ಕುಷ್ಠರೋಗಿಗಳ ಕಾಲೋನಿಯಲ್ಲಿ ಮನೆ ನಿರ್ಮಾಣದ ಭರವಸೆ ನೀಡಿದ ಸಚಿವರು
ಕುಷ್ಠರೋಗಿಗಳಿಗೆ ಸಲಕರಣೆ ವಿತರಿಸಿದ ಸಚಿವ ಚವ್ಹಾಣ
Team Udayavani, Mar 7, 2021, 5:32 PM IST
ಯಾದಗಿರಿ: ಕುಷ್ಠರೋಗಿ ಕಾಲೋನಿಯ ನಿವಾಸಿಗಳಿಗೆ ಮನೆಗಳು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಪಶುಸಂಗೋಪನೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಸೂಚಿಸಿದರು.
ನಗರದ ಹೊರವಲಯದಲ್ಲಿರುವ ಕುಷ್ಠರೋಗಿ ನಿವಾಸಿಗಳ ಕಾಲೋನಿಗೆ ಭೇಟಿ ನೀಡಿ ಅಲ್ಲಿಯ ಜನರ ಅಹವಾಲು ಆಲಿಸಿದ ಬಳಿಕ ಮಾತನಾಡಿದ ಸಚಿವರು, ಕಾಲೋನಿಯಲ್ಲಿ 52 ಮನೆಗಳಿದ್ದು, ಬಹುತೇಕ ಮನೆಗಳ ಮೇಲ್ಚಾವಣಿ ಅಲ್ಲಲ್ಲಿ ಉದುರಿ ಬೀಳುತ್ತಿದೆ. ಹಾಗಾಗಿ ಮನೆ ನಿರ್ಮಿಸಬೇಕು. ಜೊತೆಗೆ ಕಾಂಪೌಂಡ್, ರಸ್ತೆ ನಿರ್ಮಾಣ ಮಾಡಬೇಕು, ಕುಡಿಯಲು ಸಮರ್ಪಕ ನೀರು ಪೂರೈಸಬೇಕು ಎಂದು ನಿವಾಸಿಗಳು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಕುಡಿಯುವ ನೀರನ್ನು ಕೂಡಲೇ ಪೂರೈಸಲು ಕ್ರಮ ಕೈಗೊಳ್ಳಬೇಕು. ರಸ್ತೆ, ಕಾಂಪೌಂಡ್ ನಿರ್ಮಾಣ ಬೇಗ ಮುಗಿಸಬೇಕು ಎಂದು ಸಂಬಂಧಪಟ್ಟ ಅ ಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಸಚಿವರು ರೋಗಿಗಳಿಗೆ ಊರುಗೋಲು, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಹಾಗೂ ಪಾದರಕ್ಷೆ ವಿತರಿಸಿದರು. ಈ ವೇಳೆ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ್, ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ್ ಯಡಿಯಾಪೂರ, ನಗರಸಭೆ ಅಧ್ಯಕ್ಷ ವಿಲಾಸ್ ಪಾಟೀಲ್, ಜಿಲ್ಲಾ ಧಿಕಾರಿ ಡಾ| ರಾಗಪ್ರಿಯಾ.ಆರ್, ಜಿಪಂ ಸಿಇಒ ಶಿಲ್ಪಾ ಶರ್ಮಾ, ಅಪರ ಜಿಲ್ಲಾ ಧಿಕಾರಿ ಪ್ರಕಾಶ್ ಜಿ. ರಜಪೂತ್, ಸಹಾಯಕ ಆಯುಕ್ತ ಶಂಕರ್ ಗೌಡ ಸೋಮನಾಳ, ನಗರಸಭೆ ಆಯುಕ್ತ ಭೀಮಣ್ಣ ಬಿನಾಯಕ್, ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ಬಕ್ಕಪ್ಪ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.