ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಸಕ ಕಂದಕೂರ ಭೇಟಿ
Team Udayavani, Oct 23, 2020, 7:32 PM IST
ಯಾದಗಿರಿ: ಗುರುಮಠಕಲ್ ಮತಕ್ಷೇತ್ರದಲ್ಲಿ ಹಿಂದೆಂದು ಕಂಡರಿಯದ ಮಳೆಯಾಗಿ ಲೆಕ್ಕಕ್ಕೆ ಸಿಗದ ಹಾನಿಯಾಗಿದ್ದು, ಸರ್ಕಾರ ಪರಿಹಾರ ಒದಗಿಸುವ ಕಾರ್ಯ ಶೀಘ್ರ ಆರಂಭಿಸಬೇಕೆಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಆಗ್ರಹಿಸಿದರು.
ಮತಕ್ಷೇತ್ರದ ಲಿಂಗೇರಿ, ಕೌಳೂರು ಹಾಗೂ ಮಲ್ಹಾರ್ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹದಿಂದಾಗಿರುವ ಹಾನಿ ಪರಿಶೀಲಿಸಿ ಮಾತನಾಡಿದ ಅವರು, ಅತಿವೃಷ್ಟಿಯಿಂದ ಆಗಿರುವ ಬೆಳೆಹಾನಿ, ಕೊಚ್ಚಿಕೊಂಡು ಹೋದ ರಸ್ತೆಗಳು ಹಾಗೂ ಸೇತುವೆಗಳು ಖುದ್ದಾಗಿ ವೀಕ್ಷಿಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸೂಚನೆ ನೀಡಿದರು.
ಇದೇ ವೇಳೆ ಸಮಸ್ಯೆಗೊಳಗಾದ ಸಂತ್ರಸ್ತರ ಸಮಸ್ಯೆ ಆಲಿಸಿದರು. ಕ್ಷೇತ್ರದಲ್ಲಿ ಅಪರ ಪ್ರಮಾಣದ ಬೆಳೆ ಹಾನಿಯಾಗಿದ್ದಲ್ಲದೇ ಮನೆಯಲ್ಲಿದ್ದ ದವಸ-ಧಾನ್ಯಗಳೆಲ್ಲ ನೀರು ಪಾಲಾಗಿದೆ. ಮನೆಗಳಿಗೆ ನೀರು ನುಗ್ಗಿ ಅವಾಂತರವಾಗಿದ್ದು, ಪರಿಸ್ಥಿತಿ ಅವಲೋಕಿಸಿರುವ ಮುಖ್ಯಮಂತ್ರಿಗಳು ಹೆಚ್ಚಿನ ಪರಿಹಾರ ನೀಡುವಂತೆ ಒತ್ತಾಯಿಸಿದರು.
ಮನೆ ಕುಸಿತ; ಪರಿಹಾರಕ್ಕೆ ಆಗ್ರಹ :
ಯಾದಗಿರಿ: ನಗರದ ಮುಸ್ಲಿಂಪುರ ಏರಿಯಾದಲ್ಲಿ ಭಾರೀ ಮಳೆಯಿಂದ ಮನೆ ಕುಸಿದು ಗಾಯಗೊಂಡ ಖಮರುನ್ ಬೇಗಂ ಅವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಬಹುಜನ ಸಮಾಜ ಪಾರ್ಟಿ ಆಗ್ರಹಿಸಿದೆ.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಜಿಲ್ಲಾಧ್ಯಕ್ಷ ಮಹಮ್ಮದ್ ತಜಮುಲ್, ನಗರಸಭೆ ವ್ಯಾಪ್ತಿಯ ಮುಸ್ಲಿಂಪುರದಲ್ಲಿ ಮಳೆಯಿಂದಾಗಿ ವೃದ್ಧೆಯ ಮನೆ ಬಿದ್ದು ಸಂಪೂರ್ಣ ಹಾನಿಯಾಗಿದ್ದು, ಸರ್ಕಾರದ ನಿಯಮದಂತೆ ಕುಟುಂಬಕ್ಕೆ ಪರಿಹಾರ ಸೌಲಭ್ಯ ಒದಗಿಸುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.