ನೀರಿನ ಸಮಸ್ಯೆಯಾದರೆ ಪಿಡಿಒಗಳೇ ಹೊಣೆ
Team Udayavani, Apr 17, 2020, 3:57 PM IST
ಲಿಂಗಸುಗೂರು: ತಾಲೂಕು ಪಂಚಾಯತ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಇಒ ಪಂಪಾಪತಿ ಹಿರೇಮಠ ಮಾತನಾಡಿದರು.
ಲಿಂಗಸುಗೂರು: ತಾಲೂಕಿನಲ್ಲಿ ಕುಡಿಯುವ ಸಮಸ್ಯೆ ಉದ್ಭವಿಸಿದರೆ ಅದಕ್ಕೆ ನಿಮ್ಮನ್ನೇ ನೇರ ಹೊಣೆಯನ್ನಾಗಿ ಮಾಡಲಾಗುವುದು ಎಂದು ತಾಪಂ ಇಒ ಪಂಪಾಪತಿ ಹಿರೇಮಠ ಪಿಡಿಒಗಳಿಗೆ ಎಚ್ಚರಿಸಿದ್ದಾರೆ.
ತಾಪಂ ಸಭಾಂಗಣದಲ್ಲಿ ಗುರುವಾರ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪಿಡಿಒ, ಜೆಇ, ಕಂದಾಯ ನಿರೀಕ್ಷಕರ ಸಭೆ ನಡೆಸಿ ಮಾತನಾಡಿದ ಅವರು, ಕೋವಿಡ್ ಭೀತಿ ಹಾಗೂ ಬೇಸಿಗೆ ಇರುವುದರಿಂದ ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣವೇ ಸ್ಪಂದಿಸಬೇಕು. ಕಳೆದ ವರ್ಷ ಕುಡಿವ ನೀರಿನ ಸಮಸ್ಯೆ ಇದ್ದ ಗ್ರಾಮಗಳ ಬಗ್ಗೆ ಹೆಚ್ಚಿನ ಕಾಳಜಿವಹಿಸಿ ಅಗತ್ಯ ಕ್ರಮಕ್ಕೆ ಮುಂದಾಗಬೇಕು. ಒಂದು ವೇಳೆ ಹೊಸ ಬೋರ್‌ವೆಲ್ ಕೊರೆಯುವ ಅಗತ್ಯವಿದ್ದಲ್ಲಿ ಭೂ ವಿಜ್ಞಾನಿಗಳು ಸೂಚಿಸುವ ಕಡೆಗೆ ಬೋರ್‌ವೆಲ್ ಕೊರೆಸಬೇಕು. ಜಲ ಮೂಲಗಳು ಸಿಗದಿದ್ದಲ್ಲಿ ಖಾಸಗಿ ಬೋರ್ ವೆಲ್‌ಗಳಿಂದ ನೀರಿನ ವ್ಯವಸ್ಥೆ ಕಲ್ಪಿಸಲು ಮುಂದಾಗಿ ಎಂದರು. ಈ ವೇಳೆ ತಹಶೀಲ್ದಾರ್ ಚಾಮರಾಜ ಪಾಟೀಲ್, ಪಿಡಿಒ ಸೇರಿದಂತೆ ಕಂದಾಯ ನಿರೀಕ್ಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
Sandalwood: ‘ಕುಲದಲ್ಲಿ ಕೀಳ್ಯಾವುದೋ’ ಆಡಿಯೋ ಮಾರಾಟ
Darshan: ಜಾಮೀನು ಹಿನ್ನೆಲೆ: ಮತ್ತೆ ಕೋರ್ಟ್‌ಗೆ ಹಾಜರಾದ ದರ್ಶನ್
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.