ಶಾಶ್ವತ ಪರಿಹಾರಕ್ಕೆ ಹೆಚ್ಚಿನ ಅನುದಾನ
Team Udayavani, Jan 5, 2018, 4:23 PM IST
ಸುರಪುರ: ಕರ್ನಾಟಕ ಕೊಳಿಗೇರಿ ಅಭಿವೃದ್ಧಿ ಮಂಡಳಿ ಯೋಜನೆಯಡಿ ಗಾಂಧಿ ನಗರ ಹಾಗೂ ತಿಮ್ಮಾಪೂರದಲ್ಲಿ 16 ಲಕ್ಷ ವೆಚ್ಚದಲ್ಲಿ ಸಿ.ಸಿ. ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಗುದ್ದಲಿ ಪೂಜೆ ನೇರವೆರಿಸಿದರು.
ನಂತರ ಮಾತನಾಡಿದ ಅವರು, ನಗರದ ಪ್ರತಿ ವಾರ್ಡ್‌ಗಳಲ್ಲಿ ಸಿಸಿ ರಸ್ತೆ ಚರಂಡಿ ನಿರ್ಮಿಸಲಾಗಿದೆ. ಇತ್ತೀಚೆಗೆ ಒಳಚರಂಡಿ ಕಾಮಗಾರಿಯಿಂದ ನಗರದಲ್ಲಿ ಬಹುತೇಕ ರಸ್ತೆಗಳು ಹಾಳಾಗಿ ಹೋಗಿವೆ. ಆದ್ದರಿಂದ ಕೆಟ್ಟು ಹೋಗಿರುವ ಎಲ್ಲಾ ರಸ್ತೆಗಳನ್ನು ಪುನರ್ ನಿರ್ಮಿಸಲಾಗುತ್ತಿದ್ದು, ನಾಗರಿಕರು ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ನಗರದ ನೀರು ಸರಬರಾಜಿನಲ್ಲಿ ಆಗುತ್ತಿರುವ ಸಮಸ್ಯೆಯನ್ನು ಹೋಗಲಾಡಿಸಿ ಶಾಶ್ವತ ಪರಿಹಾರಕ್ಕಾಗಿ ಹೆಚ್ಚುವರಿ ಅನುದಾನ ಒದಗಿಸುವಂತೆ ಹುಣಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿದೆ. ಸಿಎಂ ಅವರು ಅನುದಾನ ನೀಡುವ ಬಗ್ಗೆ ಭರವಸೆ ನೀಡಿದ್ದಾರೆ. ಯಾವುದೇ ಕಾರಣಕ್ಕೆ ನಗರದ ಜನತೆಗೆ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಲು ನಗರಸಭೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು.
ತ್ವರಿತವಾಗಿ ಕಾಮಗಾರಿ ಆರಂಭಿಸಿ ಶೀಘ್ರ ಮುಗಿಸುವಂತೆ ಹಾಗೂ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆ
ಅಧಿಕಾರಿಗಳಿಗೆ ತಾಕೀತು ಮಾಡಿದರು.ನಗರಸಭೆ ಅಧ್ಯಕ್ಷೆ ಕವಿತಾ ಎಲಿಗಾರ, ಎಪಿಎಂಸಿ ಅಧ್ಯಕ್ಷ ನಿಂಗಣ್ಣ ಬಾದ್ಯಾಪುರ, ಮುಖಂಡರಾದ ವೆಂಕೊಬ ಯಾದವ, ಶಾಂತಗೌಡ ಚನ್ನಪಟ್ಟಣ, ಅಬ್ದುಲ ಗಫರ ನಗನೂರಿ, ಅಬ್ದುಲ ಅಲೀಮ ಗೋಗಿ, ಶೇಖ ಮೈಬೂಬ ಒಂಟಿ, ದಾವಲಸಾಬ ಚಿಟ್ಟೆವಾಲೆ, ನಾಸೀರ ಕುಂಡಾಲೆ, ಮುಕೀದ ಕುಂಡಾಲೆ, ನಾಗಪ್ಪ ಕಟ್ಟಮನಿ, ಜ್ಯೋತಿ ವೆಂಕಟರೆಡಿ, ಹುಸ್ಮಾನ ಅಲ್ಹಾತೆ, ನಟರಾಜ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.