ರಕ್ತದಾನದಿಂದ ಮಾನಸಿಕ ಸದೃಢತೆ
Team Udayavani, Oct 7, 2017, 5:34 PM IST
ಶಹಾಪುರ: ನಿಗದಿತ ಸಮಯನುಸಾರ ರಕ್ತದಾನ ಮಾಡುವುದರಿಂದ ಮನುಷ್ಯ ಆರೋಗ್ಯಯುತ ಬದುಕಲು ಸಾಗಿಸಬಹುದು ಎಂದು ಕೃಷಿ ಮಹಾ ವಿದ್ಯಾಲಯದ ಡೀನ್ ಡಾ| ಸುರೇಶ ಪಾಟೀಲ್ ಹೇಳಿದರು.
ಸಮೀಪದ ಭೀಮರಾಯನಗುಡಿಯ ಕೃಷಿ ಮಹಾವಿದ್ಯಾಲಯದಲ್ಲಿ ರೆಡ್‌ಕ್ರಾಸ್ ಸಂಸ್ಥೆ ಯಾದಗಿರ, ಜಿಲ್ಲಾಡಳಿತ ಮತ್ತು ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಯಾದಗಿರ ಹಾಗೂ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನೇಷನ್ ಸೊಸೈಟಿ ಇವಗಳ ಆಶ್ರಯದಲ್ಲಿ ನಡೆದ ವಿಶ್ವ ರಕ್ತದಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಕ್ತದಾನ ಮಾಡುವುದರಿಂದ ಮನುಷ್ಯ ಶಾರೀರಿಕ ಮತ್ತು ಮಾನಸಿಕವಾಗಿ ಸದೃಢವಾಗುತ್ತಾನೆ. ಅಲ್ಲದೆ ನಾವುಗಳು
ಮಾಡಿದ ರಕ್ತದಾನದಿಂದ ಬೇರೆಯವರ ಜೀವ ಉಳಿಯಲು ಸಹಕಾರಿ ಆಗಲಿದೆ ಎಂದರು.
ಆರತಿ ಧನಶ್ರೀ ಮಾತನಾಡಿ, ರಕ್ತದಾನ ಮಾಡುವಾಗ ದಾನಿಯು ಎಚ್ಚರಿಕೆ ವಹಿಸುವ ಕ್ರಮಗಳು, ರಕ್ತದಾನ ಮಾಡುವುದರಿಂದ ದಾನಿಗಳಿಗೆ ಆಗುವ ಪ್ರಯೋಜನಗಳ ಕುರಿತು ತಿಳಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣಾ
ಧಿಕಾರಿ ಡಾ| ಗುರುರಾಜ ಹೀರೆಗೌಡರ ಪ್ರಾಸ್ತಾವಿಕವಾಗಿ ಮಾತನಾಡಿ, ವಿಶ್ವ ರಕ್ತದಾನದ ಆಚರಣೆ ಪ್ರಾಮುಖ್ಯತೆ ಕುರಿತು ಹೇಳಿದರು. ಡಾ| ಸೌಮ್ಯ, ಡಾ| ಸತೀಶ, ಡಾ| ವಿಜಯಕುಮಾರ, ದೇವರಾಜ ಚಟ್ಟಿ ವಕೀಲರು, ಭೀಮಾಶಂಕರ, ಗುಂಡುರಾವ, ಅಂಬರೀಶ ಭೂತಿ ಇದ್ದರು. ಇದೇ ಸಂದರ್ಭದಲ್ಲಿ ವಿಶ್ವ ರಕ್ತದಾನ ದಿನಾಚರಣೆ ಪ್ರಯುಕ್ತ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ರಕ್ತದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.