![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Oct 27, 2018, 3:30 PM IST
ಯಾದಗಿರಿ: ಬಾಲ್ಯ ವಿವಾಹ ಒಂದು ಸಾಮಾಜಿಕ ಪಿಡಗು, ಇದನ್ನು ಎಲ್ಲಾ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳ ಪರಸ್ಪರ ಸಹಕಾರದಿಂದ ತಡೆಗಟ್ಟಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧಿಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಅರ್ಜುನ ಬನಸೊಡೆ ಹೇಳಿದರು.
ಜಿಲ್ಲಾ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಆಶ್ರಯದಲ್ಲಿ ಗುರುವಾರ ಜಿಲ್ಲಾ, ತಾಲೂಕು ಮಟ್ಟದ ಬಾಲ್ಯ ವಿವಾಹ ನಿಷೇಧ ಅಧಿಕಾರಿಗಳು, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರು, ಪ್ರೌಢಶಾಲಾ ಮುಖ್ಯ ಗುರುಗಳು, ವಸತಿ ನಿಲಯ ಮೇಲ್ವಿಚಾರಕರಿಗೆ ಬಾಲ್ಯ ವಿವಾಹ ನಿಷೇಧ-2006 ಹಾಗೂ ಕರ್ನಾಟಕ ತಿದ್ದುಪಡಿ
ಕಾಯ್ದೆ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹಣಮಂತ್ರಾಯ ಕರಡಿ ಮಾತನಾಡಿ, ಪಾಲಕರಿಗೆ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಮನವರಿಕೆ ಮಾಡಬೇಕು. ಜಿಲ್ಲೆಯಾದ್ಯಂತ ಬಾಲ್ಯ ವಿವಾಹ ತಡೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳುವುದರ ಮೂಲಕ
ಜಾಗೃತಿ ಮೂಡಸಬೇಕಿದೆ ಎಂದರು.
ಜಿಲ್ಲಾ ಬಾಲ್ಯ ವಿವಾಹ ತಡೆ ಮತ್ತು ಸಮನ್ವಯ ಸಮಿತಿ ಸದಸ್ಯೆ ನಾಗರತ್ನಾ ಅನಪುರ ಮಾತನಾಡಿ, 7ನೇ ತರಗತಿ ಉತ್ತೀರ್ಣರಾಗಿ 8ನೇ ತರಗತಿಯಿಂದ ವಂಚಿತರಾದ ಮಕ್ಕಳನ್ನು ಅನುಪಾಲನೆ ಮಾಡುವುದರ ಮೂಲಕ ಬಾಲ್ಯವಿವಾಹ ತಡೆಯಬಹುದಾಗಿದೆ ಎಂದು ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಕಾಂತ ಕುಲಕರ್ಣಿ ಬಾಲ್ಯ ವಿವಾಹ ನಿಷೇಧ-2006 ಹಾಗೂ ಕರ್ನಾಟಕ ತಿದ್ದುಪಡಿ ಕಾಯ್ದೆ ಕುರಿತು ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಭರತೇಶ ಶೀಲವಂತರ ತರಬೇತಿ ನೀಡಿದರು.
ಡಿವೈಎಸ್‌ಪಿ ಯು. ಶರಣಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಠ್ಠಲ್ ಮದೂರ, ಜಿಲ್ಲಾ ಬಾಲ್ಯವಿವಾಹ ತಡೆ ಮತ್ತು ಸಮನ್ವಯ ಸಮಿತಿ ಸದಸ್ಯ ಫಾದರ್‌ಜೀ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಗುರುಲಿಂಗಪ್ಪ ಮಿಣಜಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ್ ಬಿರಾದಾರ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ರಾಜೇಂದ್ರ ನಿರೂಪಿಸಿದರು. ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ ಜಿಲ್ಲಾ ಸಂಯೋಜಕ ಕೆ. ಯಲ್ಲಪ್ಪ ಸ್ವಾಗತಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಚಂದ್ರಕಾಂತ ಚಲುವಾದಿ ವಂದಿಸಿದರು.
You seem to have an Ad Blocker on.
To continue reading, please turn it off or whitelist Udayavani.