ಬ್ಯಾಂಕ್‌ ಅಧಿಕಾರಿಳಿಂದ ನಿರ್ಲಕ್ಷ್ಯ


Team Udayavani, Jan 21, 2019, 11:42 AM IST

yad-1.jpg

ಸುರಪುರ: ರೈತರಿಗೆ ಮತ್ತು ವಿವಿಧ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಸಾಲ ಸೌಲಭ್ಯ ಕಲ್ಪಿಸುವಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿ ಶೋಷಿತ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಶನಿವಾರ ರಸ್ತೆತಡೆ ನಡೆಸಿ ಪ್ರತಿಭಟಿಸಿದರು.

ರಸ್ತೆ ತಡೆಯಿಂದ ಕೆಲ ಸಮಯ ಸಂಚಾರದಲ್ಲಿ ಸಮಸ್ಯೆ ಉಂಟಾಯಿತು. ನಂತರ ಪೊಲೀಸರ ಮನವಿ ಮೇರೆಗೆ ರಸ್ತೆ ತಡೆ ಕೈ ಬಿಟ್ಟು ಪ್ರತಿಭಟನೆ ಮುಂದುವರೆಸಿದರು. ಬ್ಯಾಂಕ್‌ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿದ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ವೆಂಕೋಬ ದೊರೆ ಮಾತನಾಡಿ, ಸರ್ಕಾರದ ಮುದ್ರಾ, ಹೈನುಗಾರಿಕೆ, ಕುರಿ ಸಾಕಾಣಿಕೆ ಸೇರಿದಂತೆ ಹಿಂದುಳಿದ ವರ್ಗದ ವಿವಿಧ ಅಭಿವೃದ್ಧಿ ನಿಗಮದ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುವಲ್ಲಿ ಬ್ಯಾಂಕ್‌ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರಿಂದ ಆಯ್ಕೆಯಾದ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡದೆ ಹೋದರೆ ಸರ್ಕಾರ ಯೋಜನೆಗಳನ್ನು ಯಾಕೆ ಅನುಷ್ಠಾನಗೊಳಿಸಬೇಕು. ಸರ್ಕಾರದ ಅನೇಕ ಯೋಜನೆಗಳು ಬಡವರಿಗೆ ತಲುಪುತ್ತಿಲ್ಲ. ಇದಕ್ಕೆ ಬಾಂಕ್‌ ಮತ್ತು ಅನುಷ್ಠಾನ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ದೂರಿದರು.

ಸಾಲ ಮನ್ನಾ ಕೆಲಸವನ್ನು ಮುಂದಿಟ್ಟುಕೊಂಡು ಬ್ಯಾಂಕ್‌ ಅಧಿಕಾರಿಗಳು ತಪ್ಪು ಮಾಹಿತಿ ನೀಡುವ ಮೂಲಕ ರೈತರು ಮತ್ತು ಯೋಜನೆಯ ಫಲಾನುಭವಿಗಳ ದಾರಿ ತಪ್ಪಿಸುತ್ತಿದ್ದಾರೆ. ಯೋಜನೆ ಫಲಾನುಭವಿಗಳಿಗೆ ಸಾಲ ನೀಡದೆ ಉದ್ದೇಶ ಪೂರ್ವಕವಾಗಿ ಸತಾಯಿಸುತ್ತಿದ್ದಾರೆ. ಸಾಲ ಮನ್ನಾ ಯೋಜನೆ ಲಾಭ ಪಡೆದ ರೈತರಿಗೆ ಮರು ಸಾಲ ನೀಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಇದರಿಂದ ರೈತರು ಆತಂಕಕೀಡಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾಂಕ್‌ ಅಧಿಕಾರಿಗಳ ಸಭೆ ಕರೆದು ಯೋಜನೆ ಫಲಾನುಭವಿ ಮತ್ತು ರೈತರಿಗೆ ಮರು ಸಾಲ ವಿತರಣೆ ಮಾಡಲು ಕಟ್ಟುನಿಟ್ಟಾಗಿ ಆದೇಶಿಸುವುದು ಸೇರಿದಂತೆ ಎಲ್ಲಾ ಸಮಸ್ಯೆಗಳನ್ನು ವಾರದ ಒಳಗಾಗಿ ಪರಿಹರಿಸಬೇಕು. ಇಲ್ಲವಾದಲ್ಲಿ ಸುರಪುರ ಬಂದ್‌ಗೆ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಜಿಲ್ಲಾಧಿಕಾರಿಗೆ ಬರೆದ ಮನವಿಯನ್ನು ತಹಶೀಲ್ದಾರ್‌ ರಾಮು ಪೂಜಾರಿಯವರಿಗೆ ಸಲ್ಲಿಸಿದರು.

ಗೋಪಾಲ ಬಾಗಲಕೋಟೆ, ಮಾನಯ್ಯ ದೊರೆ, ದೇವಪ್ಪ ದೇವರಮನಿ, ಕೃಷ್ಣಾ ದಿವಾಕರ, ಕೇಶಣ್ಣ ದೊರೆ, ಶ್ರೀನಿವಾಸ ನಾಯಕ, ತಿರುಪತಿ ದೊರೆ, ಬಸವರಾಜ. ಅಂಬ್ರೇಶ ವೆಂಕಟಾಪುರ ಇದ್ದರು.

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.