ವಸತಿ ರಹಿತರಿಗೆ ಸೌಕರ್ಯ ಕಲ್ಪಿಸಲು ಕ್ರಮ
ಮೂಲ ಸೌಕರ್ಯ ಒದಗಿಸಲು ನಗರಸಭೆ ಶಾಸಕರ ನಿಧಿಯಲ್ಲಿ ಕ್ರಮ ಕೈಗೊಳ್ಳಲಾಗುವುದು
Team Udayavani, Feb 25, 2021, 6:52 PM IST
ಯಾದಗಿರಿ: ಜಿಲ್ಲೆಯಲ್ಲಿ 12 ಸಾವಿರ ನಿವೇಶನ ರಹಿತರಿದ್ದು ನಗರದ 5 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಸರ್ಕಾರಿ ಜಮೀನು ಲಭ್ಯವಿಲ್ಲದರಿಂದ 18 ಎಕರೆ ಖಾಸಗಿ ಭೂಮಿ ಖರೀದಿಸಲು ಜಿಲ್ಲಾಡಳಿತ ಪ್ರಕ್ರಿಯೆ ಪ್ರಾರಂಭಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಹೇಳಿದರು.
ನಗರದ ಬಾಬು ಜಗಜೀವನರಾಮ್ ಭವನದಲ್ಲಿ ಸ್ಲಂ ಜನಾಂದೋಲನ-ಕರ್ನಾಟಕ ಹಾಗೂ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿದ್ದ ನಿವೇಶನ ರಹಿತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಾವಿತ್ರಿಬಾಯಿ ಫುಲೆ ಸಂಘಟನೆ ಕಳೆದ ಮೂರು ವರ್ಷಗಳಿಂದ ನಿವೇಶನ ರಹಿತರಿಗೆ ಭೂಮಿಗಾಗಿ ಹೋರಾಟ ನಡೆಸಿದ್ದು, ಸಮಾವೇಶದಲ್ಲಿ ಸಲ್ಲಿಸಿದ 559 ಕುಟುಂಬಗಳ ಅರ್ಹತೆ ಪಟ್ಟಿ ಪರಿಶೀಲಿಸಿ ಆದಷ್ಟು ಬೇಗ ಮಂಜೂರಾತಿ ನೀಡಲಾಗುವುದು. ಹೀಗಾಗಿ ಜಿಲ್ಲಾಡಳಿತ ಸರ್ಕಾರಿ ಇಲ್ಲವೇ ಖಾಸಗಿ ಭೂಮಿ ಖರೀದಿಸಿ ನೀಡಲು ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಶಾಸಕರ ಪರವಾಗಿ ಮನವಿ ಸ್ವೀಕರಿಸಿದ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ಈಗಾಗಲೇ ವಾರ್ಡ್‌ವಾರು ಜನರ ಸಮಸ್ಯೆಗಳ ಬಗ್ಗೆ ಜನರ ಜತೆ ಜನ ಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಈ ವೇಳೆ ನಿವೇಶನ ರಹಿತರ ಮತ್ತು ಬಾಡಿಗೆದಾರರ ಸಮಸ್ಯೆ ಮನವರಿಕೆಯಾಗಿದೆ. ಸರ್ಕಾರ ಮಟ್ಟದಲ್ಲಿ ಸ್ಲಂ ಜನರಿಗೆ ಭೂಮಿ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಕೊಳಚೆ ಪ್ರದೇಶದಲ್ಲಿ ಅಗತ್ಯ ಮೂಲ ಸೌಕರ್ಯ ಒದಗಿಸಲು ನಗರಸಭೆ ಶಾಸಕರ ನಿಧಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಸ್ಲಂನಲ್ಲಿ ನಿವೇಶನ ಇದ್ದವರಿಗೆ ಪ್ರಧಾನಿ ಆವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗುವುದು ಎಂದರು. ಸ್ಲಂ ಜನಾಂದೋಲನ ರಾಜ್ಯಾಧ್ಯಕ್ಷ ಎ.ನರಸಿಂಹಮೂರ್ತಿ ಮಾತನಾಡಿ, ನಗರ ಪ್ರದೇಶದಲ್ಲಿ ಶೇ.50 ರಷ್ಟು ಜನರಿಗೆ ಮನೆಗಳಿಲ್ಲದೇ ಬಾಡಿಗೆ ಮನೆಯಲ್ಲಿ ಬದುಕುತ್ತಿರುವುದರಿಂದ ದುಡಿಮೆಯ ಶೇ.30ರಷ್ಟು ಹಣವನ್ನು ಬಾಡಿಗೆಗೆ ಮೀಸಲಿಡಬೇಕಾಗಿದೆ. ಹಾಗಾಗಿ ಜ್ವಲಂತ ಸಮಸ್ಯೆ ಪರಿಗಣಿಸಿ ಜನಸಂಖ್ಯೆಗೆ ಅನುಗುಣವಾಗಿ ನಗರ ಪ್ರದೇಶದಲ್ಲಿ ಭೂಮಿ ನೀಡಬೇಕು. ಕರ್ನಾಟಕ
ಭೂ ಮಂಜೂರಾತಿ ನಿಯಮ 1969 ಕಲಂ 18ಎ ಅನ್ವಯ ಜಿಲ್ಲಾಡಳಿತ ನಿವೇಶನ ರಹಿತರಿಗೆ ಸರ್ಕಾರಿ ಭೂಮಿ ಗುರುತಿಸಿ ನೀಡಲು ಒತ್ತಾಯಿಸಿದರು.
ಪೌರಾಯುಕ್ತ ಬಿ.ಟಿ. ನಾಯಕ, ಕಾರ್ಯಪಾಲಕ ಅಭಿಯಂತರು ಬಕ್ಕಪ್ಪ, ಸ್ಲಂ ವಿಭಾಗೀಯ ಸಂಚಾಲಕ ಜನಾರ್ದನ ಹಳ್ಳಿಬೆಂಚಿ, ಸಂಗೀತಾ ಹಪ್ಪಳ, ಹಣಮಂತ ಶಹಾಪುರಕರ್, ರೇಣುಕಾ ಸರಡಗಿ,ಮುನಿಯಪ್ಪ, ಆನಂದ ಚಟ್ಟೆರಕರ್ ಇದ್ದರು. ವಿವಿಧ ಕೊಳಚೆ ಪ್ರದೇಶಗಳಿಂದ ನಿವೇಶನ ರಹಿತರ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.