ಏ.10ರ ವರೆಗೆ ನೀರು ಹರಿಸಲು ಒತ್ತಾಯ

ಅಗ್ನಿ ಬಳಿ ಕಾಲುವೆ ದುರಸ್ತಿ ಮಾಡಿ ರೈತರಿಗೆ ಅನುಕೂಲ ಕಲ್ಪಿಸಿ ರೈತರ ಬೇಡಿಕೆ ಈಡೇರಿಸಿ

Team Udayavani, Mar 19, 2020, 12:29 PM IST

19-March-8

ನಾರಾಯಣಪುರ: ಕೃಷ್ಣಾ ಅಚ್ಚುಕಟ್ಟು ಭಾಗದ ಹಿಂಗಾರು ಹಂಗಾಮಿನ ಬೆಳೆಗಳಿಗೆ ಏ.10ರ ವರೆಗೆ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಮುಖ್ಯ ಇಂಜಿನಿಯರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಪ್ರಭಾರಿ ಮುಖ್ಯ ಇಂಜಿನಿಯರ್‌ ರಂಗರಾಮ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ನಾಯಕಿ ಮಹಾದೇವಿ ಬೇವಿನಾಳಮಠ, ಈಗಾಗಲೇ ಕೃಷ್ಣಾ ಅಚ್ಚುಕಟ್ಟು ಭಾಗದ ರೈತರು ಕಾಲುವೆ ನೀರನ್ನೇ ನಂಬಿ ಹಿಂಗಾರು ಹಂಗಾಮಿನ ಶೇಂಗಾ, ಭತ್ತ, ಮೆಣಸಿನಕಾಯಿ, ಸಜ್ಜೆ ಹಾಗೂ ಇನ್ನಿತರ ಬೆಳೆ ಬೆಳೆದಿದ್ದಾರೆ.

ಬಿತ್ತನೆ ಸೇರಿದಂತೆ ಕೃಷಿ ಚಟುವಟಿಕೆಗೆ ರೈತರು ಸಾಲ ಮಾಡಿದ್ದಾರೆ. ಕಾಲುವೆ ನೀರು ನಂಬಿ ಉತ್ತಮ ಬೆಳೆ ನಿರೀಕ್ಷೆಯಲ್ಲಿದ್ದಾರೆ. ಆದರೆ ಸಮರ್ಪಕವಾಗಿ ನೀರು ಸಿಗದಿದ್ದರೆ ತೊಂದರೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಏ. 10ರ ವರೆಗೆ ಕಾಲುವೆಗೆ ನೀರು ಹರಿಸಬೇಕು. ಅಲ್ಲದೇ ಅಗ್ನಿ ಬಳಿ ಕಾಲುವೆ ದುರಸ್ತಿಗೆ ಸೂಕ್ತ ಕ್ರಮ ತೆಗೆದುಕೊಂಡು ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಜಿಲ್ಲಾ ಗೌರವ ಅಧ್ಯಕ್ಷ ಹನುಮಗೌಡ ಮಾತನಾಡಿ, ಕಾಲುವೆ ಕೊನೆ ಭಾಗದ ಜಮೀನುಗಳಿಗೆ ನೀರು ತಲುಪಿಸಬೇಕು. ಮುಂಬರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ರೈತ ಮುಖಂಡರನ್ನು ಸದಸ್ಯರಾಗಿ ನೇಮಿಸಬೇಕು. ಒಂದೊಮ್ಮೆ ರೈತ ಸಂಘದ ಎಲ್ಲ ಬೇಡಿಕೆಗಳು ಈಡೇರದೆ ಇದ್ದಲ್ಲಿ ಮುಂಬರುವ ದಿನಗಳಲ್ಲಿ ಸಂಘದ ವತಿಯಿಂದ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿದ ಪ್ರಭಾರಿ ಮುಖ್ಯ ಇಂಜಿನಿಯರ್‌ ರಂಗರಾಮ ಮಾತನಾಡಿ, 9 ಟಿಎಂಸಿ ಅಡಿ ನೀರನ್ನು ನೀರಾವರಿಗೆ ಬಳಕೆ ಮಾಡುವಂತೆ ಸರ್ಕಾರದಿಂದ ಈಗಾಗಲೇ ಸೂಚನೆ ಬಂದಿದೆ. ಅದರಂತೆ 4 ವಲಯದ ಮುಖ್ಯ ಇಂಜಿನಿಯರಗಳು ಸೇರಿ ಮಾ.19ರಂದು ಸಭೆ ನಡೆಸಿ ಎಲ್ಲಿಯವರೆಗೆ ಕಾಲುವೆಗಳಿಗೆ ನೀರು ಹರಿಸಲು ಸಾಧ್ಯ ಎಂಬುದನ್ನು ಪ್ರಕಟಿಸಲಾಗುವುದು ಮತ್ತು ನಿಮ್ಮ ಸಂಘಟನೆ ಇನ್ನುಳಿದ ಬೇಡಿಕೆಗಳನ್ನು ಪರಿಶೀಲಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಹಾಗೂ ಸಂಬಂಧಪಟ್ಟವರಿಗೆ ಉತ್ತರಿಸುವುದಾಗಿ ಭರವಸೆ ನೀಡಿದರು.

ಎಇಇ ಆರ್‌.ಎಲ್‌. ಹಳ್ಳೂರ, ಟಿ.ಎನ್‌. ರಾಮಚಂದ್ರ, ಟಿ.ಎ. ಅಜೀತಕುಮಾರ, ಪಿಎಸ್‌ಐ ಅರ್ಜುನಪ್ಪ, ರೈತ ಮುಖಂಡರಾದ ಹಣಮಂತರಾಯ ಮಡಿವಾಳರ, ಸಾಹೇಬಗೌಡ ಮದಲಿಂಗನಾಳ, ತಿಪ್ಪಣ್ಣ ಜಂಪಾ, ಮಲ್ಲಿಕಾರ್ಜುನ, ಚಂದ್ರು ಗೊಡ್ರಿಹಾಳ, ಶ್ರೀಶೈಲಗೌಡ, ಸೋಮನಗೌಡ, ಈರನಗೌಡ, ಚಿನ್ನಪ್ಪ ಡೊಳ್ಳಿ, ಬಸವರಾಜ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮಗಳ ರೈತ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.