ಲಾಕ್‌ಡೌನ್ ನಿಯಮ ಉಲ್ಲಂಘನೆ: 1.28 ಲಕ್ಷ ರೂ. ದಂಡ ವಸೂಲಿ
Team Udayavani, Jul 18, 2020, 1:48 PM IST
ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಜಿಲ್ಲಾಡಳಿತ ಒಂದು ವಾರ ಲಾಕ್‌ಡೌನ್ ಜಾರಿಗೊಳಿಸಿದ್ದರೂ ಜನರು ಅನವಶ್ಯಕವಾಗಿ ತಿರುಗಾಡುವುದು ತಪ್ಪುತ್ತಿಲ್ಲ. ಅನಗತ್ಯವಾಗಿ ಸಂಚರಿಸುವವರಿಗೆ ಅಧಿಕಾರಿಗಳು ದಂಡ ಹಾಕಿ ಬಿಸಿ ಮುಟ್ಟಿಸುತ್ತಿದ್ದಾರೆ.
ನಗರದ ಪ್ರಮುಖ ಬೀದಿಗಳಲ್ಲಿಯೇ ಕೆಲವು ಕಡೆ ಆಟೋ ಸಂಚಾರವೂ ನಡೆಯುತ್ತಿದ್ದು, ಕೆಲವು ಕಡೆ ನಿಯಮ ಉಲ್ಲಂಘಿಸಿ ಚಹಾದಂಗಡಿ ತೆರೆಯಲಾಗಿದೆ. ನಿಯಮ ಉಲ್ಲಂಘಿಸಿ ಗುಟ್ಕಾ ಮತ್ತು ತಂಬಾಕು ಉತ್ಪನ್ನ ಮಾರಲಾಗುತ್ತಿದೆ. ಕೆಲವು ತಾತ್ಕಾಲಿಕ ಬಂಡಿ ಹೋಟೆಲ್‌ನಲ್ಲಿ ಉಪಹಾರ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಇನ್ನು ರಾಜ್ಯ ಹೆದ್ದಾರಿಯಲ್ಲಿರುವ ಕಂದಕೂರ ಗೇಟ್ ಬಳಿ ಹೋಟೆಲ್‌ನಲ್ಲಿ ಸಾಮಾಜಿಕ ಅಂತರ ಕಾಪಾಡದೇ ತಿಂಡಿ, ತಿನಿಸು ಸವಿಯುತ್ತಿರುವುದು ಕಂಡುಬಂದಿದೆ.
ಶುಕ್ರವಾರ ಲಾಕ್‌ಡೌನ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಿ, ಒಟ್ಟು 1,28,900 ರೂ. ದಂಡ ವಸೂಲಿ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ 72,800 ರೂ, ಜಿಲ್ಲಾ ಪೊಲೀಸ್ ವತಿಯಿಂದ ಮಾಸ್ಕ್ ಧರಿಸದ 236 ಸಾರ್ವಜನಿಕರಿಂದ 26900 ರೂ, ಸಾಮಾಜಿಕ ಅಂತರ ಕಾಪಾಡದ 16 ಸಾರ್ವಜನಿಕರಿಗೆ 3200 ರೂ. ದಂಡ ವಿಧಿ ಸಲಾಗಿದೆ. ತಂಬಾಕು, ಗುಟ್ಕಾ, ಪಾನ್ ಹಾಗೂ ಮದ್ಯ ಸೇವನೆ ಮಾಡಿದ್ದ 68 ಜನರಿಂದ 10,100 ರೂ. ದಂಡ ವಸೂಲಿ ಮಾಡಿ ಐ.ಎಂ.ವಿ. ಕಾಯ್ದೆ ಅಡಿಯಲ್ಲಿ 39 ಪ್ರಕರಣಗಳನ್ನು ದಾಖಲಿಸಿ 15,900 ರೂ. ದಂಡ ಹಾಕಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.