ರೈಲಿಗೆ ಅಂಬಿಗರ ಚೌಡಯ್ಯ ಹೆಸರಿಡಿ
Team Udayavani, Sep 4, 2017, 4:21 PM IST
ಯಾದಗಿರಿ: ಎಕ್ಸ್‌ಪ್ರೆಸ್ ರೈಲಿಗೆ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಹೆಸರಿಡಬೇಕೆಂದು ಆಗ್ರಹಿಸಿ ಟೋಕರಿ ಕೋಲಿ ಸಮಾಜದ ಬಾಂಧವರು ನಗರದಲ್ಲಿ ರವಿವಾರ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಸುಭಾಶ್ಚಚಂದ್ರ ಬೋಸ್ ವೃತ್ತದಿಂದ ರೈಲ್ವೆ ನಿಲ್ದಾಣದವರೆಗೆ ಪ್ರತಿಭಟನೆ ನಡೆಸಿದ ಸಮಾಜದ ಬಾಂಧವರು, ಕೂಡಲೇ ಒಂದು ಎಕ್ಸ್‌ಪ್ರೆಸ್ ರೈಲಿಗೆ ನಿಜಶರಣ ಅಂಬಿಗರ ಚೌಡಯ್ಯನವರ ಹೆಸರಿಡಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಟೋಕರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಮಾತನಾಡಿ, 12ನೇ ಶತಮಾನದಲ್ಲಿ
ಸಮಾಜದ ಸುಧಾರಣೆಗೆ ಶ್ರಮಿಸಿದ ಬಸವಾದಿ ಶರಣರ ಸಾಲಿನಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರು ಪ್ರಮುಖರಾಗಿದ್ದಾರೆ. ಹರಿಗೋಲಿನಲ್ಲಿ ಹೊಳೆಯನ್ನು ದಾಟಿಸುವ ಕಾಯಕ ಮಾಡಿಕೊಂಡು ಜನರಿಗೆ ನದಿಯ
ಒಂದು ದಡದಿಂದ ಇನ್ನೊಂದು ದಡಕ್ಕೆ ಹೋಗಲು ಅನುವು ಮಾಡಿಕೊಡುತ್ತಾ ಅನೇಕ ವಚನಗಳನ್ನು ರಚಿಸುವ ಮೂಲಕ ಸಮಾಜದಲ್ಲಿ ಪರಿವರ್ತನೆ ತರಲು ಮಹತ್ವದ ಕೊಡುಗೆ ನೀಡಿದ್ದಾರೆ. ಕಬ್ಬಲಿಗ ಸಮಾಜದಿಂದ ಬಂದು
ಮಹಾನ್ ವಚನಗಳನ್ನು ರಚಿಸುವ ಮೂಲಕ ಕನ್ನಡ ನಾಡಿಗೆ ಹಾಗೂ ದೇಶಕ್ಕೆ ಬಹುದೊಡ್ಡ ಕೊಡುಗೆ ಕೊಟ್ಟಿದ್ದಾರೆ ಎಂದರು.
ಸಾಧನೆ ಮಾಡಿದ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಹೆಸರು ಚಿರಸ್ಥಾಯಿಯಾಗಿ ಉಳಿವಂತಾಗಲು ಇವರ ಹೆಸರನ್ನು ಕರ್ನಾಟಕದಲ್ಲಿ ಸಂಚರಿಸುವ ಎಕ್ಸ್‌ಪ್ರೆಸ್ ರೈಲಿಗೆ ಹೆಸರು ಇಡಬೇಕೆಂದು ಒತ್ತಾಯಿಸಿದರು.
ಈಗಾಗಲೇ ರಾಜ್ಯ ಸರಕಾರ ಹಿಂದುಳಿದ ಕೋಲಿ ಕಬ್ಬಲಿಗ ಸಮಾಜಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶ್ರೀ ಚೌಡಯ್ಯನವರ ಜಯಂತಿಯನ್ನು ಸರಕಾರದ ವತಿಯಿಂದ ಆಚರಿಸುವ ನಿರ್ಧಾರ ಕೈಗೊಂಡಿದೆ. ಜೊತೆಗೆ ಕೇಂದ್ರ ಸರಕಾರವೂ ಈ ಕುರಿತು ಸಹಕರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ರೈಲ್ವೆ ನಿಲ್ದಾಣದ ವ್ಯವಸ್ಥಾಪಕರ ಮುಖಾಂತರ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ರಮೇಶ, ನಾಗಪ್ಪ, ಸಿದ್ದಪ್ಪ, ಅಶೋಕ, ಬಿ. ಮಹೇಶ, ವಿಜಯ ಹಣಮಂತ, ಮಲ್ಲಪ್ಪ, ಮಹಾದೇವ, ಎಸ್.ಪಿ. ಕಟ್ಟಿಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.