ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ
Team Udayavani, Oct 6, 2017, 4:03 PM IST
ಯಾದಗಿರಿ: ಮಹಾಕಾವ್ಯ ರಾಮಾಯಣ ಗ್ರಂಥ ರಚಿಸಿದ ಮಹರ್ಷಿ ವಾಲ್ಮೀಕಿ ಅವರು ಜಗತ್ತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಜಿಪಂ ಅಧ್ಯಕ್ಷ ಬಸರೆಡ್ಡಿಗೌಡ ಮಾಲಿ ಪಾಟೀಲ ಅನಪುರ ಹೇಳಿದರು.
ನಗರದ ವಾಲ್ಮೀಕಿ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡ ಶ್ರೀಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸಂತ ಕವಿ ಮಹರ್ಷಿ ಅವರ ತತ್ವಾದರ್ಶಗಳು ಹಾಗೂ ಸಂದೇಶ ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜ ಬದಲಾವಣೆ ಆಗಲು ಸಾಧ್ಯವಿದೆ. ಸರಕಾರ ಪರಿಶಿಷ್ಟ ಪಂಗಡ ಜನರಿಗಾಗಿ ಅನೇಕ ಸೌಲಭ್ಯಗಳನ್ನು ನೀಡುತ್ತಾ ಬರುತ್ತಿದೆ. ಅಲ್ಲದೆ ಸಾಕಷ್ಟು ಅನುದಾನ ವ್ಯಯಿಸಿ ಪರಿಶಿಷ್ಟರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ಸರಕಾರಿ ಯೋಜನೆಗಳ ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಅವರು ಕರೆ ನೀಡಿದರು.
ಜಿಲ್ಲಾಧಿಕಾರಿ ಮಂಜುನಾಥ ಜೆ ಮಾತನಾಡಿ, ಶ್ರೀ ಮಹರ್ಷಿ ವಾಲ್ಮೀಕಿ ಅವರು ಮರೆಯಲಾಗದ ಮಹಾನ ಗ್ರಂಥವನ್ನು ನೀಡಿದ್ದಾರೆ. ನಾರದ ಋಷಿಗಳ ಆಜ್ಞೆಯಂತೆ ತಪ್ಪಸು ಮಾಡಿ, ಶ್ರೀರಾಮಚಂದ್ರನ ದರ್ಶನ ಪಡೆದ ಮಹಾನ ಸಂತ ಎಂದು ಹೇಳಿದರು.
ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿದಾಗ ಸಮುದಾಯ ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಅವರು ತಿಳಿಸಿದರು.
ಜಿಲ್ಲಾಡಳಿತದಿಂದ ವಾಲ್ಮೀಕಿ ಸಮುದಾಯದ ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳ ನಿರ್ವಹಣೆಗಾಗಿ 1 ಕೋಟಿ ವೆಚ್ಚದಲ್ಲಿ ಸುಂದರವಾಗಿ ವಾಲ್ಮೀಕಿ ಭವನ ನಿರ್ಮಿಸಲಾಗಿದೆ. ಇದನ್ನು ಸಮರ್ಥವಾಗಿ ಬಳಸಿಕೊಳ್ಳಲು ಅವರು ಸಲಹೆ ನೀಡಿದರು. ಈ ಸಂದರ್ಭ ನಗರಸಭೆ ಅಧ್ಯಕ್ಷೆ ಲಲಿತ ಮೌಲಾಲಿ ಅನಪುರ ಅವರು ಸಮಾರಂಭದ ಅಧ್ಯಕ್ಷತೆ
ವಹಿಸಿ ಮಾತನಾಡಿದರು.
ಮೋಟ್ನಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ಡಾ| ಗಾಳೆಪ್ಪ ಪೂಜಾರಿ ಉಪನ್ಯಾಸ ನೀಡಿ, ಶ್ರೀ ಮಹರ್ಷಿ ವಾಲ್ಮೀಕಿ ಅವರು ಕೇವಲ ಒಂದೇ ಸಮುದಾಯಕ್ಕೆ ಸೀಮಿತವಾಗದೆ ಬಹುಸಮುದಾಯಕ್ಕೂ ಪೂರಕವಾದ ಗ್ರಂಥವನ್ನು ನೀಡಿದ ಮಹಾನ ಋಷಿ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಾದ ಬಸವರಾಜಪ್ಪ ಗೌಡಗೇರಾ, ಎಮ್. ಮಹಾದೇವಪ್ಪ ಮುಂಡರಗಿ, ಕೃಷ್ಣಪ್ಪಗೌಡ ಆಲ್ದಾಳ, ಶಾಂತಗೌಡ ಚೆನ್ನಪಟ್ನ, ರಾಮಲಿಂಗಪ್ಪ ಅರಳಳ್ಳಿ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ತಾಪಂ ಅಧ್ಯಕ್ಷ ಬಾಷು ಎಸ್. ರಾಠೊಡ, ಜಿ.ಪಂ. ಸದಸ್ಯ ಶಿವಲಿಂಗಪ್ಪ ಪುಟಗಿ, ಜಿಪಂ ಸಿಇಒ ಡಾ| ಅವಿನಾಶ ಮೆನನ್ ರಾಜೇಂದ್ರನ್, ನಗರಸಭೆ ಪೌರಾಯು ಸಂಗಪ್ಪ ಉಪಾಸೆ, ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ
ಸಮಿತಿ ಜಿಲ್ಲಾಧ್ಯಕ್ಷ ಮರೆಪ್ಪನಾಯಕ ಮಗ್ಧಂಪೂರು, ಮುಖಂಡಾರದ ಸಿದ್ದನಗೌಡ ಪಾಟೀಲ ಕರಿಭಾವಿ, ಶಾಂತಗೌಡ ಚೆನ್ನಪಟ್ನ ಸೇರಿದಂತೆ ಇತರರು ಇದ್ದರು. ಜೋತಿಲತಾ ತಡಬಿಡಿಮಠ ನಿರೂಪಿಸಿದರು.
ಸಮಾಜ ಕಲ್ಯಾಣ ಉಪನಿರ್ದೇಶಕ ಎಂ.ಎಸ್. ಅಲ್ಲಾ ಬಕಷ್ ಸ್ವಾಗತಿಸಿದರು. ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಗಣಪತಿ ಪೂಜಾರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.