ಆತ್ಮಹತ್ಯೆ ತಡೆಗೆ ಅರಿವು ಮೂಡಿಸಿ
Team Udayavani, Sep 9, 2017, 5:23 PM IST
ಯಾದಗಿರಿ: ಮಾನವ ಜನ್ಮ ಅತಿ ಶ್ರೇಷ್ಠವಾದದ್ದು, ತಿಳಿವಳಿಕೆ ಇಲ್ಲದೇ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಶಾಸಕ ಡಾ| ಎ.ಬಿ. ಮಾಲಕರೆಡ್ಡಿ ಕಳವಳ ವ್ಯಕ್ತಪಡಿಸಿದರು.
ನಗದ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಇಲಾಖೆ (ಮಾನಸಿಕ ವಿಭಾಗ) ಆಶ್ರಯದಲ್ಲಿ ಶುಕ್ರವಾರ ನಡೆದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಮಾನಸಿಕ ಒತ್ತಡ, ಖನ್ನತೆ ಕಾಯಿಲೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ಜನರು ಆತ್ಮಹತ್ಯೆ ಶರಣಾಗುತ್ತಿದ್ದಾರೆ. ಇದರಿಂದ ಜೀವನದಲ್ಲಿ ಯಾವುದೇ ಸಾಧನೆ ಮಾಡಿದಂತಾಗುವುದಿಲ್ಲ. ಜೀವನವನ್ನು ಎದುರಿಸುವ ಧೈರ್ಯ ಬೆಳೆಸಿಕೊಳ್ಳಬೇಕು ಎಂದರು. ಪ್ರತಿ ವರ್ಷ 10 ಲಕ್ಷ ಜನರು ಜಗತ್ತಿನಲ್ಲಿ ಆತ್ಮಹತ್ಯೆಯಿಂದ ಸಾಯುತ್ತಿದ್ದಾರೆ. ಮಾನವನಿಗೆ ತಿಳಿವಳಿಕೆ ಮುಖ್ಯ. ಇದನ್ನು ನಾವು ಅರಿತು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು.
ಆತ್ಮಹತ್ಯೆ ತಡೆಯಲು ಅನೇಕ ರೀತಿಯ ತಿಳಿವಳಿಕೆ ನೀಡಲು ಸರ್ಕಾರ ಯೋಜನೆ ರೂಪಿಸಿದೆ. ಇದನ್ನು ತಡೆಗಟ್ಟಲು ಎಲ್ಲರೂ ಶ್ರಮಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಮಂಜುನಾಥ ಜೆ. ಮಾತನಾಡಿ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷ ಒಂದೊಂದು
ಘೋಷಣೆ ಮಾಡುತ್ತಿದೆ. ಈ ವರ್ಷದ ಘೋಷಣೆ ಟೇಕ್ ಎ ಮಿನಿಟ್ ಚೇಂಜ್ ಎ ಲೈಫ್ ಎಂದು ಹೇಳಿದರು. ಪ್ರತಿ ವರ್ಷ ಸೆ. 10ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನ ಆಚರಿಸಬೇಕಾಗಿತ್ತು. ಅನಿವಾರ್ಯ ಕಾರಣದಿಂದ ಇದನ್ನು
ಈ ದಿನ ಅಚರಿಸಲಾಗುತ್ತಿದೆ. ಆತ್ಮಹತ್ಯೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದು ಹೇಳಿದರು.
ರೈತರು ಸಾಲ ತೀರಿಸಲಾಗದು ಎಂದು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಇದನ್ನು ತಡೆಗಟ್ಟಲು ಜಾಗೃತಿ
ಮೂಡಿಸಬೇಕೆಂದು ಅವರು ಹೇಳಿದರು. ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ| ಭಗವಂತ ಅನವಾರ ಮಾತನಾಡಿ, ಮಾನಸಿಕ ರೋಗಿಗಳಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಔಷಧ ಲಭ್ಯವಿದೆ. ಮಾನಸಿಕ ಆರೋಗ್ಯದ ಬಗ್ಗೆ ವೈದ್ಯಾಧಿಕಾರಿಗಳು, ಸಿಬ್ಬಂದಿ ಹಾಗೂ ಮಾನಸಿಕ ಆರೋಗ್ಯ ಕಾರ್ಯಕರ್ತರಿಗೆ ತರಬೇತಿ ನೀಡಲಾಗುತ್ತಿದೆ. ಹೀಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಚಿಕ್ಸಿತೆ ಪಡೆಯಬಹುದು ಎಂದು ಅವರು ಹೇಳಿದರು.
ವೇದಿಕೆ ಮೇಲೆ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ರಾಮರಡ್ಡಿ ತಂಗಡಗಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ
ಸಮಿತಿ ಸರಸ್ವತಿ ಸುಭಾಶಚಂದ್ರ ಹೊನಗೇರಾ, ಪದವಿ ಕಾಲೇಜಿನ ಪ್ರಾಂಶುಪಾಲ ಸುಭಾಶ್ಚಂದ್ರ ಕೌಲಗಿ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದರ ಶಂಕರ ಅವರು ನಿರೂಪಿಸಿ, ವಂದಿಸಿದರು.
ಜಾಗೃತಿ ಜಾಥಾ: ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ವಿಶ್ವ ಆತ್ಮಹತ್ಯೆ ತಡಗಟ್ಟುವ ದಿನಾಚರಣೆ ಜಾಥಾಕ್ಕೆ ಜಿಲ್ಲಾಧಿಕಾರಿ ಮಂಜುನಾಥ ಜೆ. ಅವರು ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.