Yadagiri: ಡಿಎಚ್ಓ ಮನೆ ಮೇಲೆ ಲೋಕಾಯುಕ್ತರ ದಾಳಿ
Team Udayavani, Dec 5, 2023, 10:11 AM IST
ಯಾದಗಿರಿ: ಬೆಳ್ಳಂ ಬೆಳಿಗ್ಗೆ ಯಾದಗಿರಿ ಡಿಎಚ್ಓ ಮನೆ ಮೇಲೆ ದಾಳಿ ನಡೆಸಿ, ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಡಿಎಚ್ ಓ ಡಾ.ಪ್ರಭುಲಿಂಗ ಮಾನಕರ್ ಅವರ ಮನೆ ಮೇಲೆ ಡಿ.5ರ ಮಂಗಳವಾರ ಮುಂಜಾನೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಎರಡು ಗಂಟೆಗಳಿಂದ ವಿವಿಧ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಯಾದಗಿರಿ ನಗರದಲ್ಲಿನ ಡಿಎಚ್ಓ ಕಚೇರಿ ಹಾಗೂ ಬಾಡಿಗೆ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ಯಾದಗಿರಿ ಡಿಎಚ್ಓ ಡಾ.ಪ್ರಭುಲಿಂಗ ಮಾನಕರ್ ಲೋಕಾಯುಕ್ತ ದಾಳಿ ವೇಳೆ ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಕಲಬುರಗಿ ಲೋಕಾಯುಕ್ತ ಎಸ್ಪಿ ಎ.ಆರ್. ಕರ್ನುಲ್ ಮಾರ್ಗದರ್ಶನದಲ್ಲಿ ಹಾಗೂ ಲೋಕಾಯುಕ್ತ ಡಿ.ವೈ.ಎಸ್.ಪಿ. ಹಣಮಂತರಾಯ ನೇತೃತ್ವದಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.