Narayanapura : ನದಿಯಲ್ಲಿ ಈಜಲು ಹೋದ ಯುವಕ ನೀರು ಪಾಲು
Team Udayavani, Aug 24, 2024, 6:51 PM IST
ನಾರಾಯಣಪುರ: ಕೃಷ್ಣಾ ನದಿಗೆ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ಘಟನೆ ಶುಕ್ರವಾರ ಸಂಜೆ(ಆ 23) ಸಮೀಪದ ಶ್ರೀ ಛಾಯಾ ಭಗವತಿಯ ತೀರದಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ನೀರು ಪಾಲದ ಮಹ್ಮದ್ ಆದಿಲ್ (27) ಎಂಬಾತನಾಗಿದ್ದು, ವಿಜಯಪುರ ಜಿಲ್ಲೆಯ ತಾಳಿಕೋಟಿಯಿಂದ ಸ್ನೇಹಿತರೊಂದಿಗೆ ಶುಕ್ರವಾರ ಛಾಯಾ ಭಗವತಿ ವೀಕ್ಷಣೆಗೆ ಆಗಮಿಸಿದ್ದ ಈಜಲು ನದಿಗೆ ಇಳಿದಾಗ ನೀರಿನ ಸೆಳುವಿಗೆ ಸಿಲುಕಿ ನೀರು ಪಾಲಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಸ್ಥಳೀಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ಕುರಿತು ಮಾಹಿತಿ ಪಡೆದಿದ್ದು, ಎಲ್ಲರೂ ದಿಲ್ಲಿ ಮೂಲದವರು ತಾಳಿಕೋಟಿಯಲ್ಲಿ ಕಳೆದ ಹಲವು ವರ್ಷಗಳಿಂದ ಕಟಿಂಗ್ ಶಾಪ್ ನಡೆಸುತ್ತಿದ್ದರು. ಆದಿಲ್ ಗೆ ಪತ್ನಿ, ಪುತ್ರ, ಇಬ್ಬರು ಪುತ್ರಿ ಇದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನದಿಯಲ್ಲಿ ನೀರಿನ ಹರಿವು ಇದ್ದು ಯುವಕನ ಶೋಧ ಕಾರ್ಯವನ್ನು ಸ್ಥಳೀಯ ಮೀನುಗಾರರು, ಅಗ್ನಿ ಶಾಮಕದಳದವರು ನಡೆಸಿದ್ದಾರೆ ಶೋಧ ಕಾರ್ಯವು ಶನಿವಾರವು ಸಂಜೆ ವರೆಗೂ ಮುಂದುವರೆದಿದೆ ಇನ್ನು ಆದಿಲ್ ಪತ್ತೆಯಾಗಿಲ್ಲ ಎಂದು ಸ್ಥಳೀಯ ಪೊಲೀಸ್ ಠಾಣೆಯ ಎಎಸ್ಐ ಬಾಬು ರಾಠೋಡ ತಿಳಿಸಿದ್ದಾರೆ. ಎಚ್.ಸಿ ಸಂಗಪ್ಪ ಮೇಗಲಮನಿ, ಸಿದ್ದು ಪಿ.ಸಿ, ಎಚ್.ಜಿ. ವೆಂಕಟೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.