ಬಲದಂಡೆ ನಾಲೆ ಆಧುನೀಕರಣ ಕಾಮಗಾರಿ ಕಳಪೆ: ಮುರಾರಿ
Team Udayavani, Jul 27, 2022, 6:02 PM IST
ಲಿಂಗಸುಗೂರು: ನಾರಾಯಣಪುರ ಬಲದಂಡೆ ಮುಖ್ಯ ನಾಲೆ ಆಧುನೀಕರಣ ಕಾಮಗಾರಿ ಕಳಪೆ ಮಟ್ಟದಿಂದ ನಡೆಯುತ್ತಿದೆ ಎಂದು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಚ್.ಬಿ. ಮುರಾರಿ ಆರೋಪಿಸಿದರು.
ಗೋರೆಬಾಳ ಗ್ರಾಮದ ಹತ್ತಿರ ಬಲದಂಡೆ ನಾಲೆ ಕಾಮಗಾರಿ ಪರಿಶೀಲಿಸಿದ ಅವರು, ಕೃಷ್ಣಭಾಗ್ಯ ಜಲ ನಿಗಮದ ನಾಲೆ ನಿರ್ವಹಣೆ ಕಾಮಗಾರಿ ಹೆಸರಲ್ಲಿ ಕೋಟ್ಯಂತರ ಹಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ನಾರಾಯಣಪುರ ಮುಖ್ಯನಾಲೆಯ 11ನೇ ಕಿ.ಮೀ ಗೋರೆಬಾಳ ಹತ್ತಿರ ಬಾಕಿ ಉಳಿದ ಕೆಲಸ ಸಂಪೂರ್ಣ ಕಳಪೆಯಾಗಿದೆ ಎಂದು ಆರೋಪಿಸಿದರು.
ಈಗಾಗಲೇ ಎರಡು ದಿನಗಳಿಂದ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಸ್ಥಳಕ್ಕೆ ಖುದ್ದಾಗಿ ಊರಿನ ಗ್ರಾಮಸ್ಥರು ಮತ್ತು ರೈತ ಮುಖಂಡರು ಕೂಡಿಕೊಂಡು ಕಾಮಗಾರಿ ಬಂದ್ ಮಾಡಿಸಲಾಗಿದೆ. ಇಷ್ಟಾದರೂ ಕಾಮಗಾರಿ ನಡೆದ ಸ್ಥಳಕ್ಕೆ ಇದಕ್ಕೆ ಸಂಬಂಧಪಟ್ಟಂತೆ ಎಇಇ ಹಾಗೂ ಜೆಇ ಆಗಲಿ ಕಾಮಗಾರಿ ಸ್ಥಳದಲ್ಲಿ ಇಲ್ಲ. ಗುತ್ತಿಗೆದಾರರು ಸರ್ಕಾರದ ನಿಯಮ ಗಾಳಿಗೆ ತೂರಿ ಮನಬಂದಂತೆ ತರಾತುರಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಗುತ್ತೇದಾರರ ಮೇಲೆ ಕಾನೂನು ಕ್ರಮ ಜರುಗಿಸಿ ಲೈಸೆನ್ಸ್ ರದ್ದುಪಡಿಸಿ ಕಪ್ಪು ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿದರು.
ಈ ವೇಳೆ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲನಗೌಡ ರಾಂಪುರ್, ತಾಲೂಕು ಅಧ್ಯಕ್ಷ ಅಂಬರೀಶ ಸರ್ಕಾರ್, ಮುಖಂಡರಾದ ಧರ್ಮರಾಜ, ಶಂಕ್ರಪ್ಪ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.