಯಲ್ಲಿರುವ ಎಲ್ಲಾ ಮತದಾರರ ವಿವರಗಳನ್ನು ಮತ್ತು ಚಿತ್ರಗಳನ್ನು ಸರಿಪಡಿಸುವ ಮತ್ತು ದೃಢೀಕರಿಸುವ ಅವಶ್ಯಕತೆ ಇರುವುದರಿಂದ, ನಿಜವಾದ ಮತದಾರರ ಪಟ್ಟಿಯ ಪರಿಷ್ಕರಣೆಯ ಮೊದಲು ವಿಶೇಷ ಪರಿಷ್ಕರಣೆ ಪರಿಶೀಲನಾ ಕಾರ್ಯಕ್ರಮವನ್ನು ಹೆಚ್ಚಿನ ಪ್ರಚಾರ ರೂಪದಲ್ಲಿ ಪ್ರಾರಂಭಿಸಲು ಆಯೋಗವು ನಿರ್ದೇಶಿಸಿದೆ. ಈ ಅವಧಿಯಲ್ಲಿ ಸ್ವೀಪ್ ಸಹಾಯದಿಂದ ನಾಗರಿಕರು ಮುಂದೆ ಬರಲು ಮತ್ತು ಅಸ್ತಿತ್ವದಲ್ಲಿರುವ ಮತದಾರರ ವಿವರಗಳನ್ನು ದೃಢೀಕರಿಸಲು ಪ್ರೋತ್ಸಾಹಿಸಬಹುದು ಎಂದು ತಿಳಿಸಿದರು.
ಪರಿಷ್ಕರಣೆಗೆ ದಾಖಲೆಗಳು: ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು ಸರಿಪಡಿಸುವ ಸಲುವಾಗಿ ಸಾರ್ವಜನಿಕರು ಭಾರತೀಯ ಪಾಸ್‌ಪೋರ್ಟ್, ಚಾಲನಾ ಪರವಾನಗಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಸರಕಾರಿ /ಅರೆ ಸರಕಾರಿ ನೌಕರರು ಹೊಂದಿರುವ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್, ರೈತರ ಗುರುತಿನ ಚೀಟಿ, ಚುನಾವಣಾ ಆಯೋಗ ಅನುಮೋದಿಸಿರುವ ಇತರೆ ದಾಖಲೆಗಳನ್ನು ನಿಗದಿತ ಅರ್ಜಿ ನಮೂನೆ ಮೂಲಕ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ, ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು.
ಜಿಲ್ಲಾ ಚುನಾವಣಾ ರಾಯಭಾರಿ ಹಾಗೂ ಖ್ಯಾತ ಹಾಸ್ಯ ಕಲಾವಿದರಾದ ಬಸವರಾಜ ಮಹಾಮನಿ ಅವರು ತಮ್ಮ ಹಾಸ್ಯ ಚಟಾಕಿಗಳ ಮೂಲಕ ದೋಷರಹಿತ ಮತದಾರರ ಪಟ್ಟಿ, ಮತದಾನ ಹೆಚ್ಚಳ ಕುರಿತಂತೆ ಜಾಗೃತಿ ಮೂಡಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಚುನಾವಣಾ ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಸೇರಿದಂತೆ ರಾಜಕೀಯ ಪಕ್ಷಗಳ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು, ಬಿಎಲ್ಒಗಳು, ಸಾಮಾನ್ಯ ಸೇವಾ ಕೇಂದ್ರಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸಂಪನ್ಮೂಲ ವ್ಯಕ್ತಿ ಹಫೀಜ್ ಪಟೇಲ್ ನಿರೂಪಿಸಿದರು. ಸಹಾಯಕ ಆಯುಕ್ತ ಶಂಕರಗೌಡ ಎಸ್. ಸೋಮನಾಳ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.