ಲೋಕ ಅದಾಲತ್‌ನಲ್ಲಿ 777 ಪ್ರಕರಣ ಇತ್ಯರ್ಥ
Team Udayavani, Dec 17, 2019, 1:22 PM IST
ಯಾದಗಿರಿ: ಜಿಲ್ಲೆ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಬಾಕಿ ಇದ್ದ ಒಟ್ಟು 663 ಪ್ರಕರಣ ಮತ್ತು 114 ವಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದ್ದು, ಒಟ್ಟು1,28,77,817 ರೂ. ಮೊತ್ತ ಸಂದಾಯ ಮಾಡಲಾಗಿದೆ.
ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಬೆಂಗಳೂರಿನ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅಶೋಕ ಎಸ್.ಕಿಣಗಿ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾ ಧೀಶ ಶಿವನಗೌಡ ಜಿಲ್ಲಾ ನ್ಯಾಯಾಲಯದಲ್ಲಿ ಜಂಟಿಯಾಗಿ ಪ್ರಕರಣ ಇತ್ಯರ್ಥ ಮಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೊಡೆ ಇದ್ದರು.