ನಗರ ಸ್ವಚ್ಛತೆಗೆ ಶ್ರಮಿಸೋಣ: ಡಾ| ರಾಗಪ್ರಿಯಾ

Team Udayavani, Feb 24, 2022, 1:33 PM IST

17clean

ಯಾದಗಿರಿ: ಸ್ವಚ್ಛತೆ ಮಾಡೋದು ಕೇವಲ ಪೌರಕಾರ್ಮಿಕರ ಮತ್ತು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೀಮಿತವಲ್ಲ. ಸ್ವಚ್ಛತೆಗೆ ಪ್ರತಿಯೊಬ್ಬರು ಕೈ ಜೋಡಿಸಬೇಕು. ಪ್ರತಿಯೊಬ್ಬರಿಗೂ ಸ್ವಚ್ಛತೆಯ ಅರಿವು ಬಂದಾಗಲೇ ಸ್ವಚ್ಛ ಭಾರತ ಅಭಿಯಾನ ಸಫಲವಾಗುವುದು. ಸ್ವಚ್ಛತೆ ನಡೆಗೆ ಒಂದು ದೃಢ ಹೆಜ್ಜೆ ಇಡೋಣ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಅಭಿಪ್ರಾಯಪಟ್ಟರು.

ಇಲ್ಲಿನ ಸ್ಟೇಷನ್‌ ಏರಿಯಾದ ಲಾಡಿಸ್‌ ಗಲ್ಲಿಯಲ್ಲಿ ನಗರಸಭೆ ವತಿಯಿಂದ ನಡೆದ ಸ್ವತ್ಛ ಭಾರತ ಮಿಷನ್‌ “ಸ್ವಚ್ಛತೆ ನಡೆಗೆ ಒಂದು ದೃಢ ಹೆಜ್ಜೆ’ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಹಸಿಕಸ ಮತ್ತು ಒಣಕಸದ ಬಗ್ಗೆ ಜನರಿಗೆ ತಿಳಿವಳಿಕೆಯಿದೆ. ಆದರೆ ಇದನ್ನು ಬೇರ್ಪಡಿಸಿ ಹಾಕುವುದಕ್ಕೆ ಮನೆ-ಮನೆಗೆ ತೆರಳಿ ಅಧಿಕಾರಿಗಳು ಅರಿವು ಮೂಡಿಸಬೇಕು ಎಂದರು.

ಪ್ರತಿಯೊಂದು ವಾರ್ಡ್‌ಗಳ ಸದಸ್ಯರು ತಮ್ಮ ವಾರ್ಡ್‌ಗಳನ್ನು ದತ್ತು ತೆಗೆದುಕೊಳ್ಳುವ ಮುಖಾಂತರ ಸ್ವಚ್ಛತೆ ಮತ್ತು ಕಸ ವಿಂಗಡಣೆ ಬಗ್ಗೆ ಅರಿವು ಮೂಡಿಸಬೇಕೆಂದು ಜಿಲ್ಲಾಧಿಕಾರಿ ಕೋರಿದರು. ಜನರು ಅಧಿಕಾರಿಗಳಿಗಿಂತ ಜನಪ್ರತಿನಿಧಿಗಳ ಮಾತನ್ನು ಹೆಚ್ಚಾಗಿ ಪಾಲಿಸುತ್ತಾರೆ. ಏಕೆಂದರೆ ನೀವು ಅವರ ಪ್ರತಿನಿಧಿಗಳು ಎಂದ ಅವರು ಜನರಿಗೆ ಅರಿವು ಮೂಡಿಸಿ ಸ್ವಚ್ಛತಾ ಅಭಿಯಾನಕ್ಕೆ ಕೈ ಜೋಡಿಸಬೇಕು ಎಂದರು.

ನಾವು ಮನೆಯನ್ನು ಹೇಗೆ ಸ್ವತ್ಛವಾಗಿ ಇಟ್ಟುಕೊಳ್ಳುತ್ತೇವೆಯೋ ಹಾಗೆಯೇ ನಮ್ಮ ಸುತ್ತಲಿನ ಪರಿಸರ ಸ್ವಚ್ಛವಾಗಿಡಲು ಮನಸ್ಸು ಮಾಡಬೇಕಾಗಿದೆ. ನಮ್ಮ ಜಿಲ್ಲೆಯಲ್ಲಿ ಪೌರ ಕಾರ್ಮಿಕರ ಕೊರತೆಯಿದ್ದು, ಸರ್ಕಾರದ ಗಮನಕ್ಕೆ ತರಲಾಗಿದೆ. ಶೀಘ್ರದಲ್ಲೇ ಹೊಸ ಕಾರ್ಮಿಕರ ನಿಯೋಜನೆ ಆಗುತ್ತದೆ ಎಂದರು.

ನಗರಸಭೆ ಅಧ್ಯಕ್ಷ ವಿಲಾಸ್‌ ಪಾಟೀಲ್‌ ಮಾತನಾಡಿ, ಸ್ವಚ್ಛ ಭಾರತ ಸುಂದರ ಭಾರತವಾಗುವುದರಲ್ಲಿ ವಿದ್ಯಾರ್ಥಿಗಳು, ಯುವಕರ ಮತ್ತು ಜನರ ಪಾತ್ರ ಮುಖ್ಯವಾದುದು. ನಮ್ಮ ಮನೆಗಳಲ್ಲಿ ಉತ್ಪತ್ತಿಯಾಗುವ ಕಸಗಳನ್ನು ವಿಂಗಡಣೆ ಮಾಡಿ ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಿ ನಗರ ಸ್ವಚ್ಛತೆಗೆ ಶ್ರಮಿಸೋಣ ಎಂದರು.

ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ಕಲಾಲ್‌, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಶಾ ಆಲಂ ಹುಸೇನ್‌, ನಗರಸಭೆ ಆಯುಕ್ತ ಬಕ್ಕಪ್ಪ, ಕಾರ್ಮಿಕ ಇಲಾಖೆ ಅಧಿಕಾರಿ ಉಮಾಶ್ರೀ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ ಹಾಗೂ ನಗರಸಭೆ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.